Categories: ಮಂಗಳೂರು

ಮಂಗಳೂರು: ವೈದ್ಯಕೀಯ ನಿರ್ಲಕ್ಷ್ಯಕ್ಕೆ ಕಾಲು ಕಳೆದುಕೊಂಡ ನೌಷಾದ್‌ಗೆ ಪರಿಹಾರ ಒದಗಿಸುವಂತೆ ಆಗ್ರಹ

ಮಂಗಳೂರು: ವೈದ್ಯಕೀಯ ನಿರ್ಲಕ್ಷ್ಯಕ್ಕೆ ಕಾಲು ಕಳೆದುಕೊಂಡ ಕುರ್ನಾಡು ನೌಷಾದ್‌ಗೆ ಪರಿಹಾರ ಒದಗಿಸಬೇಕು. ತಪ್ಪಿತಸ್ಥ ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆ ಮುಂದಿಟ್ಟು ಡಿವೈಎಫ್‌ಐ ದ.ಕ.ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ದೇರಳಕಟ್ಟೆ ಜಂಕ್ಷನ್‌ನಲ್ಲಿ ಸಾಮೂಹಿಕ ಧರಣಿ ಸತ್ಯಾಗ್ರಹ ನಡೆಯಿತು. ಉಳ್ಳಾಲ ತಾಲೂಕು ವ್ಯಾಪ್ತಿಯ ಹಲವಾರು ಸಂಘ ಸಂಸ್ಥೆಗಳ ಯುವಕರು ತಂಡಗಳಾಗಿ ಧರಣಿಯಲ್ಲಿ ಭಾಗಿಗಳಾಗಿ ನೌಷಾದ್ ಪರವಾಗಿ ಧ್ವನಿ ಎತ್ತಿದರು.

ಮಧ್ಯಾಹ್ನದ ವೇಳೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ಪ್ರತಿನಿಧಿಗಳು ಧರಣಿ ಸ್ಥಳಕ್ಕೆ ಆಗಮಿಸಿ ಸಂಘಟನೆಯ ನಿಯೋಗವನ್ನು ಮಾತುಕತೆಗೆ ಆಹ್ವಾನಿಸಿದರು. ಸಂತ್ರಸ್ತ ನೌಷಾದ್ ಜೊತೆ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ನೇತೃತ್ವದ ನಿಯೋಗ ಕೆ ಎಸ್ ಹೆಗ್ಡೆ ಆಸ್ಪತ್ರೆಗೆ ತೆರಳಿ ಕೆ ಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಡೀನ್ ರೊಂದಿಗೆ ಬೇಡಿಕೆಯ ಕುರಿತು ಚರ್ಚಿಸಿತು.

ಮಾತುಕತೆಯ ತರುವಾಯ ನೌಷಾದ್‌ ಕುರ್ನಾಡುಗೆ ನ್ಯಾಯಯುತ ಪರಿಹಾರ ನೀಡುವ ಕುರಿತು ತೀರ್ಮಾನಕ್ಕೆ ಬರಲು ಆಡಳಿತ ಮಂಡಳಿಗೆ ಒಂದು ವಾರದ ಸಮಯಾವಕಾಶ ನೀಡುವಂತೆ ವಿನಂತಿಸಿತು. ಅದಕ್ಕೆ ಒಪ್ಪಿಗೆ ಸೂಚಿಸಿದ ಡಿವೈಎಫ್‌ಐ ದ.ಕ. ಜಿಲ್ಲಾ ಸಮಿತಿ ಒಂದು ವಾರಗಳ ಕಾಲ ಹೋರಾಟವನ್ನು ತಡೆಹಿಡಿಯುವುದಾಗಿ ಘೋಷಿಸಿ ಧರಣಿಯನ್ನು ಮುಕ್ತಾಯಗೊಳಿಸಿತು.

ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಧರಣಿಯನ್ನು ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಬಿ ಕೆ ಇಮ್ಮಿಯಾಜ್, ಸಿಪಿಐ ಮುಖಂಡ ವಿ ಕುಕ್ಯಾನ್, ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಯಾದವ ಶೆಟ್ಟಿ, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್, ರೈತಸಂಘದ ಕೃಷ್ಣಪ್ಪ ಸಾಲ್ಯಾನ್, ದಲಿತ ಸಂಘರ್ಷ ಸಮಿತಿಯ ಎಂ ದೇವದಾಸ್, ಸಾಮರಸ್ಯ ಮಂಗಳೂರಿನ ಮಂಜುಳಾ ನಾಯಕ್ ಧರಣಿಯನ್ನುದ್ದೇಶಿಸಿ ಮಾತನಾಡಿದರು.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

22 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

39 mins ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

53 mins ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

1 hour ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

2 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago