Categories: ಮಂಗಳೂರು

ಮಂಗಳೂರು: ಕೂಳೂರು ವೆಲ್ಡಿಂಗ್ ಗ್ಯಾರೇಜ್ ಎದುರು ರಸ್ತೆಯಲ್ಲಿ ವಾಹನ ನಿಲ್ಲಿಸದಂತೆ ಸೂಚನೆ

ಮಂಗಳೂರು: ಜೂನ್‌ 3ರಂದು ನಡೆದ ಪೊಲೀಸ್‌ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಒಟ್ಟು 26 ಫೋನ್ ಕರೆಗಳನ್ನು ಸ್ವೀಕರಿಸಲಾಗಿದ್ದು 16 ಕರೆಗಳು ಸಂಚಾರ ಸುವ್ಯವಸ್ಥೆಗೆ ಸಂಬಂಧಿಸಿರುವ ಕರೆಗಳಾಗಿದ್ದು ತುರ್ತಾಗಿ ಕ್ರಮಕೈಗೊಳ್ಳಬೇಕಾದ ವಿಚಾರಗಳ ಕುರಿತು ಈ ಕೆಳಗಿನಂತೆ ತುರ್ತು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಈ ಫೋನ್ ಇನ್ ಕಾರ್ಯಕ್ರಮದಲ್ಲಿ ಸಲ್ಲಿಸಿರುವ ದೂರುಗಳ ಪೈಕಿ ಕೂಳೂರು ವಿ.ಅರ್.ಎಲ್ ಕಚೇರಿಯ ಎದುರುಗಡೆ ಇರುವ ವೆಲ್ಡಿಂಗ್ ಗ್ಯಾರೇಜ್ ನಲ್ಲಿ ವಾಹನಗಳನ್ನು ರಸ್ತೆ ಬದಿಯಲ್ಲಿಟ್ಟು ರಿಪೇರಿ ಮಾಡುತ್ತಿರುವ ಬಗ್ಗೆ ತಿಳಿಸಿದ್ದು ಈ ಕುರಿತು ರಸ್ತೆ ಬದಿಯಲ್ಲಿರುವ ವಾಹನಗಳನ್ನು ತೆರವುಗೊಳಿಸಿ ಗ್ಯಾರೇಜ್ ಮಾಲಿಕರಿಗೆ ರಸ್ತೆಯಲ್ಲಿ ವಾಹನಗಳನ್ನು ಇಡದಂತೆ ಎಚ್ಚರಿಕೆ ನೀಡಲಾಗಿದೆ.

ಸುರತ್ಕಲ್ ಎಂ.ಆರ್.ಪಿ.ಎಲ್ ರಸ್ತೆಯಲ್ಲಿರುವ ಕಾಂಪ್ಲಕ್ಸ್ ನ ಎದುರಿನ ರಸ್ತೆಯಲ್ಲಿ, ಬಿಜೈ ಚರ್ಚ್ ಎದುರುಗಡೆಯ ರಸ್ತೆಯಲ್ಲಿ, ಮಂಗಳದೇವಿ ಎದುರುಗಡೆ ಹಾಗೂ ಡಿ-ಮಾರ್ಟ್ ಎದುರುಗಡೆಯ ರಸ್ತೆಯಲ್ಲಿರುವ ವಾಹನ ನಿಲುಗಡೆ ಮಾಡಿರುವುದನ್ನು ತೆರವುಗೊಳಿಸಲಾಗಿದೆ. ಸೆಂಟ್ರಲ್ ಮಾರ್ಕೆಟ್ ನಲ್ಲಿ ರಸ್ತೆಯ ಎರಡು ಬದಿಗಳಲ್ಲಿ ವ್ಯಾಪಾರಸ್ಥರು ವ್ಯಾಪಾರ ಮಾಡುತ್ತಿದ್ದು ಹಾಗೂ ರಸ್ತೆಯಲ್ಲಿ ವಾಹನಗಳನ್ನು ನಿಲುಗಡೆ ಮಾಡುತ್ತಿರುವುದರಿಂದ ಇತರ ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿದ್ದು, ಈ ಕುರಿತು ಸೂಕ್ತ ಕ್ರಮಗಳನ್ನು ಕೈಗೊಂಡು ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಲಾಗಿದೆ.

ಬೆಂದೂರುವೆಲ್ ಬಳಿ ಇರುವ ಸೈಂಟ್ ಅಗ್ನೇಸ್ ಹಾಗೂ ತೆರೇಸಾ ಸ್ಕೂಲ್ ಬಳಿ ಈಗಾಗಲೇ ಸಿಬ್ಬಂದಿಗಳನ್ನು ನಿಯೋಜಿಲಾಗಿದ್ದು ಅವರುಗಳು ವಾಹನಗಳನ್ನು ಸರಿಯಾದ ರೀತಿಯಲ್ಲಿ ಪಾರ್ಕ್ ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಹಂಪನಕಟ್ಟೆಯ ಜಂಕ್ಷನ್ ನಲ್ಲಿ ಬಸ್ಸುಗಳಿಂದ ಇತರೆ ವಾಹನಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ದೂರಿದ್ದು ಈ ಬಗ್ಗೆ ಬಸ್ಸುಗಳ ವಿರುದ್ದ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ಈ ದಿನದ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಮಂಗಳೂರು ನಗರದ ಸಂಚಾರ ಸುರಕ್ಷತೆ ಹಾಗೂ ಸುಧಾರಣೆಗೆ ಹಲವಾರು ದೂರು, ಸಲಹೆ ಹಾಗೂ ಅಹವಾಲುಗಳನ್ನು ನೀಡಿದ್ದು, ಈ ಬಗ್ಗೆ ಪರಿಶೀಲಿಸಿ ಅನುಷ್ಠಾನಗೊಳಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು.

Gayathri SG

Recent Posts

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದಂತೆಯೇ ಅರಣ್ಯಗಳಲ್ಲಿ ಕಾಡ್ಗಿಚ್ಚಿನ ಭಯವೂ ಶುರುವಾಗಿದ್ದು, ಇದೀಗ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿ ಬೆಟ್ಟದ…

4 hours ago

ಗುಂಡ್ಲುಪೇಟೆಯಲ್ಲಿ ಮಳೆಗೆ ನೆಲಕ್ಕುರುಳಿದ ಮರಗಳು

ತಾಲೂಕಿನ ವಿವಿಧೆಡೆ ಭಾರೀ ಮಳೆಯಾಗಿದ್ದು, ಮಳೆ ಗಾಳಿಗೆ ಬಾಳೆ ಸೇರಿದಂತೆ ಗಿಡ ಮರಗಳು ನೆಲಕ್ಕುರುಳಿವೆ. ಸುಮಾರು ಒಂದು ಗಂಟೆಗಳ ಕಾಲ…

4 hours ago

ಮತದಾರರ ಪಟ್ಟಿಗೆ ಹೆಸರು ನೋಂದಣಿಗೆ ಪದವೀಧರರಿಗೆ ಅವಕಾಶ

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆಗೆ ಜೂ. 03 ರಂದು ಮತದಾನ ನಡೆಯಲಿದ್ದು, ಅರ್ಹ ಪದವೀಧರರು ಮತದಾರರ…

5 hours ago

ಹಿಂದೂ ಅಪ್ರಾಪ್ತೆಯನ್ನು ಗರ್ಭಿಣಿ ಮಾಡಿದ ಅನ್ಯ ಕೋಮಿನ ಯುವಕನ ಬಂಧನ

ಅಪ್ರಾಪ್ತ ಬಾಲಕಿಯನ್ನು ಲೈಂಗಿಕವಾಗಿ ಬಳಸಿಕೊಂಡು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಮುಸ್ಲಿಂ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಹುಬ್ಬಳ್ಳಿಯ ನವನಗರ…

5 hours ago

ಮೈಸೂರಿಗೆ ತಂಪೆರೆದ ವರುಣ, ಸೃಷ್ಟಿಸಿದ್ದು ಹತ್ತಾರು ಅವಾಂತರ!

ಬಿರು ಬಿಸಿಲಿನಿಂದ ಬಸವಳಿದಿದ್ದ ಸಾಂಸ್ಕೃತಿಕ ನಗರಿ ಜನರಿಗೆ ಶುಕ್ರವಾರ ಸಂಜೆ ಸುರಿದ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ನಗರಕ್ಕೆ ತಂಪೆರೆಯಿತಾದರೂ…

5 hours ago

ತಂಗಿಯ ಅಪ್ರಾಪ್ತ ಮಗಳ ಮೇಲೆ ರೌಡಿ ಶೀಟರ್ ನಿಂದ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ಟ್ಯೂಷನ್ ಗೆ ಬಿಡುವ ನೆಪದಲ್ಲಿ ಸ್ವಂತ ತಂಗಿಯ ಅಪ್ರಾಪ್ತ ಮಗಳನ್ನ ಕರೆದೊಯ್ದ ಕಾಮುಕ ಸೋದರಮಾವ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ನಂಜನಗೂಡಿನಲ್ಲಿ…

6 hours ago