News Karnataka Kannada
Sunday, May 05 2024
ಮಂಗಳೂರು

ಮಂಗಳೂರು: ಅಮಾಯಕ ಕಾರ್ಯಕರ್ತರನ್ನು ಬಂಧಿಸಿದರೆ ಕಚೇರಿ ಎದುರು ಧರಣಿ ಕೂರುವೆ ಎಂದ ಡಾ. ಭರತ್ ಶೆಟ್ಟಿ

Mangaluru: If innocent activists are arrested, i will sit on dharna in front of my office, said MLA Dr. B.S. Manjunath. Bharath Shetty
Photo Credit : Twitter

ಮಂಗಳೂರು: ಸುರತ್ಕಲ್ ನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಮಾಡಿದ ಆರೋಪಿಗಳು ಬಳಸಿದ ವಾಹನ , ಸಿಸಿಟಿವಿ ಕ್ಯಾಮೆರಾ ದೃಶ್ಯಗಳು ಪೊಲೀಸ್ ಇಲಾಖೆಗೆ ಸಿಕ್ಕಿದ್ದರೂ, ನೈಜ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವುದನ್ನು ಬಿಟ್ಟು, ಅಮಾಯಕ ಕಾರ್ಯಕರ್ತರನ್ನು ಎಳೆದುಕೊಂಡು ಹೋಗಿ ತನಿಖೆಯ ನೆಪದಲ್ಲಿ ಕಿರುಕುಳ ನೀಡಿದರೆ ಕಾರ್ಯಕರ್ತರ ಪರವಾಗಿ ನಿಮ್ಮ ಮುಖ್ಯ ಕಚೇರಿಯ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ಅವರು ಪೊಲೀಸ್ ಆಯುಕ್ತರಿಗೆ ಎಚ್ಚರಿಕೆ ನೀಡಿದ್ದಾರೆ.

ಸಾಕ್ಷ್ಯಾಧಾರ ನಿಮ್ಮ ಕೈಯ್ಯಲ್ಲಿದೆ. ಆರೋಪಿಗಳನ್ನು ಬಂಧಿಸಿ. ಇದಕ್ಕೆ ನನ್ನ ಸಂಪೂರ್ಣ ಸಹಕಾರ ಇದೆ. ಆದರೆ ಅಮಾಯಕ ಕಾರ್ಯಕರ್ತರ ಮನೆಗೆ ನುಗ್ಗಿ, ಅವರ ಕುಟುಂಬದಲ್ಲಿ ಭೀತಿ ಹುಟ್ಟಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬಾರದು. ಈ ಬಗ್ಗೆ ನನಗೆ ದೂರುಗಳು ಬರುತ್ತಿದ್ದು, ನಿಮ್ಮ ಅನುಚಿತ ವರ್ತನೆಯ ಬಗ್ಗೆ ಗೃಹ ಸಚಿವರಿಗೆ ದೂರು ನೀಡಲಿದ್ದೇನೆ.

ನಾನು ಪದವಿಗಿಂತ ಕಾರ್ಯಕರ್ತರ ಹಿತವೇ ಮುಖ್ಯ ಎಂದು ಪರಿಗಣಿಸಿದ್ದೇನೆ. ಕಾರ್ಯಕರ್ತರ ಕುಟುಂಬಕ್ಕೆ ನೋವುಂಟು ಮಾಡಿದರೆ ಸಹಿಸಲಾಗದು. ತಕ್ಷಣ ನೈಜ ಆರೋಪಿಗಳ ಪತ್ತೆಗೆ ಕ್ರಮ ಜರುಗಿಸಿ ಎಂದು ಅವರು ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು