ಮಂಗಳೂರು

ಮಂಗಳೂರು: ಆಟೋರಿಕ್ಷಾದಲ್ಲಿ ಸ್ಫೋಟ ಪ್ರಕರಣಕ್ಕೆ ಸಿಕ್ಕಿದೆ ಟ್ವಿಸ್ಟ್

ಮಂಗಳೂರು: ನಗರದ ನಾಗುರಿಯಲ್ಲಿ ನಡೆದ ಆಟೋರಿಕ್ಷಾದಲ್ಲಿ ಸ್ಫೋಟ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಮಂಗಳೂರು ನಗರದಲ್ಲೇ ಸ್ಫೋಟಕ್ಕೆ ನಡೆದಿತ್ತ ಪ್ಲಾನ್ ಎನ್ನುವ ಅನುಮಾನ ಮೂಡಿದೆ.

ಹುಬ್ಬಳಿ ಮೂಲದ ಪ್ರೇಮರಾಜ್ ಹುಟಗಿ ಎಂಬುವವರು ತುಮಕೂರಿನಲ್ಲಿ ರೈಲ್ವೆ ಸಿಬ್ಬಂದಿ. ರೈಲ್ವೆ ಟ್ರ್ಯಾಕ್ ಮೈನ್ ಟೈನರ್ ಆಗಿ ಕೆಲಸ ಮಾಡ್ತಿರುವ ಪ್ರೇಮರಾಜ್ ಹುಟಗಿ, ಸದ್ಯ ತುಮಕೂರಿನ ಹಿರೇಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ಕಳೆದ ಎರಡು ವರ್ಷದಲ್ಲಿ ಎರಡು ಬಾರಿ ಆಧಾರ್ ಕಾರ್ಡ್ ಕಳೆದುಕೊಂಡಿದ್ದರು. ಇದೀಗ ಇವರ ಹೆಸರಲ್ಲಿದ್ದ ಆಧಾರ್​ ಕಾರ್ಡ್​ ಸ್ಫೋಟಗೊಂಡ ಆಟೋದಲ್ಲಿ ಸಿಕ್ಕಿದೆ!

ಮಂಗಳೂರಿನಲ್ಲಿ ಬಾಂಬ್ ಸ್ಫೋಟ ಮಾಡಿದ್ದ ವ್ಯಕ್ತಿ ನಕಲಿ ಆಧಾರ್ ವಿಳಾಸ ನೀಡಿದ್ದ ಬೆನ್ನಲ್ಲೇ ಆತ ಯಾರು? ಆತನ ಮೂಲ ಯಾವುದು ಎನ್ನುವುದರ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆತ ಯಾರು ಎಂಬುದನ್ನು ಪತ್ತೆ ಹಚ್ಚಿದ್ದಾರೆ.

ತುಂಗಾ ನದಿಯ ತಟದಲ್ಲಿ ಬಾಂಬ್ ಸ್ಫೋಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಸೆಪ್ಟೆಂಬರ್ 19 ರಂದು ಸಿದ್ದೇಶ್ವರ ನಗರ ನಿವಾಸಿಯಾದ ಸೈಯದ್ ಯಾಸಿನ್(21) ಮತ್ತು ಮಂಗಳೂರಿನ ಮಾಜ್ ಮುನೀರ್‌ನನ್ನು(22) ಬಂಧಿಸಿದ್ದರು. ಆದರೆ ಈ ಪ್ರಕರಣದ ಪ್ರಮುಖ ಎ1 ಆರೋಪಿಯಾಗಿದ್ದ ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಮೂಲದ ಶಾರೀಕ್ ನಾಪತ್ತೆಯಾಗಿದ್ದ. ನಾಪತ್ತೆಯಾಗಿದ್ದ ಈತನ ಬಂಧನಕ್ಕೆ ಪೊಲೀಸರು ಸಾಕಷ್ಟು ಬಲೆ ಬೀಸಿದ್ದರೂ ಸಿಕ್ಕಿ ಬಿದ್ದಿರಲಿಲ್ಲ. ಆದರೆ ಈಗ ಮಂಗಳೂರಿನಲ್ಲಿ ಕುಕ್ಕರ್ ಬ್ಲಾಸ್ಟ್ ಮಾಡಿ ಸಿಕ್ಕಿಬಿದ್ದಿದ್ದಾನೆ.

ಆಟೋರಿಕ್ಷಾದಲ್ಲಿದ್ದ ಕುಕ್ಕರ್ ಅನ್ನು ಜನನಿಬಿಡ ಜಾಗದಲ್ಲಿ ಸ್ಫೋಟಿಸಲು ಕೊಂಡೊಯ್ಯಲಾಗುತ್ತಿತ್ತು, ಅದಕ್ಕೆ ಡೀಟೋನೇಟರ್, ಸುಧಾರಿತ ಸ್ಪೋಟಕ, ಬ್ಯಾಟರಿ ಅಳವಡಿಸಲಾಗಿತ್ತು ಎಂಬ ಅಂಶವೂ ಬೆಳಕಿಗೆ ಬಂದಿದೆ. ಈ ಮಧ್ಯೆ ಕಳೆದ ತಿಂಗಳು ಕೊಯಮತ್ತೂರಿನಲ್ಲಿ ನಡೆದಿದ್ದ ಕಾರು ಸ್ಪೋಟ ಪ್ರಕರಣಕ್ಕೂ ಶನಿವಾರದ ಘಟನೆಗೂ ಸಂಬಂಧವಿದೆ ಎಂದು ಹೇಳಿರುವ ಕಮಿಷನರ್ ಪ್ರಕರಣದ ತನಿಖೆಗೆ 10 ತಂಡಗಳನ್ನು ರಚಿಸುವುದಾಗಿ ತಿಳಿಸಿದ್ದಾರೆ.

ಈ ಮಧ್ಯೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಭಾನುವಾರ ಮಧ್ಯಾಹ್ನ ಓರ್ವ ಶಂಕಿತ ಉಗ್ರ, ಪಿಎಫ್ಐ ಮುಖಂಡನನ್ನು ಎನ್ಐಎ ವಶಕ್ಕೆ ತೆಗೆದುಕೊಂಡಿದೆ ಎಂಬ ಮಾಹಿತಿ ಲಭಿಸಿದೆ. ಮೈಸೂರಿನಲ್ಲಿ ಇಬ್ಬರನ್ನು ಅರೆಸ್ಟ್ ಮಾಡಿರುವ ವಿಷಯವೂ ತಿಳಿದುಬಂದಿದೆ.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

8 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

26 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

48 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

1 hour ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

1 hour ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

1 hour ago