News Karnataka Kannada
Tuesday, April 30 2024
ಮಂಗಳೂರು

ಮಂಗಳೂರು: ಜು.22 ರಿಂದ ಮಂಗಳೂರು ವಿವಿಯಲ್ಲಿ ‘ಕನಕ ಸಾಹಿತ್ಯ ಸಮ್ಮೇಳನ’

Kanaka Sahitya Sammelana' to be held at Mangalore University from July 22
Photo Credit :

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಕನಕದಾಸ ಸಂಶೋಧನ ಕೇಂದ್ರ ಹಾಗು ರಾಷ್ಟ್ರೀಯ ಸಂತಕವಿ ಕನಕದಾಸ ಅಧ್ಯಯನ ಮತ್ತು ಸಂಶೋಧನ ಕೇಂದ್ರ, ಬೆಂಗಳೂರು ಸಂಸ್ಥೆಗಳ ಸಹಯೋಗದೊಂದಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ಜುಲೈ 22 ಹಾಗೂ 23 ರಂದು `ಕನಕ ಸಾಹಿತ್ಯ ಸಮ್ಮೇಳನ’ ನಡೆಯಲಿದೆ.

ಜುಲೈ 22 (ಶುಕ್ರವಾರ) ಬೆಳಗ್ಗೆ 10 ಗಂಟೆಗೆ ಕರ್ನಾಟಕ ಸರಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ. ಸುನಿಲ್ ಕುಮಾರ್ ಕಾರ್ಯಕ್ರಮದ ಉದ್ಘಾಟಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಪಿ.ಎಸ್. ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದು, ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಡಾ. ಕಿಶೋರ್ ಕುಮಾರ್ ಸಿ.ಕೆ, ಬೆಂಗಳೂರಿನ ಕನಕದಾಸ ಸಂಶೋಧನ ಕೇಂದ್ರದ ಸಮನ್ವಯಾಧಿಕಾರಿ ಎಂ ಆರ್ ಸತ್ಯನಾರಾಯಣ, ಮಂಗಳೂರಿನ ಕನಕ ಕೇಂದ್ರದ ಸಂಯೋಜಕ ಡಾ. ಧನಂಜಯ ಕುಂಬ್ಳೆ ಉಪಸ್ಥಿತರಿರುವರು.

ಸಮ್ಮೇಳನದಲ್ಲಿ, ಪರಂಪರೆಯ ಬೆಳಕಲ್ಲಿ ಕನಕ, ವರ್ತಮಾನದ ಕನ್ನಡಿಯಲ್ಲಿ ಕನಕ, ಡಾ.ವಸಂತ ಭಾರದ್ವಾಜರ ಕನಕ ತರಂಗಿಣಿ ಮಹಾಕಾವ್ಯ ಚಿಂತನ ಗೋಷ್ಠಿಗಳು ನಡೆಯಲಿದ್ದು ಅದರಲ್ಲಿ ಪ್ರೊ. ಮಲ್ಲೇಪುರಂ ಜಿ ವೆಂಕಟೇಶ್, ಬೆಂಗಳೂರು,ಲಕ್ಷ್ಮೀಶ ತೋಳ್ಪಾಡಿ ಪುತ್ತೂರು, ಎಂ.ಆರ್ ಸತ್ಯನಾರಾಯಣ ಶಿವಮೊಗ್ಗ, ಡಾ. ಪಾದೇಕಲ್ಲು ವಿಷ್ಣು ಭಟ್ಟ ಉಡುಪಿ, ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್, ಪ್ರೊ.ಶಿವರಾಮ ಶೆಟ್ಟಿ ಮೈಸೂರು, ಪ್ರೊ.ನಿತ್ಯಾನಂದ ಬಿ ಶೆಟ್ಟಿ ತುಮಕೂರು, ಡಾ. ಜ್ಯೋತಿ ಶಂಕರ್ ಮೈಸೂರು, ಡಾ.ಶುಭಾ ಮರವಂತೆ, ಅಳಗೋಡು ಶಿವಕುಮಾರ್, ಡಾ.ಮಂಜುನಾಥ ಬೆಳವಾಡಿ ಮತ್ತಿತರ ವಿದ್ವಾಂಸರು ಭಾಗವಹಿಸಲಿದ್ದಾರೆ.

ಎರಡನೇ ದಿನ ನಡೆಯುವ ಕನಕ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಡಾ. ಕಬ್ಬಿನಾಲೆ ವಸಂತ ಭಾರದ್ವಾಜ್ ವಹಿಸಲಿದ್ದು ಹಿರಿಯ ಕವಿಗಳಾದ ಡಾ. ವಸಂತಕುಮಾರ್ ಪೆರ್ಲ, ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಉಡುಪಿ, ಕಾಸರಗೋಡಿನ ರಾಧಾಕೃಷ್ಣ ಉಳಿಯತ್ತಡ್ಕ, ಮೂಡಬಿದಿರೆಯ ಟಿ.ಎ.ಎನ್. ಖಂಡಿಗೆ, ಬೆಂಗಳೂರಿನ ಡಾ. ಸತ್ಯಮಂಗಲ ಮಹಾದೇವ ಭಾಗವಹಿಸಲಿದ್ದಾರೆ. ಬಳಿಕ `ಕನಕ ಕಾವ್ಯ –ಗೀತ-ನೃತ್ಯ ಸಾಧ್ಯತೆಗಳು’ ಸೋದಾಹರಣ ಉಪನ್ಯಾಸ ಕಾರ್ಯಕ್ರಮದಲ್ಲಿ ಶಿವಮೊಗ್ಗದ ಡಾ. ಕೆ.ಎಸ್. ಪವಿತ್ರ ಉಪನ್ಯಾಸ ನೀಡಲಿರುವರು.

ಕನಕ ಸಾಹಿತ್ಯ ಕುರಿತ ವಿಚಾರಸಂಕಿರಣದ ಆಹ್ವಾನಿತ ಪ್ರಬಂಧಗಳ ಮಂಡನಾಗೋಷ್ಠಿಯ ಅಧ್ಯಕ್ಷತೆಯನ್ನು ಧಾರವಾಡ ಕನಕ ಅಧ್ಯಯನ ಪೀಠದ ಸಂಯೋಜಕರಾದ ಡಾ. ಸಿ. ಹನಮಗೌಡ ವಹಿಸಲಿರುವರು. 23 ರ ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಕಕ್ಷ ಪ್ರೊ. ಸೋಮಣ್ಣ ಹೊಂಗಳ್ಳಿ ಅಧ್ಯಕ್ಷತೆ ವಹಿಸಲಿದ್ದು, ಹಂಪಿ, ಕನ್ನಡ ಅಧ್ಯಯನ ಸಂಸ್ಥೆ, ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಎ.ವಿ. ನಾವಡ ಸಮಾಪನ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಧ್ ಭಾಗವಹಿಸಲಿರುವರು.

ಕನಕ ಸಾಂಸ್ಕೃತಿಕ ಸಂಭ್ರಮ:

ಸಮ್ಮೇಳನದಲ್ಲಿ ವಿವಿಧ ಗಾಯಕರಿಂದ ಕನಕ ಗಾಯನ, ವ್ಯಾಖ್ಯಾನ, ಅರ್ಥಾನುಸಂಧಾನ, ಗೊಂಬೆಯಾಟ, ಯಕ್ಷಗಾನ ಪ್ರದರ್ಶನ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕನಕದಾಸರನ್ನೇ ಕುರಿತು ಮೊದಲ ಸಾಹಿತ್ಯ ಸಮ್ಮೇಳನ ಇದಾಗಿದೆ. ಕನಕದಾಸರ ಚಿಂತನೆಗಳನ್ನು ಯುವಸಮುದಾಯಕ್ಕೆ ತಲುಪಿಸುವುದು ಸಮ್ಮೇಳನದ ಉದ್ದೇಶ. ನಾಡಿನ ವಿದ್ವಾಂಸರು, ಕಲಾವಿದರು ಹಾಗೂ ಬಹುಸಂಖ್ಯೆಯ ವಿದ್ಯಾರ್ಥಿಗಳು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಸಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂಬ ಆಶಯವಿದೆ, ಎಂದು ಕನಕದಾಸ ಕೇಂದ್ರದ ಸಂಯೋಜಕ ಡಾ.ಧನಂಜಯ ಕುಂಬ್ಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು