Categories: ಮಂಗಳೂರು

ಮಂಗಳೂರು: 26ರಿಂದ ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ

ಮಂಗಳೂರು:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕಾ ಇಲಾಖೆ ಹಾಗೂ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿಯ ಸಂಯುಕ್ತಾಶ್ರಯದಲ್ಲಿ ಸಿರಿ ತೋಟಗಾರಿಕೆ ಸಂಘ ಮಂಗಳೂರು ಮತ್ತು ಇತರೆ ಅಭಿವೃದ್ಧಿ ಇಲಾಖೆಗಳ ಸಹಭಾಗಿತ್ವದಲ್ಲಿ ಫಲಪುಷ್ಪ ಪ್ರದರ್ಶನ 2023 ಅನ್ನು ಇದೇ ಜ.26ರಿಂದ 29ರ ವರೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಇದೇ ಜ.26ರ ಗುರುವಾರ ಬೆಳಿಗ್ಗೆ 10 ಗಂಟೆಗೆ ನಗರದ ಕದ್ರಿ ಉದ್ಯಾನವನದಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಫಲಪುಷ್ಪ ಪ್ರದರ್ಶನ ಉದ್ಘಾಟಿಸುವರು.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಹೂಗಳ ಮಾದರಿ ವಿನ್ಯಾಸ ಉದ್ಘಾಟಿಸುವರು.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಅವರು ತರಕಾರಿ ಪ್ರಾತ್ಯಕ್ಷತೆ ಉದ್ಘಾಟಿಸುವರು.ಶಾಸಕರಾದ ಡಿ. ವೇದವ್ಯಾಸ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಾ. ಭರತ್ ಶೆಟ್ಟಿ ವೈ., ಯು.ಟಿ. ಖಾದರ್, ರಾಜೇಶ್ ನಾಯ್ಕ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಉಮನಾಥ್ ಎ ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್. ಭೋಜೇಗೌಡ, ಕೆ. ಪ್ರತಾಪ್ ಸಿಂಹ ನಾಯಕ್, ಮಂಜುನಾಥ ಭಂಡಾರಿ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರ್, ಮಹಾನಗರಪಾಲಿಕೆ ಮೇಯರ್ ಜಯಾನಂದ ಅಂಚನ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಹಾಪ್ ಕಾಮ್ಸ್ ನ ಅಧ್ಯಕ್ಷ ಸೀತಾರಾಮ ಗಾಣಿಗ ಹಾಲಾಡಿ ಹಾಗೂ ಕದ್ರಿ ವಾರ್ಡ್ ನ ಕಾರ್ಪೋರೇಟರ್ ಶಕೀಲ ಕಾವ ಭಾಗವಹಿಸುವರು.

ಮಂಗಳೂರು ಪೋಲಿಸ್ ಆಯುಕ್ತ ಎನ್. ಶಶಿಕುಮಾರ್, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕುಮಾರ್, ಜಿಲ್ಲಾ ಪೆÇಲೀಸ್ ಅಧೀಕ್ಷಕ ಋಷಿಕೇಶ್ ಭಗವಾನ್ ಸೋನವಾಣೆ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ತೋಟಗಾರಿಕೆ ಇಲಾಖೆಯ ನಿರ್ದೇಶಕ ಕೆ. ನಾಗೇಂದ್ರ ಪ್ರಸಾದ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಭಾಸ್ಕರ ಎನ್., ತೋಟಗಾರಿಕೆ ಇಲಾಖೆಯ ನೋಡಲ್ ಅಧಿಕಾರಿಗಳೂ ಆಗಿರುವ ತೋಟಗಾರಿಕೆ ಜಂಟಿ ನಿರ್ದೇಶಕ ಶಕೀಲ್ ಅಹಮ್ಮದ್ ಹಾಗೂ ತೋಟಗಾರಿಕೆ ಜಂಟಿ ನೀರ್ದೆಶಕರಾದ ನಾಗರಾಜ್ ಎಂ. ವಿಶೇಷ ಉಪಸ್ಥಿತಿ ವಹಿಸುವರು.

Sneha Gowda

Recent Posts

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

9 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

27 mins ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

38 mins ago

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

1 hour ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

1 hour ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

1 hour ago