ಮಂಗಳೂರು : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುದದ್ವಾರದಲ್ಲಿ ಬಚ್ಚಿಟ್ಟು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದವನನ್ನು ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ ಪಡೆದಿದ್ದಾರೆ.
98.68 ಲಕ್ಷ ರೂಪಾಯಿ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ದುಬೈ ನಿಂದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ.
ದುಬೈ ನಿಂದ ಬಂದ ಪ್ರಯಾಣಿಕನ ವರ್ತನೆಯ ಮೇಲೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮಾಡಿದ್ದಾರೆ. ಪ್ರಯಾಣಿಕನನ್ನು ವಶಕ್ಕೆ ಪಡೆದು ಶೋಧ ನಡೆಸಿದಾಗ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.