News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ, ಐವರು ಆರೋಪಿಗಳು ಎನ್ ಐಎ ವಶಕ್ಕೆ

Re-investigation of hate killings, govt to listen to cries of coastal people
Photo Credit : News Kannada

ಮಂಗಳೂರು: ಬಿಜೆಪಿ ಯುವ ಮುಖಂಡ ಸುಳ್ಯ ತಾಲ್ಲೂಕಿನ ಬೆಳ್ಳಾರೆ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಬಂಧಿಸಿರುವ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ ದವರು ವಿಚಾರಣೆಗಾಗಿ 6ದಿನಗಳ ಕಾಲ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪ್ರಕರಣದ ಆರೋಪಿಗಳಾದ ನೌಫಾಲ್ ,ಅಬೀದ್ ,ಮೊಹಮ್ಮದ್ ಸೈಯದ್ , ಅಬ್ದುಲ್ ಬಶೀರ್ ಮತ್ತು ರಿಯಾಜ್ ಅವರನ್ನು ಆಗಸ್ಟ್ 23ರವರೆಗೆ ಎನ್ಐಎ ವಶಕ್ಕೆ ಒಪ್ಪಿಸಲಾಗಿದೆ.

ಪ್ರವೀಣ ನೆಟ್ಟಾರು ಅವರನ್ನು ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ಭೀಕರವಾಗಿ ಕೊಲೆ ಮಾಡಲಾಗಿತ್ತು ಈ ಕುರಿತಂತೆ ಕಾನೂನು ಬಾಹಿರ ತಡೆ ಕಾನೂನಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಬೆಳ್ಳಾರೆ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು.

ಹೆಚ್ಚಿನ ತನಿಖೆಗಾಗಿ ರಾಜ್ಯ ಸರಕಾರ ಪ್ರಕರಣವನ್ನು ಎನ್ ಐಎಗೆ ಹಸ್ತಾಂತರಿಸಲಾಗಿತ್ತು ಈ ನೆಲೆಯಲ್ಲಿ ತನಿಖೆಯನ್ನು ಚುರುಕುಗೊಳಿಸಿರುವ ಎನ್ ಐಎ ಅಧಿಕಾರಿಗಳು ನಿನ್ನೆ ಐವರು ಆರೋಪಿಗಳನ್ನು ತಮ್ಮ ವಶಕ್ಕೆ ಪಡೆದುಕೊಂಡು ವಿಚಾರಣೆ ಆರಂಭಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು