Categories: ಮಂಗಳೂರು

ಮಂಗಳೂರು: ದ.ಕ ಜಿಲ್ಲೆಯನ್ನ ನೆರೆ ಪೀಡಿತ ಜಿಲ್ಲೆಯೆಂದು ಘೋಷಿಸಿ ಪರಿಹಾರ ಒದಗಿಸಲಿ ಎಂದ ಐವನ್ ಡಿಸೋಜಾ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಈ ಬಾರಿ ಗರಿಷ್ಠ ಪ್ರಮಾಣದ ಮಳೆಯಾಗಿದೆ. ಸಾಕಷ್ಟು ಆಸ್ತಿ ಪಾಸ್ತಿಗಳಿಗೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯನ್ನು ನೆರೆ ಪೀಡಿತ ಜಿಲ್ಲೆಯೆಂದು ಘೋಷಿಸಿ ಪರಿಹಾರ ಒದಗಿಸಬೇಕೆಂದು ಮಾಜಿ ಶಾಸಕ ಐವನ್ ಡಿಸೋಜಾ ಆಗ್ರಹಿಸಿದ್ದಾರೆ.

ಅವರು ಮಂಗಳೂರಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಯಿಂದಾಗಿ ಜಿಲ್ಲೆಯಲ್ಲಿ ೪೨೯ ಮನೆ ಭಾಗಶಃ ಹಾನಿಗೀಡಾಗಿದೆ. ೫೬ಮನೆಗಳು ಸಂಪೂರ್ಣ ಹಾನಿಗೀಡಾಗಿದೆ. ಸರ್ಕಾರ ೫ಕೋಟಿ ರೂ ಪರಿಹಾರ ನೀಡುವುದಾಗಿ ತಿಳಿಸಿದೆ.

ಕಳೆದ ಬಾರಿ ಮಳೆಯಿಂದ ಹಾನಿಗೀಡಾದ ಸಂತ್ರಸ್ತರಿಗೆ ಇದುವರೆಗೆ ಪರಿಹಾರ ದೊರೆತ್ತಿಲ್ಲ.ಈ ಬಾರಿ ಪರಿಹಾರ ಘೋಷಿಸಿದ ರೀತಿಯೂ ಸರಿಯಿಲ್ಲ. ಸಂಪೂರ್ಣ ಹಾನಿಗೀಡಾದ ಮನೆಗೆ ೯೦ ಸಾವಿರ ರೂ, ಭಾಗಶಃ ಹಾನಿಗೀಡಾದ ಮನೆಗೆ ೧೦ಸಾವಿರ ರೂ ಪರಿಹಾರ ಎಂದು ಘೋಷಣೆ ಮಾಡಿರುವ ಮೊತ್ತದಿಂದ ಸಂತ್ರಸ್ತರಿಗೆ ಸಹಾಯ ಮಾಡಿದಂತಾಗುವುದಿಲ್ಲ.

ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು. ಸರ್ಕಾರ ಜಿಲ್ಲೆ ಯನ್ನು ನೆರೆಪೀಡಿತ ಪ್ರದೇಶ ಎಂದು ಘೋಷಣೆ ಮಾಡುವುದರಿಂದ ಮಳೆಯಿಂದ ಹಾನಿಗೀಡಾದ ಸಂತ್ರಸ್ತರಿಗೆ ,ಬೆಳೆಗಾರರಿಗೆ ನೆರವಾಗಲು ಸಾಧ್ಯವಿದೆ ಎಂದು ಐವನ್ ಡಿ ಸೋಜ ತಿಳಿಸಿದ್ದಾರೆ.ಜಿಲ್ಲೆಯ ಸಂತ್ರಸ್ತರಿಗೆ ತಾತ್ಕಾಲಿಕವಾಗಿ ಆರಂಭಿಸಲಾದ ಪರಿಹಾರ ಕೇಂದ್ರ ಗಳಿಗೆ ಬೆರಳೆಣಿಕೆಯಷ್ಟು ಮಂದಿ ಮಾತ್ರ ಹಾಜರಾಗುತ್ತಿದ್ದಾರೆ.

ಇದು ಈ ಕೇಂದ್ರ ಗಳ ಗುಣಮಟ್ಟವನ್ನು ಸೂಚಿಸುತ್ತದೆ. ಆರೋಗ್ಯ ಕೇಂದ್ರ ,ಆಸ್ಪತ್ರೆಗಳಲ್ಲಿ ಸಾಂಕ್ರಾಮಿಕ ರೋಗ ಪೀಡಿತ ರಿಗೆ ಕೋರನಾ ಕಾರಣ ನೀಡಿ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ. ಉಸ್ತುವಾರಿ ಸಚಿವರು ಈ ಬಗ್ಗೆ ಗಮನಹರಿಸ ಬೇಕಾಗಿತ್ತು ಎಂದು ಐವನ್ ತಿಳಿಸಿದ್ದಾರೆ.

ಸಿದ್ದರಾಮಯ್ಯರ ೭೫ ಹುಟ್ಟಿದ ಹಬ್ಬಕ್ಕೆ ಭರದ ಸಿದ್ಧತೆ: ಆ.೩ರಂದು ದಾವಣಗೆರೆಯಲ್ಲಿ  ಕಾರ್ಯಕ್ರಮ ನಡೆಯಲಿದೆ

ರಾಜ್ಯ ಕಂಡ ಅತ್ಯುತ್ತಮ ನಾಯಕ,ಸಾಮಾಜಿಕ ನ್ಯಾಯದ ಪ್ರತಿಪಾದಕ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ೭೫ ಹುಟ್ಟು ಹಬ್ಬ ಆ.೩ರಂದು ದಾವಣಗೆರೆ ಯಲ್ಲಿ ಕೆಪಿಸಿಸಿ ನೇತೃತ್ವದಲ್ಲಿ ಅಭಿಮಾನಿಗಳು ಸೇರಿ ನಡೆಸಲು ನಿರ್ಧರಿಸಲಾಗಿದೆ ಎಂದು ಕಾರ್ಯಕ್ರಮ ಸಂಘಟನಾ ಸಮಿತಿಯ ಪ್ರದಾನ ಕಾರ್ಯದರ್ಶಿ ಐವನ್ ಡಿಸೋಜಾ ಹೇಳಿದರು.

ಸೇವೆಯನ್ನು ಜನತೆಗೆ ನೆನಪಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ನಿಟ್ಟಿನಲ್ಲಿ ಭರದ ಸಿದ್ಧತೆ ನಡೆಯುತ್ತಿದೆ. ಎಐಸಿಸಿಯ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಮುಖಂಡ ರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸುಮಾರು ೧೦ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಐವನ್ ಡಿ’ಸೋಜಾ ತಿಳಿಸಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಮಾಜಿ ಮನಪಾ ಸದಸ್ಯ ರಾದ ಭಾಸ್ಕರ ರಾವ್,ಸಬಿತಾ ಮಿಸ್ಕಿತ್, ಕೆಪಿಸಿಸಿ ಕಾರ್ಯ ದರ್ಶಿ ಚಿತ್ತರಂಜನ್ ಶೆಟ್ಟಿ ಬೊಂಡಾಲ,ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿ ಪ್ರಕಾಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Sneha Gowda

Recent Posts

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

22 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

42 mins ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

42 mins ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

45 mins ago

ತಲೆ ಮೇಲೆ ಇಟ್ಟಿಗೆ ಎತ್ತಿ ಹಾಕಿ ಗೆಳೆಯನಿಂದಲೇ ಕೊಲೆ

ಮದ್ಯ ಸೇವನೆಗೆಂದು ಕರೆದೊಯ್ದು ಕೊಲೆ ಮಾಡಿರುವ ಘಟನೆ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

57 mins ago

ಏನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ: ಹೆಚ್.ಡಿ ದೇವೇಗೌಡ

ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹೋಗಿದ್ದಾರೆ. ಆದ್ರೆ ನೆಲದ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕೋ ಅದು ಸರ್ಕಾರದ ಜವಾಬ್ದಾರಿ.…

1 hour ago