ಮಂಗಳೂರು: ಇಂದಿನಿಂದ ಮೂರು ದಿನ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಏಪ್ರಿಲ್ 22 ಸಂಜೆ ಕೂಡ ಹಲವೆಡೆ ಮಳೆಯಾಗಿತ್ತು. ಬಿಸಿಲಿನ ಬೇಗೆಯಲ್ಲಿ ಸುಡುತಿದ್ದ ರಾಜ್ಯಕ್ಕೆ ಮಳೆ ತಂಪು ಎರಗಿತ್ತು. ಸದ್ಯ ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ.
ದಕ್ಷಿಣ ಹಾಗೂ ಉತ್ತರ ಒಳನಾಡು, ಕರಾವಳಿಯಲ್ಲಿ ಮಳೆ ಮುನ್ಸೂಚನೆ ಸಿಕ್ಕಿದೆ. ದಕ್ಷಿಣ ಒಳನಾಡಿನ 15 ಜಿಲ್ಲೆಗಳಲ್ಲಿ 3 ದಿನ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ 8 ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.