ಮಂಗಳೂರು: ಕೆಎಸ್ಆರ್ಟಿಸಿ ಮುಂದಿನ ದಿನಗಳಲ್ಲಿ ಬಜ್ಪೆ ವಿಮಾನ ನಿಲ್ದಾಣದಿಂದ ಮಂಗಳೂರು ಬಸ್ ನಿಲ್ದಾಣಕ್ಕೆ ಬಸ್ ಸೇವೆ ಪರಿಚಯಿಸುವ ಸಾಧ್ಯತೆ ಇದೆ.
ದಿಲ್ಲಿಯಲ್ಲಿ ಕರ್ನಾಟಕದ ಪತ್ರಕರ್ತರು ವಿಮಾನ ನಿಲ್ದಾಣದಿಂದ ಮಂಗಳೂರು ನಗರಕ್ಕೆ ಬಸ್ ವ್ಯವಸ್ಥೆ ಇಲ್ಲದ ಬಗ್ಗೆ ಮನವಿ ಮಾಡಿರುವ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಅವರು ಪ್ರತಿಕ್ರಿಯಿಸಿ, ವಿಶೇಷ ಬಸ್ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಭರವಸೆ ನೀಡಿದ್ದು, ತಮ್ಮ ಮಾತಿನಂತೆ ನಡೆದುಕೊಂಡರು. ಬಸ್ ಸೇವೆ ಆರಂಭಕ್ಕೆ ಶುಕ್ರವಾರ ಸಂಜೆಯೇ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.
ಬಿಎಂಟಿಸಿಯಲ್ಲಿ ಕೋವಿಡ್ ಸಮಯದಿಂದ ಅನೇಕ ಬಸ್ಗಳು ಸಂಚಾರ ನಡೆಸದೆ ನಿಂತಿವೆ. ಇದರಲ್ಲಿ ಮೂರು ಬಸ್ಗಳನ್ನು ಮಂಗಳೂರಿಗೆ ಕಳುಹಿಸುವಂತೆ ಅವರು ಸಾರಿಗೆ ಇಲಾಖೆ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಮಂಗಳೂರು ನಗರದಿಂದ ವಿಮಾನ ನಿಲ್ದಾಣಕ್ಕೆ ಬಸ್ ಸಂಪರ್ಕ ಸದ್ಯದಲ್ಲೇ ಆರಂಭಗೊಳ್ಳುವ ನಿರೀಕ್ಷೆ ಇದೆ.