Categories: ಮಂಗಳೂರು

ಮಂಗಳೂರು: ಜಿಲ್ಲಾ ಪಂಚಾಯತ್ ಸಿಇಒ ಡಾ.ಕುಮಾರ್ ಅವರಿಗೆ ರಾಜ್ಯಮಟ್ಟದ ಪ್ರಶಸ್ತಿ

ಮಂಗಳೂರು: ಭಾರತ ಚುನಾವಣಾ ಆಯೋಗವು 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು, “Nothing like voting, I vote for sure” “ ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ” ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸುವಂತೆ ನಿರ್ದೇಶನ ನೀಡಿದ್ದು, ಅದರಂತೆ ರಾಜ್ಯ ಮಟ್ಟದಲ್ಲಿ ಜನವರಿ 25 ರಂದು ಸರ್‌ ಪುಟ್ಟಣ್ಣಚೆಟ್ಟಿ ಪುರಭವನ ಬೆಂಗಳೂರು ಇಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಮಟ್ಟದಲ್ಲಿ ವಿವಿಧ ವಿಭಾಗಗಲ್ಲಿ ಉತ್ತಮ ಸಾಧನೆ ಮಾಡಿದ ಅಧಿಕಾರಿ ಸಿಬ್ಬಂದಿಗಳನ್ನು ಆಯ್ಕೆ ಮಾಡಲಾಗಿದ್ದು, ಅದರಂತೆ   ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಡಾ|ಕುಮಾರ್  ರಾಜ್ಯಮಟ್ಟದ ಪ್ರಶಸ್ತಿಗೆ  ಆಯ್ಕೆಯಾಗಿದ್ದರು. ಜಿಲ್ಲಾ ಪಂಚಾಯತ್ ಸಿಇಒ ವಿಭಾಗದಲ್ಲಿ ಆಯ್ಕೆಯಾದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಡಾ|ಕುಮಾರ್ ಅವರಿಗೆ ಕರ್ನಾಟಕ ರಾಜ್ಯದ ರಾಜ್ಯಪಾಲರು ಪ್ರಶಸ್ತಿ ನೀಡಿದರು.

ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಮಟ್ಟದಲ್ಲಿ ಸ್ವೀಪ್ (ವ್ಯವಸ್ಥಿತ ಮತದಾರರ ಶಿಕ್ಷಣ ಮತ್ತು ಮತದಾರರ ಭಾಗವಹಿಸುವಿಕೆ) ನೋಡಲ್ ಅಧಿಕಾರಿಗಳಾಗಿದ್ದು ಚುನಾವಣಾ ಸಾಕ್ಷರತಾ ಕ್ಲಬ್ ಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸಿ ಅರ್ಹ ಮತದಾರರ ನೋಂದಾಣಿ ಹಾಗೂ ಮತದಾನದ ಪ್ರಮಾಣವನ್ನು ಹೆಚ್ಚಿಸುವ ಕಾರ್ಯವನ್ನು ಕೈಗೊಳ್ಳುತ್ತಾರೆ. ಅವುಗಳಲ್ಲಿ ಯುವ ಮತದಾರರ ನೊಂದಾಣಿ, ವಿಶೇಷ ಚೇತನರು, ಇತರೆ ವರ್ಗಗಳ ಮತದಾರರ ನೊಂದಣಿ ಪ್ರಮುಖವಾಗಿವೆ. 2022 ರಲ್ಲಿ ಅತ್ಯುತ್ತಮ ಸಾಧನೆಯನ್ನು ಮಾಡಿದ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ರಾಜ್ಯ ಮಟ್ಟದ ಪ್ರಶಸ್ತಿಯನ್ನು ರಾಷ್ಟೀಯ ಮತದಾರರ ದಿನಾಚರಣೆಯ ಅಂಗವಾಗಿ ನೀಡಲಾಯಿತು.

ನ್ಯೂಸ್ ಕನ್ನಡದ ಜೊತೆ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ  ಡಾ|ಕುಮಾರ್  “ಕೆಲಸವನ್ನು ಮಾಡಿದ್ದೇವೆ ಆ ಮಾಡಿದ ಕೆಲಸವನ್ನು ಗುರುತಿಸಿ ಪ್ರಶಸ್ತಿ ಸಿಕ್ಕಿದೆ. ಚುನಾವಣಾ ಆಯೋಗಕ್ಕೆ ಸಂಬಂಧಿಸಿದಂತೆ ಸ್ಟ್ರೀಟ್ ಆಕ್ಟಿವಿಟಿ ನಲ್ಲಿ ಜನರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಯಕ್ಷಗಾನ ಕಲಾವಿದರನ್ನು ರೈಲ್ವೆ ಸ್ಟೇಷನ್ ಬಸ್ ನಿಲ್ದಾಣ ಕಾಲೇಜುಗಳಿಗೆ ಕಳುಹಿಸಿ ಯುವಜನರಲ್ಲಿ ಮತದಾನದ ಜಾಗೃತಿಯನ್ನು ಮೂಡಿಸಿದ್ದೇವೆ ಇದರಿಂದಾಗಿ ನಮ್ಮ ಜಿಲ್ಲೆಯಲ್ಲಿ ಯಂಗ್ ಎನ್ರೋಲ್ಮೆಂಟ್ ಚನ್ನಾಗಿದೆ ಆಗಿದೆ. ನಮಗೆ ಪ್ರಶಸ್ತಿ ಸಿಗುವುದರ ಜೊತೆಗೆ ಜವಾಬ್ದಾರಿಗಳು ಕೂಡ ಇನ್ನೂ ಹೆಚ್ಚಾಗಿವೆ, ಈ ಹೆಚ್ಚಾದ ಜವಾಬ್ದಾರಿಯನ್ನು ಇನ್ನೂ ಚೆನ್ನಾಗಿ ನಿಭಾಯಿಸಿಕೊಂಡು ಹೋಗಬೇಕಾಗಿದೆ” ಎಂದರು.

Sneha Gowda

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

2 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

2 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

2 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

3 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

3 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

3 hours ago