Categories: ಮಂಗಳೂರು

ಮಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಜೆ.ಆರ್.ಲೋಬೊ ವಿನಂತಿ

ಮಂಗಳೂರು: ದೇರೆಬೈಲ್ ದಕ್ಷಿಣ ವಾರ್ಡಿನ ವ್ಯಾಪ್ತಿಗೆ ಬರುವ ಬಿಜೈ ಕಾಪಿಕಾಡ್ ಪ್ರದೇಶದಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜೆ. ಆರ್. ಲೋಬೊ  ಮನೆ ಮನೆಗೆ ಭೇಟಿ ನೀಡಿ ಮತದಾರರನ್ನು ಸಂಪರ್ಕಿಸಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕೆಂದು ವಿನಂತಿಸಿದರು.

ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಲೋಬೊರವರು, ಬಿಜೆಪಿ ಸರಕಾರದ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ನಿರುದ್ಯೋಗ ಸಮಸ್ಯೆ ಅಧಿಕವಾಗಿದೆ. ಕಲಿತ ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಲು ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಬಿಜೆಪಿ ಯ ಆಡಳಿತ ನೀತಿಯಿಂದ ಅಂತರಾಷ್ಟ್ರೀಯ ಕಂಪನಿಗಳು ಬಂಡವಾಳ ಹೂಡಲು ಇಲ್ಲಿಗೆ ಬರುತ್ತಿಲ್ಲ. ಒಂದು ಕಡೆಯಿಂದ ತೆರಿಗೆ ಹಣವನ್ನು ಜಾಸ್ತಿ ಮಾಡಿದ್ದಾರೆ.

ಅಲ್ಪಸಂಖ್ಯಾತರಿಗೆ ಇರುವ ಮೀಸಲಾತಿಯನ್ನು ತೆಗೆದು ಹಾಕಲಾಗಿದೆ.ಅದಲ್ಲದೆ ಸರಕಾರದ ಒಳ ಮೀಸಲಾತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಉಪ ಜಾತಿಗಳಿಗೆ ಕೇವಲ 1% ಮೀಸಲಾತಿ ದೊರಕುತ್ತದೆ. ಇದರಿಂದ ಶೈಕ್ಷಣಿಕವಾಗಿ ಮತ್ತು ಯಾವುದೇ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ಹಾಗೂ ಹುದ್ದೆಗಳಿಗೆ ಈ ಒಂದು ನೀತಿಯಿಂದಾಗಿ ಉದ್ಯೋಗ ದೊರಕಲು ಅಸಾಧ್ಯವಾಗುತ್ತದೆ. ಆದ್ದರಿಂದ ಜನತೆ ಇಂದು ಕಾಂಗ್ರೆಸ್ ಅಧಿಕಾರಕ್ಕೆ ಬರಲು ತೀರ್ಮಾನಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ, ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮಾಜಿ ಉಪ ಮೇಯರ್ ರಜನೀಶ್,ಬ್ಲಾಕ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ಜಿಲ್ಲಾ ಒಬಿಸಿ ಅಧ್ಯಕ್ಷ ವಿಶ್ವಾಸ್ ದಾಸ್, ವಾರ್ಡ್ ಅಧ್ಯಕ್ಷ ರಾಜೇಂದ್ರ ಚಿಲಿಂಬಿ, ಶೇಖರ್ ಶೆಟ್ಟಿ, ಯೋಗೇಶ್ ನಾಯಕ್, ರಮೇಶ್ ಶೆಟ್ಟಿ, ಲಿಯಾಕತ್ ಶಾಹ, ಜಗದೀಶ್, ಪ್ರದೀಪ್ ಕಾಪಿಕಾಡ್, ಮೆಲ್ವಿನ್ ಲೋಬೊ ಮೊದಲಾದವರು ಉಪಸ್ಥಿತರಿದ್ದರು.

Ashika S

Recent Posts

ಚಾರ್ಜ್​ಗೆ ಇಟ್ಟ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟ: ಹತ್ತಿರದ ಶಾಮಿಯಾನ‌ ಅಂಗಡಿ ಸುಟ್ಟು ಭಸ್ಮ

ಚಾರ್ಜ್​ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಸ್ಫೋಟಗೊಂಡ ಘಟನೆ ಮಂಡ್ಯದ ಮಳವಳ್ಳಿ ಪಟ್ಟಣದ NES ಬಡಾವಣೆಯಲ್ಲಿ ನಡೆದಿದೆ.

13 mins ago

ದನದ ಮಾಂಸ ರಫ್ತಿನಲ್ಲಿ ಬಿಜೆಪಿ 2ನೇ ಸ್ಥಾನ: ಸಂತೋಷ್‌ ಲಾಡ್‌

ಬಿಜೆಪಿ ಸರಕಾರದ ಸಾಧನೆ ಕೇವಲ ಎರಡೇ ಎರಡು. ಒಂದು ದನದ ಮಾಂಸ ರಫ್ತಿನಲ್ಲಿ 2ನೇ ಸ್ಥಾನ. ಎರಡು ಮೋದಿ ಸ್ವಜಾಹೀರಾತಿಗಾಗಿ…

24 mins ago

ಚಾಮರಾಜನಗರ: ಸಾರಿಗೆ ಬಸ್‌ ತಡೆದು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಬೆಳಗ್ಗೆ ಕಾಲೇಜುಗಳಿಗೆ ತೆರಳಲು ಸಮರ್ಪಕ ಬಸ್ ಸೌಕರ್ಯವಿಲ್ಲ ಎಂದು ಆರೋಪಿಸಿ ಕಾಲೇಜು ವಿದ್ಯಾರ್ಥಿಗಳು ಕೆ.ಎಸ್. ಆರ್. ಟಿ ಸಿ ಬಸ್…

37 mins ago

ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿ ಹೃದಯಾಘಾತದಿಂದ ಮೃತ್ಯು

ಪುಣೆಯಿಂದ ಕುಂದಾಪುರಕ್ಕೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಉದ್ಯಮಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಿನ್ನೆ ಹೊನ್ನಾವರದಲ್ಲಿ ನಡೆದಿದೆ.

50 mins ago

ನೇಹಾ ಹಿರೇಮಠ ನಿವಾಸಕ್ಕೆ ಭೇಟಿ ನೀಡಿದ ಶ್ರೀರಂಭಾಪುರಿ ಜಗದ್ಗುರು

ನೇಹಾ ಹಿರೇಮಠ ನಿವಾಸಕ್ಕೆ ಭೇಟಿ ನೀಡಿದ ಶ್ರೀರಂಭಾಪುರಿ ಜಗದ್ಗುರುಗಳು ಹಿರೇಮಠದ ದಂಪತಿಗೆ ಸಾಂತ್ವನ ಹೇಳಿದರು.

1 hour ago

ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ ಇನ್ನಿಲ್ಲ

ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ ಅವರು 69ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ.

1 hour ago