ಮಂಗಳೂರು: ನಗರದ ಕೆ.ಎಸ್. ರಾವ್ ರಸ್ತೆಯ ಲಾಡ್ಜ್ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮೈಸೂರಿನ ವಾಣಿ ವಿಲಾಸ ಬಡಾವಣೆಯ ದೇವೇಂದ್ರ (48), ಅವರ ಪತ್ನಿ ನಿರ್ಮಲಾ (45), ಅವಳಿ ಹೆಣ್ಮಕ್ಕಳಾದ ಚೈತ್ರಾ ಮತ್ತು ಚೈತನ್ಯ ಎಂದು ಗುರುತಿಸಲಾಗಿದೆ.
ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿಯೇ ಡೆತ್ನೋಟ್ ಪತ್ತೆಯಾಗಿದ್ದು, ಸಾಲದ ಸಮಸ್ಯೆಯಿಂದ ಮನನೊಂದು
ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಡೆತ್ನೋಟ್ನಲ್ಲಿ ಬರೆದಿದ್ದಾರೆ ಎಂದು ತಿಳಿದು ಬಂದಿದೆ. ನಾಲ್ವರಲ್ಲಿ ಓರ್ವ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಉಳಿದ ಮೂವರು ಮಲಗಿದ ಸ್ಥಿತಿಯಲ್ಲಿದ್ದರು. ಹೆಂಡತಿ ಮಕ್ಕಳಿಗೆ ವಿಷವುಣಿಸಿ ದೇವೇಂದ್ರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಶಂಕೆಯಿದೆ. ಬಂದರು ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಸಹಾಯವಾಣಿಗೆ ಕರೆ ಮಾಡಿ:
ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.