ಮಂಗಳೂರು: ಜೆಸಿಬಿಯಿಂದ ಮಣ್ಣು ಅಗೆತದ ವೇಳೆ ಮಣ್ಣು ಕುಸಿದು ಜೆಸಿಬಿಯ ಮೇಲೆ ಬಿದ್ದು ಜೆಸಿಬಿ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ಸಂಭವಿಸಿದೆ.
ಮಂಗಳೂರಿನ ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳಲಿ ನಾಡಾಜೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಜೆಸಿಬಿಯ ಚಾಲಕ ಝಾರ್ಖಂಡ್ ಕೊಸಾರ್ ಅನ್ಸಾರಿ (22) ಮೃತಪಟ್ಟಿದ್ದಾರೆ.
ಮಣ್ಣು ಅಗೆತದ ವೇಳೆ ನಿಂತಿದ್ದ ಟಿಪ್ಪರ್ ಹಿಂಬದಿಗೆ ಹಾಗೂ ಜೆಸಿಬಿಯ ಮೇಲೆ ಮಣ್ಣು ಕುಸಿದು ಬಿತ್ತು. ಜೆಸಿಬಿಯ ಚಾಲಕ ಮಣ್ಣಲ್ಲಿ ಸಿಲುಕಿಕೊಂಡ ಕಾರಣ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರು ಎಂದು ತಿಳಿದು ಬಂದಿದೆ.