ಮಂಗಳೂರು

ಮಂಗಳೂರು: ಯೋಗಾಭ್ಯಾಸದಿಂದ ಆರೋಗ್ಯ ಭಾಗ್ಯ – ಡಾ.ದಿನೇಶ್ ಕುಮಾರ್.ವೈ.

ಮಂಗಳೂರು: ಆರೋಗ್ಯ ಮನುಷ್ಯನ ನಿಜವಾದ  ಸಂಪತ್ತು. ಆರೋಗ್ಯ ಭಾಗ್ಯವನ್ನು ಯೋಗದಿಂದ ಸಾಧಿಸಬಹುದು. ಜನರನ್ನು ರೋಗ ಮುಕ್ತವಾಗಿಸಲು ಯೋಗ ಉತ್ತಮ ಮಾರ್ಗ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್.ವೈ.ಹೇಳಿದರು.

ನಗರದ ಲಾಲ್‌ಬಾಗ್ ಬಳಿಯ ವನಿತಾ ಪಾರ್ಕ್‌ನಲ್ಲಿ ದ.ಕ. ಜಿಲ್ಲಾ ರೆಡ್‌ಕ್ರಾಸ್  ಘಟಕ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ದೇವಿಕಾ ಯೋಗ ಕ್ಲಾಸ್ ಮತ್ತು ಮಂಗಳೂರು ನಾರ್ತ ಇನ್ನರ್‌ವ್ಹೀಲ್ ಕ್ಲಬ್ ವತಿಯಿಂದ ಮಹಿಳೆಯರಿಗಾಗಿ ಹಮ್ಮಿಕೊಂಡ ಉಚಿತ ಯೋಗ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಆರೋಗ್ಯವಂತ  ಬದುಕಿಗೆ ಶುದ್ಧ ಗಾಳಿ, ಉತ್ತಮ ಪರಿಸರವೂ ಅಗತ್ಯವಿದೆ. ನಗರದ ಪಾರ್ಕ್‌ಗಳ ಅಭಿವೃದ್ಧಿಯೂ ಸೇರಿದಂತೆ ಪರಿಸರ ಸಂರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿಯಾಗಿದೆ. ಅರಣ್ಯ ಸಂರಕ್ಷಣೆ ಜತೆಗೆ ನಗರ ಪ್ರದೇಶವನ್ನು ಹಸಿರಾಗಿಸಲು ಅರಣ್ಯ ಇಲಾಖೆ ವಿಶೇಷ ಆದ್ಯತೆ ಕಲ್ಪಿಸಿದೆ ಎಂದು ಅವರು ಹೇಳಿದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ  ಶ್ರೀನಿವಾಸ ನಾಯಕ್‌ಇಂದಾಜೆ ಮಾತನಾಡಿ ವನಿತಾ ಪಾರ್ಕ್‌ನಲ್ಲಿ ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಯೋಗ ಶಿಬಿರ ಆಯೋಜಿಸಲಾಗುವುದು ಎಂದರು. ದೇವಿಕಾ ಯೋಗ ಕ್ಲಾಸ್  ನಿರ್ದೇಶಕಿ ದೇವಿಕಾ ಪುರುಷೋತ್ತಮ ಇವರನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಶಿಬಿರಾರ್ಥಿಗಳ ಪರವಾಗಿ ಸನ್ಮಾನಿಸಲಾಯಿತು.

ನಿವೃತ್ತ ಎಡಿಸಿ ಪ್ರಭಾಕರ ಶರ್ಮ, ದ.ಕ.ರೆಡ್‌ಕ್ರಾಸ್ ಸೊಸೈಟಿಯ ಆಡಳಿತ ಮಂಡಳಿ ನಿರ್ದೇಶಕ ಪಿ.ಬಿ.ಹರೀಶ್ ರೈ, ರವೀಂದ್ರನಾಥ ಉಚ್ಚಿಲ, ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ, ಖಜಾಂಜಿ ಬಿ.ಎನ್.ಪುಷ್ಪರಾಜ್, ಇನ್ನರ್ ವ್ಹೀಲ್ ಕ್ಲಬ್ ಮಂಗಳೂರು  ನಾರ್ತ್ ಅಧ್ಯಕ್ಷೆ ವಸಂತಿ ಕಾಮತ್, ಕಾರ್ಯದರ್ಶಿ ಗೀತಾ ರೈ,  ದೇವಿಕಾ ಯೋಗ ಕ್ಲಾಸ್  ನಿರ್ದೇಶಕಿ ದೇವಿಕಾ ಪುರುಷೋತ್ತಮ  ಉಪಸ್ಥಿತರಿದ್ದರು. ಪೂರ್ಣಿಮಾ ಪೇಜಾವರ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಶಿಬಿರಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು.

ವನಿತಾ ಪಾರ್ಕ್‌ನಲ್ಲಿ 60 ದಿನಗಳ ಕಾಲ ನಡೆದ ಉಚಿತ ಯೋಗ ಶಿಬಿರದಲ್ಲಿ 55 ಮಹಿಳೆಯರು ಭಾಗವಹಿಸಿದ್ದರು.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

7 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

8 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

9 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago