Categories: ಮಂಗಳೂರು

ಮಂಗಳೂರು: ಕರ್ಣಾಟಕ ಬ್ಯಾಂಕಿಗೆ ಕೇಂದ್ರ ಸರಕಾರದಿಂದ ಪ್ರತಿಷ್ಠಾ ಪುರಸ್ಕಾರ ಗೌರವ

ಮಂಗಳೂರು: ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಕರ್ಣಾಟಕ  ಬ್ಯಾಂಕ್ ‘ಭೀಮ್-ಯುಪಿಐ ವಹಿವಾಟುಗಳಲ್ಲಿ ಗರಿಷ್ಠ ಶೇಕಡಾವಾರು ಗುರಿಯನ್ನು ಸಾಧಿಸಿದ್ದಕ್ಕಾಗಿ ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ನೀಡುವ ‘ಡಿಜಿ ಧನ್ ಅವಾರ್ಡ್ಸ್ 2021-22’ರ ಅಡಿಯಲ್ಲಿ ‘ಪ್ರತಿಷ್ಠಾ ಪುರಸ್ಕಾರ’ದ ಗೌರವಕ್ಕೆ ಪಾತ್ರವಾಗಿದೆ.

ಈ ಸಾಧನೆ ಕುರಿತು ಮಾತನಾಡಿದ ಬ್ಯಾಂಕಿನ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಸಿಇಓ ಮಹಾಬಲೇಶ್ವರ ಎಂ.ಎಸ್. ಅವರು  ಭಾರತೀಯ ಆರ್ಥಿಕತೆಯಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಬಲಗೊಳಿಸುವಲ್ಲಿ ನಮ್ಮ ರಾಷ್ಟ್ರದ ದೃಷ್ಟಿಕೋನಗಳಿಗೆ ಅನುಗುಣವಾಗಿ ನಮ್ಮ ಬ್ಯಾಂಕ್ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿರುವುದನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಿ ಭಾರತ ಸರಕಾರ ಈ ಪ್ರಶಸ್ತಿಯನ್ನು ನೀಡಿರುವುದು ತುಂಬಾ ಸಂತಸ ತಂದಿದೆ.

‘ಕೆಬಿಎಲ್ ವಿಕಾಸ್- 2.0 ಪರಿವರ್ತನಾ ಪ್ರಕ್ರಿಯೆಯ ಭಾಗವಾದ ‘ಕೆಬಿಎಲ್ ನೆಕ್ಸ್ ಅಡಿಯಲ್ಲಿ ಸಂಪೂರ್ಣ ಡಿಜಿಟಲ್ ವ್ಯವಹಾರವನ್ನು ಕೈಗೊಳ್ಳುವತ್ತ ಬ್ಯಾಂಕ್ ಮುನ್ನುಗ್ಗುತ್ತಿದೆ. ಕರ್ಣಾಟಕ ಬ್ಯಾಂಕ್ ತನ್ನ ಫಲಪ್ರದ ಅಸ್ತಿತ್ವದ ನೂರನೇ ವರ್ಷಕ್ಕೆ ಕಾಲಿಡುತ್ತಿರುವ ಈ ಸಂದರ್ಭದಲ್ಲಿ ದೊರೆತಿರುವ ಈ ಪ್ರಶಸ್ತಿಯು ಬ್ಯಾಂಕಿನ ಸಂಸ್ಥಾಪಕರಿಗೆ ಸಂದ ಗೌರವವಾಗಿದೆ ಎಂದು ನುಡಿದರು.

ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ, ಸಂವಹನ ಮತ್ತು ರೈಲ್ವೆ ಸಚಿವರಾಗಿರುವ  ಅಶ್ವಿನಿ ವೈಷ್ಣವ್ ಅವರಿಂದ ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ಕರ್ಣಾಟಕ ಬ್ಯಾಂಕಿನ ಪರವಾಗಿ  ಗೋಕುಲದಾಸ್ ಪೈ, ಚೀಫ್ ಬಿಸಿನೆಸ್ ಆಫೀಸರ್ ಹಾಗೂ  ಜಗದೀಶ್ ಕೆ.ಎಸ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಪ್ರಾದೇಶಿಕ ಕಚೇರಿ-ದೆಹಲಿ, ಪ್ರಶಸ್ತಿಯನ್ನು ಸ್ವೀಕರಿಸಿದರು.

Ashika S

Recent Posts

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

6 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

13 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

24 mins ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

35 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

55 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

1 hour ago