News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಪಚ್ಚನಾಡಿಯ ಡಂಪಿಂಗ್ ಯಾರ್ಡ್ ನಲ್ಲಿ ಅಗ್ನಿ ಅನಾಹುತ, ಬೆಂಕಿ ನಿಯಂತ್ರಣಕ್ಕೆ ಕ್ರಮ

Fire breaks out at Pachanadi dumping yard, steps taken to control the fire
Photo Credit : News Kannada

ಮಂಗಳೂರು:  ನಗರದ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಸ್ಥಳಕ್ಕೆ ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರತಿ ವರ್ಷ ಬೇಸಿಗೆಯ ದಿನಗಳಲ್ಲಿ ಇಲ್ಲಿ ಬೆಂಕಿ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ತ್ಯಾಜ್ಯದಿಂದ ಮಿಥೇಲ್ ಗ್ಯಾಸ್ ಹೊರಹೊಮ್ಮಿದಾಗ ವಾತಾವರಣದ ಉಷ್ಣತೆಗೆ ಬೆಂಕಿ ಕಾಣಿಸಿಕೊಳ್ಳುವುದು ಸಾಮಾನ್ಯ ವಿಷಯವಾಗಿದೆ. ಇದೀಗ ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಶುಕ್ರವಾರ ಮತ್ತೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಜ್ವಾಲೆ ಇನ್ನಷ್ಟು ಪ್ರದೇಶಕ್ಕೆ ಹಬ್ಬುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗ್ನಿ ಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿದೆ.

ಈ ಸಂದರ್ಭದಲ್ಲಿ ಮಾದ್ಯಮದ ಜತೆ ಮಾತನಾಡಿದ ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು, ಪ್ರತಿ ವರ್ಷ ಬೇಸಿಗೆಯಲ್ಲಿ ಇಲ್ಲಿ ಬೆಂಕಿ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಮಿಥೇಲ್ ಗ್ಯಾಸ್ ಬಿಡುಗಡೆಯಾಗುವುದರಿಂದ ಬೆಂಕಿ ಹತ್ತಿಕೊಳ್ಳುತ್ತದೆ. ಬೆಂಕಿ ನಿಯಂತ್ರಿಸಲು 10 ಅಗ್ನಿಶಾಮಕ ದಳದ ವಾಹನಗಳನ್ನು ತರಿಸಲಾಗಿದೆ.

ಪಾಲಿಕೆ, ಅಗ್ನಿಶಾಮಕ ದಳ ಸಿಬ್ಬಂದಿ ಸೇರಿದಂತೆ ಸುಮಾರು 100 ಮಂದಿ ಬೆಂಕಿ ನಿಯಂತ್ರಣ ಕಾರ್ಯದಲ್ಲಿ ನಿರತರಾಗಿದ್ದಾರೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು