ಮಂಗಳೂರು: ಒಳ ಉಡುಪಿನಲ್ಲಿ ಚಿನ್ನ ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭೇದಿಸಿದ್ದಾರೆ.
ತಪಾಸಣೆಯ ಸಂದರ್ಭದಲ್ಲಿ ದುಬೈನಿಂದ ಬಂದಿಳಿದ ಪ್ರಯಾಣಿಕನೊಬ್ಬನನ್ನು ವಶಕ್ಕೆ ಪಡೆದು ಅಕ್ರಮ ಚಿನ್ನ ಕಳ್ಳ ಸಾಗಾಣಿಕೆ ಪತ್ತೆ ಹಚ್ಚಿದ್ದಾರೆ. ಈತನಿಂದ 364 ಗ್ರಾಂ ತೂಕದ 24ಕ್ಯಾರೆಟ್ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದ್ದು ಮಾರುಕಟ್ಟೆ ಮೌಲ್ಯದ ಮೌಲ್ಯ 18 ಲಕ್ಷದ 95 ಸಾವಿರದ 400₹ಆಗಲಿದೆಯೆಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಹಿಳೆಯರು ಬಳಸುವ ಒಳ ಉಡುಪಿನಲ್ಲಿ ರಟ್ಟಿನ ಪೆಟ್ಟಿಗೆಯ ರೂಪದಲ್ಲಿ ಮರೆಮಾಚಿ ಚಿನ್ನವನ್ನು ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ