ಮಂಗಳೂರು: ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕಿ ಬಾತ್ ನೂರನೇ ಸಂಚಿಕೆಯ ಪ್ರಸಾರವನ್ನು ಪದವಿನಂಗಡಿಯ ಬೆನಕ ಸಭಾಂಗಣದಲ್ಲಿ ಭಾಜಪಾ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಶಾಸಕರೂ, ಮಂಗಳೂರು ನಗರ ಉತ್ತರ ಬಿಜೆಪಿ ಅಭ್ಯರ್ಥಿ ಡಾ. ಭರತ್ ಶೆಟ್ಟಿ ವೈ ಅವರು ಕಾರ್ಯಕರ್ತರೊಂದಿಗೆ ಸೇರಿ ವೀಕ್ಷಿಸಿದರು.
ಜಿಲ್ಲಾಧ್ಯಕ್ಷರಾದ ಸುದರ್ಶನ ಮೂಡಬಿದ್ರೆ, ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.