Categories: ಮಂಗಳೂರು

ಏರ್‌ಫೋರ್ಸ್ ಫ್ಲೈಯಿಂಗ್ ಬ್ರ್ಯಾಂಚ್ ಗೆ ಆಯ್ಕೆಯಾದ ಮಂಗಳೂರಿನ ಮನಿಷಾ

ಮಂಗಳೂರು: ಸಾಧಿಸುವ ಛಲ ಒಂದಿದ್ದರೆ ಏನೇ ಸವಾಲುಗಳು ಎದುರಾದರು ಸಾಧನೆಯ ಮೆಟ್ಟಿಲು ಏರುತ್ತಾರೆ ಅನ್ನೋದಕ್ಕೆ ನೈಜ ಉದಾಹರಣೆ ಆಗಿದ್ದಾರೆ ಮಂಗಳೂರಿನ ಹುಡುಗಿ ಮನಿಷಾ. ಇವರ ಈ ಸಾಧನೆಗೆ ಮನೆಯವರ ಬೆಂಬಲ ಇದ್ದು, ಜೊತೆಗೆ ತಂದೆಯ ದೇಶ ಸೇವೆಯ ಕನಸನ್ನು ಪೂರ್ಣ ಗೊಳಿಸುವ ಹಂಬಲ ಹೊಂದಿದ್ದ ಮನಿಷಾ ಏರ್‌ಫೋರ್ಸ್  ಫ್ಲೈಯಿಂಗ್ ಬ್ರ್ಯಾಂಚ್ ಗೆ ಆಯ್ಕೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಏರ್‌ಫೋರ್ಸ್ ಫ್ಲೈಯಿಂಗ್ ಬ್ರ್ಯಾಂಚ್ ಗೆ ಆಯ್ಕೆಯಾದ ಏಕೈಕ ವನಿತೆ ಅನ್ನೋ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮನಿಷಾ ಭಾರತೀಯ ಸ್ಟೇಟ್‌ಬ್ಯಾಂಕ್‌ನ ನಿವೃತ್ತ ಅಧಿಕಾರಿ ಮನೋಹರ ಶೆಟ್ಟಿ ಹಾಗೂ ಸರಕಾರಿ ಶಾಲೆ ಮುಖ್ಯೋಪಾಧ್ಯಾಯಿನಿ ಮಾಲತಿ ಶೆಟ್ಟಿ ದಂಪತಿಯ ಪುತ್ರಿ. ಅಶೋಕ ನಗರದ ನಿವಾಸಿಯಾಗಿದ್ದಾರೆ.

ಮನಿಷಾ ಜು.9ರಂದು ಭಾರತೀಯ ವಾಯುಪಡೆಯ ಫ್ಲೈಯಿಂಗ್ ಬ್ರ್ಯಾಂಚ್ ಗೆ ತರಬೇತಿಗಾಗಿ ಹೈದರಬಾದ್‌ಗೆ ತೆರಳಲಿದ್ದಾರೆ.
ಬಿಜೈ ಲೂರ್ಡ್ಸ್ ಸೆಂಟ್ರಲ್ ಸ್ಕೂಲ್ ಮತ್ತು ಸೈಂಟ್ ಅಲೋಶಿಯಸ್‌ನಲ್ಲಿ ಪ್ರಾಥಮಿಕ ಪ್ರೌಢ, ಮತ್ತು ಪಿಯುಸಿ ವಿದ್ಯಾಭ್ಯಾಸ ಪೂರೈಸಿ ಬೆಂಗಳೂರಿನ ರಾಮಯ್ಯ ಕಾಲೇಜಿನ ಬಿಇ ಪದವಿ ಪಡೆದಿದ್ದಾರೆ. ಇದಾದ ಬಳಿಕ ಮರ್ಸಿಡಿಸ್ ಸಂಸ್ಥೆಯಲ್ಲಿ ಉದ್ಯೋಗ ಪಡೆದುಕೊಂಡಿದ್ದರು.

ಈ ಹಿಂದೆ ಆರ್ಮಿ, ನೇವಿಗೂ ಆಯ್ಕೆಯಾಗಿದ್ದ ಮನಿಷಾ ಅದರಿಂದ ಹಿಂದೆ ಸರಿದಿದ್ದರು. ಪೈಲೆಟ್ ಆಗುವ ಇಚ್ಛೆಯಿಂದ ಏರ್‌ಪೋರ್ಸ್ ಪ್ರಯತ್ನ ಮತ್ತೆ ಮುಂದುವರಿಸಿ ಕೊನೆಗೂ ಸಾಧಿಸಿ ತೋರಿಸಿದ್ದಾರೆ.

ನ್ಯೂಸ್ ಕನ್ನಡದ ಜೊತೆ ಮಾತನಾಡಿದ ಮನೋಹರ ಶೆಟ್ಟಿ, ಮಗಳ ಸಾಧನೆಯಿಂದ ನಮಗೆ ಹೆಮ್ಮೆ ಇದೆ. ನನ್ನ ಇಬ್ಬರು ಮಕ್ಕಳಲ್ಲಿ ಒಬ್ಬರನ್ನು ಪೈಲೆಟ್ ಮಾಡಬೇಕೆಂದು ಕನಸು ಕಂಡಿದ್ದ ಅವರು ಮಗಳ ಆಸಕ್ತಿ ಗಮನಿಸಿ ಮನಿಷಾರನ್ನು ಸೇನೆಗೆ ಸೇರುವಂತೆ ಪ್ರೋತ್ಸಾಹಿಸಿದೆ ಎಂದರು.

 

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

7 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

8 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

9 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago