ಮಂಗಳೂರು

ಮಂಗಳೂರು: ಉದ್ಯೋಗದ ಹಕ್ಕಿಗಾಗಿ ಹೋರಾಡಿ- ಸಂತೋಷ್ ಬಜಾಲ್

ಮಂಗಳೂರು: ಜಿಲ್ಲೆಯ ಯುವಜನತೆ ಧರ್ಮ ರಕ್ಷಣೆಯ ಹೆಸರಲ್ಲಿ ಪರಸ್ಪರ ಒಡೆದಾಡಿ ಬೀದಿ ಹೆಣವಾಗಿ ಸಾಯುವುದಕ್ಕಿಂತ ಉದ್ಯೋಗದ ಹಕ್ಕಿಗಾಗಿ ಹೋರಾಡಬೇಕು, ಜನರ ನೈಜ ಬದುಕಿನ ಪ್ರಶ್ನೆಯ ಇತ್ಯರ್ಥಕ್ಕಾಗಿ ಯಾವ ತ್ಯಾಗಕ್ಕೂ ಸಿದ್ದರಾಗಬೇಕೆಂದು ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಇಂದು ( 04-09-2022) ತುಳುನಾಡಿನ ಅಭಿವೃದ್ಧಿಯಲ್ಲಿ ತುಳುನಾಡಿನ ಯುವಜನತೆಗೆ ದೊಡ್ಡ ಪಾಲು, ಉದ್ಯೋಗ ಸೃಷ್ಟಿಸಿ, ನಿರುದ್ಯೋಗದಿಂದ ರಕ್ಷಿಸಿ ಎಂಬ ಘೋಷಣೆಯಡಿಯಲ್ಲಿ ನಡೆದ ಡಿವೈಎಫ್ಐ ಕಣ್ಣೂರು ಘಟಕದ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರತೀ ವರುಷ ಎರಡು ಕೋಟಿ ಉದ್ಯೋಗ ಸೃಷ್ಟಿಸುತ್ತೆವೆಂದು ಚುನಾವಣಾ ಪೂರ್ವ ಭರವಸೆ ನೀಡಿ ಅಧಿಕಾರಕ್ಕೇರಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಈವರೆಗೆ ಯಾವ ಉದ್ಯೋಗವನ್ನೂ ಸೃಷ್ಟಿಸದೆ ಈ ಅವಧಿಯಲ್ಲಿ ನಿರುದ್ಯೋಗ ಪ್ರಮಾಣ ಈ ಹಿಂದೆ ಕಂಡು ಕೇಳರಿಯದಷ್ಟು ಪ್ರಮಾಣದಲ್ಲಿ ಏರಿಕೆಯಾಗಿದೆ. ಮೊನ್ನೆ ಪ್ರಧಾನಿ ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲೂ ಹಲವು ಯೋಜನೆಗಳಿಗೆ ಚಾಲನೆ ನೀಡಿದರೂ ಅಂತಹ ಯೋಜನೆಗಳಲ್ಲಿ ಜಿಲ್ಲೆಯ ಯುವಜನತೆಗಾಗುವ ಯಾವ ಪ್ರಯೋಜನಗಳೂ ನಿರ್ಮಾಣಗೊಂಡಿಲ್ಲ. ಕೇವಲ ಸಾರ್ವಜನಿಕ ರಂಗದ ಉದ್ದಿಮೆಗಳನ್ನು ಕಾರ್ಪೊರೇಟ್ ಕಂಪೆನಿಗಳಿಗೆ ಮಾರಾಟ ಮಾಡಿ ಬಂಡವಾಳಶಾಹಿಗಳ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುವ ಮೂಲಕ ಜನವಿರೋಧಿ ಆಡಳಿತವನ್ನು ನಡೆಸಲಾಗುತ್ತಿದ್ದೆ. ಮೋದಿ ಸರಕಾರದ ಆಡಳಿತ ನೀತಿಗಳ ಬಗ್ಗೆ, ಕೋಮು ರಾಜಕಾರಣದ ವಿರುಧ್ದ ಮೊಲಗುವ ಧ್ವನಿಗಳನ್ನು ಹತ್ತಿಕ್ಕುವ ಪ್ರಯತ್ನವನ್ನು ನಿರಂತರವಾಗಿ ನಡೆಸುತ್ತಿದ್ದಾರೆ. ನಿರುದ್ಯೋಗ ಅನ್ನೋದು ಈಗ ದೇಶದ ಗಂಭೀರ ಸಮಸ್ಯೆಯಾಗಿದ್ದು ದೇಶದ ಯುವಜನತೆ ಉದ್ಯೋಗದ ಹಕ್ಕಿಗಾಗಿ ರಾಜಿರಹಿತ ಹೋರಾಟ ನಡೆಸಲು ಮುಂದಾಗಬೇಕಾಗಿದೆ.

ಮುಖ್ಯ ಅತಿಥಿಗಳಾಗಿ ಡಿವೈಎಫ್ಐ ಮಂಗಳೂರು ನಗರ ಅಧ್ಯಕ್ಷ ನವೀನ್ ಕೊಂಚಾಡಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಖಾದರ್ ಬೋರುಗುಡ್ಡೆ ವಹಿಸಿದ್ದರು. ಈ ಸಂದರ್ಭದಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಸಾಧಿಕ್ ಕಣ್ಣೂರು ಕಾರ್ಯದರ್ಶಿಯಾಗಿ ಹಾರೀಸ್ ಕುಂಡಾಲ ಮತ್ತು ಪದಾಧಿಕಾರಿಗಳನ್ನು ಆಯ್ಕೆಮಾಡಲಾಯಿತು.

Gayathri SG

Recent Posts

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

12 mins ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

32 mins ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

1 hour ago

8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌: ಗುಡುಗು, ಮಿಂಚು ಸಹಿತ ಮಳೆ ಸಾಧ್ಯತೆ

ರಾಜ್ಯಾದ್ಯಂತ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು,  40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ.

1 hour ago

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

2 hours ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

2 hours ago