News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಭಾರಿ ಮಳೆಯಿಂದ ವಿಮಾನ ಲ್ಯಾಂಡಿಂಗ್‌ ಗೆ ತೊಂದರೆ

ಮಂಗಳೂರು: ಭಾರಿ ಮಳೆಯಿಂದ ವಿಮಾನ ಲ್ಯಾಂಡಿಂಗ್‌ ಗೆ ತೊಂದರೆ ಹವಾಮಾನ ವೈಪರೀತ್ಯದಿಂದಾಗಿ ಮುಂಬೈ ಹಾಗೂ ದುಬೈಯಿಂದ ಆಗಮಿಸಿರುವ ವಿಮಾನಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಬೆಳಗ್ಗೆ ತಡವಾಗಿ ಲ್ಯಾಂಡಿಂಗ್ ಆಗಿದೆ. #NewsKannada #KannadaNews #Mangaluru #heavyrain #airport #flightlanding #inclementweather #mangaloreinternationalairport
Photo Credit : Facebook

ಮಂಗಳೂರು: ಹವಾಮಾನ ವೈಪರೀತ್ಯದಿಂದಾಗಿ ಮುಂಬೈ ಹಾಗೂ ದುಬೈಯಿಂದ ಆಗಮಿಸಿರುವ ವಿಮಾನಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಬೆಳಗ್ಗೆ ತಡವಾಗಿ ಲ್ಯಾಂಡಿಂಗ್ ಆಗಿದೆ. ಜೊತೆಗೆ ಹೈದರಾಬಾದ್​ನಿಂದ ಆಗಮಿಸಿರುವ ವಿಮಾನವು ಮಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಲು ಸಾಧ್ಯವಾಗದೆ ಗೋವಾಕ್ಕೆ ತೆರಳಿ ಮತ್ತೆ ಹಿಂತಿರುಗಿ ಬಂದು ಲ್ಯಾಂಡ್ ಆಗಿದೆ. ಭಾರಿ ಮಳೆಯಿಂದಾಗಿ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಕಳೆದಸೋಮವಾರದಿಂದ ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಶುಕ್ರವಾರ ಮಳೆ ಸ್ವಲ್ಪ ಮಟ್ಟಿಗೆ ಇಳಿಮುಖವಾಗಿದ್ದು, ಇಂದು ಮುಂಜಾನೆಯಿಂದ ಮತ್ತೆ ಆರಂಭವಾಗಿದೆ. ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಹಲವೆಡೆ ಮಳೆ ಹಾನಿ ಸಂಭವಿಸಿದೆ. ಮಳೆಯಿಂದಾಗಿ ನಾಲ್ವರು ಸಾವನ್ನಪ್ಪಿದ್ದು, ಓರ್ವ ನೀರುಪಾಲಾಗಿದ್ದಾನೆ. ನೂರಾರು ಮನೆಗಳು ಜಲಾವೃತಗೊಂಡಿವೆ.

ಶುಕ್ರವಾರ ಮಳೆ ಕೊಂಚ ಬಿಡುವು ನೀಡಿದ ಹಿನ್ನೆಲೆಯಲ್ಲಿ ಇಂದು ಶಾಲೆ ಕಾಲೇಜಿಗಳಿಗೆ ರಜೆಯನ್ನು ನೀಡಿರಲಿಲ್ಲ. ಮಂಗಳವಾರದಿಂದ ಶುಕ್ರವಾರದವರೆಗೆ ಶಾಲೆ,‌ ಪ್ರೌಢಶಾಲೆ ಮತ್ತು ಪಿಯು ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು