ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಮಳೆ ಹಿನ್ನಲೆ, ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ವಿದ್ಯಾರ್ಥಿಗಳಿಗೆ ಶಾಲೆಗೆ ಬರಲು ತೊಂದರೆಯಾದಲ್ಲಿ ಅಂತಹ ಕಡೆ ರಜೆ ಘೋಷಣೆ ಮಾಡಿದ್ದು, ಈಗಾಗಾಲೇ ಶಾಲೆಗೆ ಬಂದ ವಿದ್ಯಾರ್ಥಿಗಳಿಗೆ ಪಾಠ ಮಾಡುವಂತೆ ಸೂಚನೆ ನೀಡಲಾಗಿದೆ.
ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಬಗ್ಗೆ ಕಟ್ಟೆಚ್ಚರ ವಹಿಸಿ ಎಂದು ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಮಾಡಿದ್ದಾರೆ.