Categories: ಮಂಗಳೂರು

ಮಂಗಳೂರು: ಕಾಸರಗೋಡು ಜಿಲ್ಲೆಯ ಮೊದಲ ವ್ಯಸನ ಮುಕ್ತ ಕೇಂದ್ರಕ್ಕೆ ಸೆ. ೫ರಂದು ಶಿಲಾನ್ಯಾಸ

ಮಂಗಳೂರು: ಕಾಸರಗೋಡು ಜಿಲ್ಲೆಯ ಮೊದಲ ವ್ಯಸನ ಮುಕ್ತ ಕೇಂದ್ರವನ್ನು ಮಂಜೇಶ್ವರದ ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಲು ಮುಂದಾಗಿದ್ದು, ಇದಕ್ಕೆ ಸೆಪ್ಟೆಂಬರ್  ೫ರಂದು  ಬೆಳಗ್ಗೆ ೧೦.೩೦ಕ್ಕೆೆ  ಶಿಲಾನ್ಯಾಸ ನೆರವೇರಲಿದೆ.

‘ಸ್ನೇಹಾಲಯ’ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ ಮತ್ತು ವೃದ್ದಾಶ್ರಮದಲ್ಲಿ ಈ ವ್ಯಸನಮುಕ್ತ ಕೇಂದ್ರ ಕಾರ್ಯಾರಂಭವಾಗಲಿದೆ. ಸುಮಾರು ೬ ಕೋಟಿ ರು. ವೆಚ್ಚದಲ್ಲಿ ದಾನಿಗಳ ನೆರವಿನಿಂದ ಕಟ್ಟಡ ನಿರ್ಮಾಣವಾಗಲಿದೆ. ಏಕಕಾಲದಲ್ಲಿ ೬೦ ಮಂದಿಗೆ ಈ ಕೇಂದ್ರದಲ್ಲಿ ವ್ಯಸನ ಮುಕ್ತತೆಯ ಚಿಕಿತ್ಸೆ ನೀಡಬಹುದಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಭಾಗ ಇರಲಿದೆ ಎಂದು ಸ್ನೇಹಾಲಯದ ಸ್ಥಾಪಕ ಜೋಸೆಫ್ ಕ್ರಾಸ್ತಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ಮದ್ಯಪಾನದಿಂದ ಮಾನಸಿಕ ಅಸ್ವಸ್ಥತೆ ಹೆಚ್ಚುತ್ತಿರುವುದು ಕಂಡುಬಂದಿದೆ. ಪ್ರಸ್ತುತ ಕಾಸರಗೋಡಿನಲ್ಲಿ ವ್ಯಸನ ಮುಕ್ತ ಕೇಂದ್ರಗಳು ಇಲ್ಲ. ದ.ಕ.  ಜಿಲ್ಲೆಯಲ್ಲೂ ಪೂರ್ಣ ಪ್ರಮಾಣದಲ್ಲಿ ವೈದ್ಯರು ಲಭ್ಯವಿರುವ ಕೇಂದ್ರಗಳ ಕೊರತೆ ಇದೆ. ಹಾಗಾಗಿ ಈ ಹೊಸ ವಿಭಾಗ ಆರಂಭಿಸಲು ಯೋಜಿಸಿದ್ದಾಾಗಿ ಅವರು ಹೇಳಿದರು.

ಪ್ರಮುಖರಾದ ಪ್ರಕಾಶ್ ಪಿಂಟೊ, ಒಲಿವಿಯಾ ಕ್ರಾಸ್ತಾ, ಮಿಥುನ್, ಎಲಿಯಾಸ್ ಫರ್ನಾಂಡಿಸ್, ರೇಮಂಡ್ ಡಿಕುನ್ಹ ಉಪಸ್ಥಿತರಿದ್ದರು.

Ashika S

Recent Posts

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

29 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

32 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

55 mins ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

1 hour ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

1 hour ago

ಜೀವ -ಜಲ ಉಳಿಸಲು ಸ್ವಯಂ ಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು  ಸ್ವಯಂ ಪ್ರೇರಿತರಾಗಿ ತಮ್ಮ ಇತಿ ಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ…

1 hour ago