Categories: ಮಂಗಳೂರು

ಮಂಗಳೂರು: ಕುಡಿಯುವ ನೀರಿನ ದರವನ್ನು ಪರಿಷ್ಕರಣೆಗೆ ಸರ್ಕಾರ ದಿಂದ ಅನುಮೋದನೆ

ಮಂಗಳೂರು:  ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಸರ್ಕಾರದ ಮಾನದಂಡದಂತೆ ವಿಧಿಸಲಾಗಿರುವ ಕುಡಿಯುವ ನೀರಿನ ದರವು ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಪರಿಗಣಿಸಿ ಸದ್ರಿ ಕುಡಿಯುವ ನೀರಿನ ದರವನ್ನು ಪರಿಷ್ಕರಿಸುವಂತೆ ಈ ಹಿಂದೆ ಸರ್ಕಾರಕ್ಕೆ ಸಲ್ಲಿಸಲಾದ ಮೊದಲ ಪ್ರಸ್ತಾವನೆಯು ತಿರಸ್ಕಾರಗೊಂಡಿತ್ತು.

ಆದರೆ ಈ ನೀರಿನ ದರದ ಬಗ್ಗೆ ಸಾರ್ವಜನಿಕರಿಂದ ಬರುತ್ತಿದ ದೂರುಗಳ ಹಿನ್ನಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಸದ್ರಿ ದರವನ್ನು ಕಡಿಮೆಗೊಳಿಸುವುದು ಅತ್ಯಾವಶಕವೆಂದು ಪರಿಗಣಿಸಿ ನೀರಿನ ದರ ಪರಿಷ್ಕರಣೆಯಿಂದ ಪಾಲಿಕೆಗೆ ಆಗಬಹುದಾದ ಆರ್ಥಿಕ ಪರಿಣಾಮವನ್ನು ಗಮನದಲ್ಲಿಟ್ಟುಕೊಂಡು ಯಾವುದೇ ಆದಾಯ ಅಥವಾ ನಷ್ಟ ಆಗದಂತೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವಂತಹ ದರ ನಿಗದಿಪಡಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು ಪಾಲಿಕೆಯ ಮಹತ್ತರ ಜವಾಬ್ದಾರಿಯಾಗಿರುತ್ತದೆ.

ಅದರಂತೆ ಕುಡಿಯುವ ನೀರಿನ ದರ ಪರಿಷ್ಕರಣೆ ಬಗ್ಗೆ ಮೇ 2022 ರಲ್ಲಿ ನಡೆದ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಗಿ, ಕುಡಿಯುವ ನೀರಿನ ದರವನ್ನು ಕಡಿಮೆಗೊಳಿಸುವ ಬಗ್ಗೆ ತೀರ್ಮಾನಿಸಲಾಗಿ ಸಲ್ಲಿಸಲಾದ ಪರಿಷ್ಕತ ಪ್ರಸ್ತಾವನೆಗೆ ಪರಿಷತ್ತಿನಲ್ಲಿ ಅಂಗೀಕರಿಸಿ ಸರ್ಕಾರದ ಅನುಮೋದನೆಗೆ ಸಲ್ಲಿಸಲಾಗಿರುತ್ತದೆ.

ಈ  ಬಗ್ಗೆ ಸರಕಾರದ ಹಂತದಲ್ಲಿ ನಡೆಸಿದ ನಿರಂತರ ಪ್ರಯತ್ನದ ಫಲವಾಗಿ, ಪರಿಷತ್ತಿನ ತೀರ್ಮಾನದಂತೆ ಕುಡಿಯುವ ನೀರಿನ ದರ ಕಡಿಮೆಗೊಳಿಸುವ ಪ್ರಸ್ತಾವನೆಗೆ ಸರ್ಕಾರವು ಅನುಮೋದನೆ ನೀಡಿ ಆದೇಶ ಹೊರಡಿಸಿರುತ್ತದೆ. ಆದುದರಿಂದ ಕುಡಿಯುವ ನೀರಿನ ದರ ಪರಿಷ್ಕರಣೆ ಬಗ್ಗೆ ಆದೇಶ ಹೊರಡಿಸಲು ಸಹಕರಿಸಿದ ಸನ್ಮಾನ್ಯ ಮುಖ್ಯಮಂತ್ರಿಗಳು, ಸನ್ಮಾನ್ಯ ನಗರಾಭಿವೃದ್ಧಿ ಸಚಿವರು ಹಾಗೂ ನಗರದ ಮಾನ್ಯ ಶಾಸಕರುಗಳನ್ನು ಪಾಲಿಕೆಯ ಸಾರ್ವಜನಿಕರ ಪರವಾಗಿ ಅಭಿನಂದನೆಯನ್ನು ಈ ಮೂಲಕ ಸಲ್ಲಿಸುತ್ತಿದ್ದೇನೆ.

Ashika S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

4 mins ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

28 mins ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

43 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

2 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

3 hours ago