Categories: ಮಂಗಳೂರು

ಮಂಗಳೂರು: ನನ್ನ ಶಾಸಕ ಅವಧಿಯಲ್ಲಿ ಬೆಂಗ್ರೆ ಪ್ರದೇಶವನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸಿದ್ದೆ

ಮಂಗಳೂರು: ನನ್ನ ಶಾಸಕ ಅವಧಿಯಲ್ಲಿ ಬೆಂಗ್ರೆ ಪ್ರದೇಶವನ್ನು ಕಂದಾಯ ಗ್ರಾಮವಾಗಿ ಪರಿವರ್ತಿಸಿ, ಕಂದಾಯ ಸರ್ವೆ ನಂಬರ್ ಕೊಡಿಸಿದೆ. ಆ ಬಳಿಕ 2400 ಮಂದಿಯಲ್ಲಿ 1500 ಮಂದಿಗೆ ಹಕ್ಕುಪತ್ರ ನೀಡಲಾಗಿತ್ತು. ಈ ಜಾಗಗಳಿಗೆ ಮನಪಾದಿಂದ ಖಾತೆಯನ್ನು ಮಾಡಿಸಲಾಗಿದ್ದು, ಈ ದಾಖಲೆಗಳ ಮೂಲಕ ಸರಕಾರದ ಸೌಲಭ್ಯ, ಮನೆಗಳಿಗೆ ಬ್ಯಾಂಕ್ ಸಾಲವನ್ನು ಕೂಡ ಪಡೆದಿದ್ದಾರೆ. ಇದೀಗ ಶಾಸಕರು ಹಳೆಯ ಹಕ್ಕುಪತ್ರಕ್ಕೆ ಸರ್ವೆ ನಂಬ್ರ ಜೋಡಿಸಿ ನೀಡುತ್ತಿದ್ದಾರೆ ಅಷ್ಟೇ. ಆದರೆ 20 ಮಂದಿಗೆ ಹಕ್ಕು ಪತ್ರ ವಿತರಣೆ ಎಂದು ಪ್ರಚಾರ ಪಡೆಯುತ್ತಿದ್ದಾರೆ ಎಂದು ಮಾಜಿ ಶಾಸಕ ಜೆ. ಆರ್. ಲೋಬೊ ಹೇಳಿದರು.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಚುನಾವಣೆ ಸಮೀಪಿಸುತ್ತಿದ್ದಾಗ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಬೆಂಗ್ರೆ ವ್ಯಾಪ್ತಿಯಲ್ಲಿ ಹಳೇ ಹಕ್ಕುಪತ್ರಕ್ಕೆ ಸರ್ವೆ ನಂಬರ್ ಸೇರಿಸಿ ನೀಡುತ್ತಿದ್ದು, ದೊಡ್ಡ ಸಾಧನೆ ಎಂಬ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ ಎಂದು ಮಾಜಿ ಶಾಸಕರು ಟೀಕಿಸಿದರು.

ಮೀನುಗಾರರು ಮತ್ತು ಬಂದರು ಅಭಿವೃದ್ಧಿಗೋಸ್ಕರ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ 2500 ಕೋಟಿ ರೂ. ಅನುದಾನ ತಂದಿದ್ದು, ಅದರಲ್ಲಿ ಮೀನುಗಾರರ ಅಭಿವೃದ್ಧಿಗೆ ಅನುದಾನವನ್ನೇ ಮೀಸಲಿಟ್ಟಿಲ್ಲ. ಮೀನುಗಾರಿಕಾ ಬಂದರು ಅಭಿವೃದ್ಧಿಯಾಗಿಲ್ಲ, 3ನೇ ಹಂತದ ಬಂದರು ಅಭಿವೃದ್ಧಿ ಕೆಲಸ ಸ್ಥಗಿತಗೊಂಡಿದೆ. ಮೀನುಗಾರರ ಬಗ್ಗೆ ಕಾಳಜಿಯಿದ್ದರೆ ಸ್ಮಾರ್ಟ್ ಸಿಟಿಯಲ್ಲಿ ಅನುದಾನ ಮಿಸಲಿಡಬೇಕಿತ್ತು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜೆ. ಸಲೀಂ, ಶೇಖರ್ ಸುವರ್ಣ, ಚೇತನ್ ಬೆಂಗ್ರೆ, ನವೀನ್ ಕರ್ಕೇರ, ಸತೀಶ್ ಕೋಟ್ಯಾನ್, ಕವಿತಾ ವಾಸು, ಅಬ್ದುಲ್, ಶರೀಫ್ ಉಪಸ್ಥಿತರಿದ್ದರು.

Ashika S

Recent Posts

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

7 mins ago

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

30 mins ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

49 mins ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

1 hour ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

1 hour ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

1 hour ago