Categories: ಮಂಗಳೂರು

ಮಂಗಳೂರು: ಜೆಡಿಎಸ್ ನ ಬೂತ್ ಮಟ್ಟದ ಕಾರ್ಯಕರ್ತರ ಸಭೆ

ಮಂಗಳೂರು: ಜೆಡಿಎಸ್ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಇದರ ವಾರ್ಡ್ ಪಾಂಡೇಶ್ವರ ಓಲ್ಡ್ ಕೆಂಟ್ ರೋಡ್ ನಲ್ಲಿ ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆಯಿತು.

ಪಕ್ಷದ ಅಭ್ಯರ್ಥಿಯಾದ ಡಾ. ಸುಮತಿ ಎಸ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಾರ್ಡ್ ಅಧ್ಯಕ್ಷರಾಗಿ ಚಂದ್ರಾವತಿ ಪಾಂಡೇಶ್ವರ, ಶ್ವೇತಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಳಿಸಲಾಯಿತು‌.

ಸಭೆಯನ್ನುದ್ದೇಶಿಸಿ ಮಾತನಾಡಿದ ರತ್ನಾಕರ ಸುವರ್ಣ ಈ ಬಾರಿ ಜನತಾದಳದ ಜನಪರ ಕಾರ್ಯಕ್ರಮ ವಾದ ಪಂಚರತ್ನ ದಿಂದ ಜನತೆ ಜೆಡಿಎಸ್ ಗೆ ಮತ ನೀಡಲಿದ್ದಾರೆ ಎಂದರು. ಪಕ್ಷ‌ದ ಅಭ್ಯರ್ಥಿ ಸುಮತಿ ಹೆಗ್ಡೆ ಮಾತನಾಡಿ ತನ್ನನ್ನು ನೀವು ಆಯ್ಕೆ ಮಾಡಿದಲ್ಲಿ ನುಡಿದಂತೆ ಕ್ಷೇತ್ರದ ಸರ್ವಾಂಗೀನ ಅಭಿವ್ರಧ್ಧಿ‌ ಮಾಡಲು ಗರಿಷ್ಠ ರೀತಿಯಲ್ಲಿ ಶ್ರಮವಹಿಸುತ್ತೇನೆ ಎಂದರು.

ಈ ಸಂಧರ್ಭ ರಾಜ್ಯ ಮೀನುಗಾರಿಕಾ ಘಟಕದ ಅಧ್ಯಕ್ಷ ರತ್ನಾಕರ ಸುವರ್ಣ, ಮಂಗಳೂರು ದಕ್ಷಿಣ ಕ್ಷೇತ್ರದ  ಪ್ರ.‌ಕಾರ್ಯದರ್ಶಿ ಪ್ಯಾಟ್ರಿಕ್ ಮಿಲ್ಟೊನ್,  ಶಾರದಾ ಶೆಟ್ಟಿ, ಕವಿತಾ, ಚೂಡಾಮಣಿ, ದಿನೇಶ್ ಪಯಿಸ್, ಜಾವೇದ್ ಪಾಂಡೇಶ್ವರ, ಮನೋಜ್ ಕುಮಾರ್, ಲತೀಫ್ ಶಿವಭಾಗ್, ಪ್ರವೀಣ್, ಪ್ರಿಯಾ ಸಾಲಿಯಾನ್, ನಂತೂರು ವಲಯಾಧ್ಯಕ್ಷ ಜಯರಾಂ,  ಬಸವರಾಜ್, ನೀಲಾ,‌ಗಿರಿಜಾ ಹಾಗೂ ಹಲವು ಜೆಡಿಎಸ್ ಕಾರ್ಯಕರ್ತರು  ಉಪಸ್ಥಿತರಿದ್ದರು‌. ವಿನ್ಸೆಂಟ್ ಪೆರೇರಾ  ವಂದಿಸಿದರು. ಮಂಗಳೂರು ದಕ್ಷಿಣ ಕ್ಷೇತ್ರ ಪ್ರ. ಕಾರ್ಯದರ್ಶಿ ಅಲ್ತಾಫ್ ತುಂಬೆ ಕಾರ್ಯಕ್ರಮ ನಿರೂಪಿಸಿದರು.

Ashika S

Recent Posts

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…

16 mins ago

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

27 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

37 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

48 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

1 hour ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

1 hour ago