Categories: ಮಂಗಳೂರು

ಮಂಗಳೂರು: ಕುದ್ಮುಲ್ ರಂಗರಾವ್ ಅವರ ಸಮಾಧಿಗೆ ತೆರಳಿ ಗೌರವ ಸಲ್ಲಿಸಿದ ಕಾಮತ್

ಮಂಗಳೂರು: ಭಾರತೀಯ ಜನತಾ ಪಾರ್ಟಿ‌ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವೇದವ್ಯಾಸ್ ಕಾಮತ್ ಅವರು ಈ ಬಾರಿಯೂ ನಾಮಪತ್ರ ಸಲ್ಲಿಸುವ ಮುನ್ನ ದಲಿತೋದ್ಧಾರಕ ಕುದ್ಮುಲ್ ರಂಗರಾವ್ ಅವರ ಸಮಾಧಿಗೆ ತೆರಳಿ ಗೌರವ ಸಲ್ಲಿಸಿದರು‌.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಬಾರಿಯೂ ಚುನಾವಣೆಗೆ ನಾಮಪತ್ರ ಸಲ್ಲಿಸುವ ಮುನ್ನ ಪೂಜ್ಯ ಕುದ್ಮುಲ್ ರಂಗರಾವ್ ಅವರ ಸಮಾಧಿಗೆ ಗೌರವ ಸಮರ್ಪಸಿದ್ದೆ. ಕುದ್ಮುಲ್ ರಂಗರಾವ್ ಅವರು ನನಗೆ ಆದರ್ಶ. ಸಾಮಾಜಿಕ ಸಮಾನತೆ, ಅಸ್ಪೃಶ್ಯತೆ ನಿವಾರಣೆ, ಹಿಂದುಳಿದ ಸಮಾಜವನ್ನು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಮುನ್ನೆಲೆಗೆ ತರಬೇಕೆಂಬ ಅವರ ಆಶಯವನ್ನು ಆದರ್ಶವಾಗಿ ಪರಿಗಣಿಸಿ ಜೀವನದಲ್ಲಿ ಅಳವಡಿಸಿಕೊಂಡಿದ್ದೇನೆ ಎಂದು ಹೇಳಿದರು.

ಮಂಗಳೂರು ನಗರ ದಕ್ಷಿಣ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷರಾದ ರಘುವೀರ್ ಬಾಬುಗುಡ್ಡೆ ಮಾತನಾಡಿ, ತನ್ನ ಶಾಸಕತ್ವದ ಅವಧಿಯಲ್ಲಿ ನಮ್ಮ ಸಮುದಾಯದ ಪ್ರತಿಯೊಂದು ಬೇಡಿಕೆಗಳಿಗೂ ಪೂರಕವಾಗಿ ಸ್ಪಂದಿಸಿದ ವೇದವ್ಯಾಸ್ ಕಾಮತ್ ಅವರು ಮತ್ತೊಮ್ಮೆ ಶಾಸಕರಾಗಿ ಆಯ್ಕೆಯಾಗಲಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೊರೇಟರ್ ಶೈಲೇಶ್, ಕುದ್ಮುಲ್ ರಂಗರಾಯರ ಎಜ್ಯುಕೇಷನ್ ಟ್ರಸ್ಟ್ ನ ಸದಸ್ಯರಾದ ಶ್ಯಾಮ್ ಕರ್ಕೇರ, ಶಶಿಕಾಂತ್, ಅರವಿಂದ್, ಹಾಗೂ ಭಾರತೀಯ ಜನತಾ ಪಾರ್ಟಿ ಎಸ್.ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ಬಿಲಿಂಬಿ, ಉಪಾಧ್ಯಕ್ಷರಾದ ಸಂದೀಪ್ ಬೋಳೂರು, ರಾಧಕೃಷ್ಣ, ಸದಸ್ಯರಾದ ಗಂಗಾಧರ, ಬಿಜೆಪಿ ಮುಖಂಡರಾದ ಪ್ರಮೋದ್ ಕೊಟ್ಟಾರಿ, ಅರ್ಚನಾ, ಜನಾರ್ದನ, ವಿವೇಕ್ ಶೆಟ್ಟರ್, ಲಲಿತಾ, ಅಕ್ಷತಾ, ಮೇಘ, ದಿನೇಶ್, ನಾರಾಯಣ್, ವಿಕ್ರಮ್ ಕದ್ರಿ, ರಶ್ಮಿ, ಮುಂತಾದವರು ಉಪಸ್ಥಿತರಿದ್ದರು.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago