News Karnataka Kannada
Sunday, April 28 2024
ಮಂಗಳೂರು

ಮಂಗಳೂರು: ಅಹಿತಕರ ಘಟನೆ ಹಿನ್ನೆಲೆ, ಸಂಜೆ 6 ಗಂಟೆಯೊಳಗೆ ಅಂಗಡಿ ಮುಂಗಟ್ಟು ಮುಚ್ಚಲು ಡಿಸಿ ಸೂಚನೆ

Mangaluru: In the wake of the untoward incident, dc has instructed to close shops by 6 pm.
Photo Credit : News Kannada

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಯೊಳಗೆ ಮುಚ್ಚುವಂತೆ ಅಂಗಡಿ ಮಾಲಕರಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸೂಚನೆ ನೀಡಿದ್ದಾರೆ.

ಜನತೆ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಇಲಾಖೆಯೊಂದಿಗೆ ಸಹಕರಿಸಬೇಕು. ಜಿಲ್ಲೆಯ ಎಲ್ಲಾ ಅಂಗಡಿ ಮುಂಗಟ್ಟುಗಳು ಬೆಳಗ್ಗೆ 6 ಗಂಟೆಗೆ ಆರಂಭಗೊಂಡು ಸಂಜೆ 6 ಗಂಟೆಯೊಳಗೆ ಮುಚ್ಚಬೇಕು. ಆ.1ರವರಗೆ ಈ ಆದೇಶ ಜಾರಿಯಲ್ಲಿರಲಿದೆ. ಸ್ಥಳೀಯಾಡಳಿತ ಸಂಸ್ಥೆಗಳು ಅಂಗಡಿಗಳ ಮೇಲೆ ನಿಗಾ ಇರಿಸಬೇಕು. ಆಸ್ಪತ್ರೆ, ಮೆಡಿಕಲ್ ಸೇರಿದಂತೆ ತುರ್ತು ಸೇವೆಗಳಿಗೆ ಈ ಆದೇಶ ಆನ್ವಯಿಸುವುದಿಲ್ಲ ಎಂದವರು ತಿಳಿಸಿದ್ದಾರೆ.

ನಾಳೆ ಶಾಂತಿ ಸಭೆ
ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಜಿಲ್ಲೆಯ ಜನತೆಯ ಸಹಕಾರ ಅತಿ ಮುಖ್ಯ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಮುದಾಯದ ಪ್ರಮುಖರೊಂದಿಗೆ ನಾಳೆ(ಜು.30) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ನಿಷೇದಾಜ್ಞೆ ಜಾರಿ:                                                                                                                                                       ಜಿಲ್ಲೆಯಲ್ಲಿ ಸಂಭವಿಸಿದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಘಟಕ ವ್ಯಾಪ್ತಿಯಲ್ಲಿ ಬರುವ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ದಿನಾಂಕ: 29-07-2022 ರ ರಾತ್ರಿ 12.00 ಗಂಟೆಯಿಂದ ದಿನಾಂಕ: 06-08-2022 ಮಧ್ಯರಾತ್ರಿ 12.00 ಗಂಟೆಯವರೆಗೆ  ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ನಿಷೇದಾಜ್ಞೆಯನ್ನು ಜಾರಿಗೊಳಿಸಿದ್ದಾರೆ.

ಈ ನಿಷೇದಾಜ್ಞೆ ಅವಧಿಯಲ್ಲಿ:

1) 05ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇದಿಸಿದೆ.

2) ಯಾವುದೇ ಶಸ್ತ್ರಗಳು, ದೊಡ್ಡಗಳು, ಕತ್ತಿಗಳು, ಗದಗಳು, ಬಂದೂಕುಗಳು, ಚಾಕುಗಳು, ಕೋಲುಗಳ ಅಥವಾ ಲಾರಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದ.

3) ಪಟಾಕಿಗಳನ್ನು ಸಿಡಿಸುವುದು, ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಫೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದ. 4) ಯಾವುದೇ ರೀತಿಯ ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ಪ್ರತಿಭಟನೆ ಜಾಥಾ .ಮುಷ್ಕರ, ರಸ್ತೆ ತಡ ಸಾರ್ವಜನಿಕ/ರಾಜಕೀಯ ಸಭೆ ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಿದೆ.

5) ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುದನ್ನು ನಿಷೇಧಿಸಿದೆ. 6) ವ್ಯಕ್ತಿಗಳ ಅಥವಾ ಅವರ ಶವಗಳ ಅಥವಾ ಆಕೃತಿಗಳ ಅಥವಾ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಿದೆ.

7) ಸಾರ್ವಜನಿಕ ಕೋಮು ಸೌಹರ್ದಕ್ಕೆ ದಕ್ಕೆ ಬರವಂತಹ ಯಾವುದೇ ಕೂಗನ್ನು ಉಚ್ಚರಿಸುವುದು ಯಾ ಪರ ಹಾಡುವುದು, ಚೇಷ್ಟೆ ಮಾಡುವುದು,ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರದರ್ಶನ ಯಾ ಪ್ರಸಾರ ಮಾಡುವುದು, ಪ್ರಕಟಣಾ ಪತ್ರಿಕೆಗಳ ಯಾ ಇತರ ಯಾವುದೇ ವಸ್ತುಗಳನ್ನು ಹಂಚುವುದು, ಭಿತ್ತಿ ಪತ್ರಗಳನ್ನು ಅಂಟಿಸುವುದರಿಂದ ಸಭ್ಯತನ, ಸದಾಚಾರ ಸಾರ್ವಜನಿಕ ಭದ್ರತ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವರೇ ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಿದೆ.

ಈ ಆದೇಶವು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌ ಘಟಕ ವ್ಯಾಪ್ತಿಯಲ್ಲಿ ಬರುವ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕುಗಳಲ್ಲಿ ದಿನಾಂಕ: 29-07-2022 ರ ರಾತ್ರಿ 12.00 ಗಂಟೆಯಿಂದ ದಿನಾಂಕ: 06-08-2022 ಮಧ್ಯರಾತ್ರಿ 12.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು