News Karnataka Kannada
Sunday, May 05 2024
ಮಂಗಳೂರು

ಮಂಗಳೂರು: ಶೋಭಾಯಾತ್ರೆ ಹಿನ್ನೆಲೆ, ಅ.5ರಿಂದ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ

Mangaluru: In the wake of Shobha Yatra, alternative arrangements have been made for vehicular traffic from October 5.
Photo Credit : Wikimedia

ಮಂಗಳೂರು, ಅ.3: ನಗರದ ಶ್ರೀ ಗೋಕರ್ಣನಾಧೇಶ್ವರ ದೇವಸ್ಥಾನದಿಂದ ನವದುರ್ಗೆಯರು, ಶಾರದೆ, ಗಣೇಶ ವಿಗ್ರಹ, ವಿವಿಧ ಟ್ಯಾಬ್ಲೋಗಳ ಶೋಭಾಯಾತ್ರೆಗೆ ಅಪಾರ ಜನಸಂಖ್ಯೆ ಸೇರುವ ನಿರೀಕ್ಷೆ ಇರುವುದರಿಂದ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಭಾರತೀಯ ಮೋಟಾರು ವಾಹನ ಕಾಯ್ದೆ 1988 ಕಲಂ 115 ಮತ್ತು 116ರಲ್ಲಿ ಪ್ರದತ್ತ ಅಧಿಕಾರವನ್ನು ಚಲಾಯಿಸಿ ಅ.05ರ ಬುಧವಾರ ಮಧ್ಯಾಹ್ನ 2 ಗಂಟೆಯಿಂದ ಅ.06ರ ಗುರುವಾರ ಬೆಳಿಗ್ಗೆ 6 ಗಂಟೆಯವರೆಗೆ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ.

ವಿವರ ಇಂತಿದೆ: ಕೊಟ್ಟಾರ ಚೌಕಿ ಜಂಕ್ಷನ್ ಮುಖಾಂತರ ನಗರಕ್ಕೆ ಬರುವ ವಾಹನಗಳ ನಗರ ಪ್ರವೇಶವನ್ನು ನಿμÉೀಧಿಸಲಾಗಿದೆ ಹಾಗೂ ವಾಹನಗಳು ಕುಂಟಿಕಾನ, ಕೆ.ಪಿ.ಟಿ, ನಂತೂರು ಮಾರ್ಗವಾಗಿ ನಗರ ಪ್ರವೇಶಿಸುವುದು.

ನಗರದಿಂದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಮುಖೇನ ಕೊಟ್ಟಾರ ಚೌಕಿ ಕಡೆಗೆ ಸಂಚರಿಸುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ನಗರದಿಂದ ಲಾಲ್‍ಬಾಗ್ ಮಾರ್ಗವಾಗಿ ಕುಂಟಿಕಾನ ಹಾಗೂ ಕೆ.ಪಿ.ಟಿ ಕಡೆಗೆ ಸಂಚರಿಸುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಕೆ.ಎಸ್.ಆರ್ ರಸ್ತೆಯಿಂದ ಎಂ.ಜಿ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಪಿ.ವಿ.ಎಸ್ ಮಾರ್ಗವಾಗಿ ಬಂಟ್ಸ್ ಹಾಸ್ಟೆಲ್ ಮೂಲಕ ಸಂಚರಿಸುವುದು. ಅಂಬೇಡ್ಕರ್ ಸರ್ಕಲ್ ಮೂಲಕ ಎಂ.ಜಿ ರಸ್ತೆಗೆ ಸಾಗುವ ವಾಹನಗಳು ಬಂಟ್ಸ್ ಹಾಸ್ಟೆಲ್‍ನಿಂದ ಸಂಚರಿಸುವುದು.

ನ್ಯೂ ಚಿತ್ರಾ ಜಂಕ್ಷನ್‍ನಿಂದ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಮಾರ್ಗವಾಗಿ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಕಡೆಗೆ ಸಂಚರಿಸುವ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ, ವಾಹನಗಳು ನ್ಯೂ ಚಿತ್ರಾ ಜಂಕ್ಷನ್‍ನಿಂದ ಕಂಡತ್‍ಪಳ್ಳಿ, ಮಂಡಿ, ಕುದ್ರೋಳಿ, ಬೊಕ್ಕಪಟ್ಟ, ಸುಲ್ತಾನ್‍ಬತ್ತೇರಿ ಮೂಲಕ ಉರ್ವಮಾರ್ಕೆಟ್ ಮಾರ್ಗವಾಗಿ ನಗರದಿಂದ ಹೊರ ಹೋಗುವುದು ಹಾಗೂ ನ್ಯೂ ಚಿತ್ರಾ ಜಂಕ್ಷನ್‍ನಿಂದ ಡೊಂಗರಕೇರಿ ವೆಂಕಟರಮಣ ದೇವಸ್ಥಾನ ಜಂಕ್ಷನ್, ರಾಷ್ಟ್ರ ಕವಿ ಎಂ. ಗೋವಿಂದ ಪೈ ವೃತ್ತ, ಪಿ.ವಿ.ಎಸ್ ಮಾರ್ಗವಾಗಿ ಮುಂದುವರೆದು ಬಂಟ್ಸ್ ಹಾಸ್ಟೆಲ್ ಕಡೆಗೆ ಸಂಚರಿಸುವುದು.

ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಕಡೆಯಿಂದ ಕುದ್ರೋಳಿ ದೇವಸ್ಥಾನದ ಕಡೆಗೆ ಸಂಚರಿಸುವ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಉರ್ವಾಸ್ಟೋರ್ ಕಡೆಯಿಂದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಕಡೆಗೆ ಬರುವ ವಾಹನಗಳು ಕೋಟೆಕಣಿ ರಸ್ತೆಯಾಗಿ ಕೊಟ್ಟಾರಕ್ರಾಸ್, ಕಾಪಿಕಾಡು, ಕೆ.ಎಸ್.ಆರ್.ಟಿ.ಸಿ, ಬಿಜೈ ಮಾರ್ಕೆಟ್ ಜಂಕ್ಷನ್ ಮೂಲಕ ಸಂಚರಿಸುವುದು.

ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಕಡೆಯಿಂದ ಎಂ.ಜಿ. ರಸ್ತೆಗೆ (ಲಾಲ್‍ಬಾಗ್ ಜಂಕ್ಷನ್ ಕಡೆಗೆ) ಹಾಗೂ ಬಿಜೈ ಮಾರ್ಕೆಟ್ ಜಂಕ್ಷನ್ ಕಡೆಯಿಂದ ಕೆ.ಎಸ್.ಆರ್.ಟಿ.ಸಿ ಕಡೆಗೆ ಬರುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಕುಂಟಿಕಾನ ಕಡೆಯಿಂದ ಬರುವ ವಾಹನಗಳು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಬಳಿ ಎಡಕ್ಕೆ ತಿರುಗಿ ಬಿಜೈ ಮಾರ್ಕೆಟ್ ಜಂಕ್ಷನ್ ಮೂಲಕ ಸಂಚರಿಸುವುದು. ಬಿಜೈ ಮಾರ್ಕೆಟ್ ಜಂಕ್ಷನ್ ಕಡೆಯಿಂದ ಎಂ.ಜಿ ರಸ್ತೆಗೆ (ಲಾಲ್‍ಬಾಗ್ ಜಂಕ್ಷನ್ ಕಡೆಗೆ) ಬರುವ ವಾಹನಗಳು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಬಳಿ `ಯು’ ತಿರುವು ಪಡೆದುಕೊಂಡು ಬಿಜೈ ಮಾರ್ಕೆಟ್ ಜಂಕ್ಷನ್ ಕಡೆಗೆ ಸಂಚರಿಸುವುದು.

ಪಶು ಆಸ್ಪತ್ರೆ ಜಂಕ್ಷನ್ (ಕಪುಚಿನ್ ಚರ್ಚ್)ನಿಂದ ಕೋರಿರೊಟ್ಟಿ ಜಂಕ್ಷನ್ (ಎಂ.ಜಿ.ರಸ್ತೆ) ಕಡೆಗೆ ಸಾಗುವ ಎಲ್ಲಾ ವಾಹನ ಸಂಚಾರ ನಿಷೇಧಿಸಲಾಗಿದೆ.

ಕೆ.ಎಸ್.ಆರ್.ಟಿ.ಸಿ. ಬಸ್ಸು ನಿಲ್ದಾಣಕ್ಕೆ ಬಂದು ಹೋಗುವ ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಪೈಕಿ ಪಂಪ್‍ವೆಲ್ ಕಡೆಗೆ ಸಂಚರಿಸುವ ಬಸ್ಸುಗಳು ಕೆ.ಪಿ.ಟಿ ಜಂಕ್ಷನ್ ಮೂಲಕ ಮತ್ತು ಉಡುಪಿ ಕಡೆಗೆ ಸಂಚರಿಸುವ ಬಸ್ಸುಗಳು ಕುಂಟಿಕಾನ ಜಂಕ್ಷನ್ ಮೂಲಕ ಸಂಚರಿಸುವುದು.

ಮೆರವಣಿಗೆ ಹಾದು ಹೋಗುವ ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಕುದ್ರೋಳಿ ನಾರಾಯಣಗುರು ಕಾಲೇಜು ಬಳಿಯಿಂದ ನವದುರ್ಗೆಯರ ಟ್ಯಾಬ್ಲೊಗಳು ತಯಾರಿಗೊಂಡು ದೇವಸ್ಥಾನಕ್ಕೆ ಬರಲಿರುವುದರಿಂದ ಕುದ್ರೋಳಿ ನಾರಾಯಣ ಗುರು ಕಾಲೇಜು ಜಂಕ್ಷನ್ ರಸ್ತೆಯಿಂದ ಬರ್ಕೆ ಜಂಕ್ಷನ್ ತನಕ ಮತ್ತು ಬರ್ಕೆ ಜಂಕ್ಷನ್‍ನಿಂದ ದುರ್ಗಾಮಹಲ್ ಜಂಕ್ಷನ್‍ವರೆಗೆ ಹಾಗೂ ದುರ್ಗಾಮಹಲ್ ಜಂಕ್ಷನ್‍ನಿಂದ ಅಳಕೆ ಬ್ರಿಡ್ಜ್ ತನಕ ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ಟ್ಯಾಬ್ಲೊಗಳು ಉರ್ವ ಮಾರ್ಕೆಟ್ ಜಂಕ್ಷನ್‍ನಿಂದ, ಗಾಂಧಿನಗರದಿಂದಾಗಿ ಮಣ್ಣಗುಡ್ಡ ಗುರ್ಜಿ ಜಂಕ್ಷನ್‍ನಲ್ಲಿ ಸರದಿ ಸಾಲಿನಲ್ಲಿ ಬಂದು ನಿಂತು ಅಲ್ಲಿಂದ ಸದರಿ ಟ್ಯಾಬ್ಲೊಗಳು ಮೆರವಣಿಗೆಯಲ್ಲಿ ಮುಂದುವರೆಯುದರಿಂದ ಮಣ್ಣಗುಡ್ಡ ಗುರ್ಜಿ ಜಂಕ್ಷನ್‍ನಿಂದ ಉರ್ವ ಮಾರ್ಕೆಟ್ ಜಂಕ್ಷನ್‍ವರೆಗಿನ ರಸ್ತೆಯ ಇಕ್ಕೆಲಗಳಲ್ಲಿ ಹಾಗೂ ಮಣ್ಣಗುಡ್ಡ ಗಾಂಧಿನಗರ ಪಾರ್ಕ್ ಮುಂಭಾಗದ ರಸ್ತೆ ಮತ್ತು ಗಾಂಧಿನಗರ 1ರಿಂದ 8ರವರೆಗಿನ ಅಡ್ಡ ರಸ್ತೆಗಳ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು