News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಶಕ್ತಿ ವಿದ್ಯಾಸಂಸ್ಥೆಯಲ್ಲಿ ಗೀತಾಜಯಂತಿ ಕಾರ್ಯಕ್ರಮ

Mangaluru: Geetha Jayanthi celebrations at Sakthi Vidya sansthan
Photo Credit : News Kannada

ಮಂಗಳೂರು: ಡಿ.1 ರಂದು ಮಂಗಳೂರಿನ ಶಕ್ತಿ ವಿದ್ಯಾಸಂಸ್ಥೆಯಲ್ಲಿ ಗೀತಾಜಯಂತಿ ಕಾರ್ಯಕ್ರಮ ಆಚರಿಸಲಾಯಿತು. ಈ ಕಾರ್ಯಕ್ರಮಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕೆನರಾಕಾಲೇಜಿನ ನಿವೃತ್ತ ಪ್ರಾಂಶುಪಾಲರೂ ಹಿರಿಯ ಸಂಸ್ಕೃತ ವಿದ್ವಾಂಸರಾದ ಡಾ. ಜಿ. ಎನ್ ಭಟ್ಟ ಮಾತನಾಡಿ ಭಗವದ್ಗೀತೆ ಮಾನಸಿಕ ಆರೋಗ್ಯ ಹಾಗೂ ಏಕಾಗ್ರತೆಗೆ ಸಹಕಾರಿ. ಭಗವದ್ಗೀತೆ ಎಲ್ಲವನ್ನೂ ಹೇಳಿದೆ.

ಯುದ್ಧದಿಂದ ವಿಮುಖನಾದ ಅರ್ಜುನನಿಗೆ ರಣರಂಗದಲ್ಲಿ ಕೃಷ್ಣ ಉಪದೇಶಿಸಿದ ಭಗವದ್ಗೀತೆ ನಮ್ಮ ಜೀವನದ ಎಲ್ಲ ಸಮಸ್ಯೆಗಳಿಗೂ ಪರಿಹಾರ ನೀಡುತ್ತದೆ. ಓಂಕಾರ ಧ್ಯಾನದಿಂದ ಅನೇಕ ರೋಗಗಳು ನಿವಾರಣೆ ಆಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಕ್ತಿ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಸಂಜಿತ್ ನಾಯಕ್, ಪ್ರಧಾನ ಸಲಹೇಗಾರ ರಮೇಶ್ ಕೆ, ಶಕ್ತಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲ ಪೃಥ್ವಿರಾಜ ಹಾಗೂ ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ವಿದ್ಯಾಕಾಮತ್.ಜಿ ಉಪಸ್ಥಿತರಿದ್ದರು.

ಪದವಿ ಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕ ರವಿಶಂಕರ ಹೆಗಡೆ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು