ಮಂಗಳೂರು

ಮಂಗಳೂರು: ಪಟ್ಲ ಫೌಂಡೇಶನ್ ಟ್ರಸ್ಟ್ ಅಭಿವೃದ್ದಿಯ ಪಥದಲ್ಲಿ ಸಾಗಲಿ- ಉಳಿ ಯೋಗೇಂದ್ರ ಭಟ್

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಅಭಿವೃದ್ದಿಯ ಪಥದಲ್ಲಿ ಸಾಗಲಿ. ಮೇ 28 ರಂದು ಅಡ್ಯಾರ್ ಗಾರ್ಡನ್ ನಲ್ಲಿ ಜರಗುವ ಪಟ್ಲ ಸಂಭ್ರಮವು ಸಂಭ್ರಮದ ಪಥದಲ್ಲಿ ಸಾಗಲಿ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಯುಎಸ್ ಎ ಘಟಕದ ಸಂಚಾಲಕ ಉಳಿ ಯೋಗೀಂದ್ರ ಭಟ್ ತಿಳಿಸಿದರು.

ಬಲ್ಲಾಲ್ ಬಾಗ್ ಬಳಿಯ ಪತ್ತುಮುಡಿಯಲ್ಲಿ ಪಟ್ಲ ಫೌಂಡೇಶನ್ ಟ್ರಸ್ಟ್ ನ ಆಶ್ರಯದಲ್ಲಿ ನಡೆಯುವ ಪಟ್ಲ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಪಟ್ಲ ಸಂಭ್ರಮ ವೈವಿದ್ಯತೆಯಿಂದ ಕೂಡಿದ ಕಾರ್ಯಕ್ರಮ. ವೈಭವದ ಮೂಲಕ ಪ್ರಕಾಶಮಾನವಾಗಿ ನಡೆಯಲಿ ಎಂದರು. ಭಾಗವತ ಪಟ್ಲ ಸತೀಶರಿಂದ ಯಕ್ಷಗಾನದ ಕ್ಷೇತ್ರದ ವ್ಯಾಪ್ತಿ ವಿಸ್ತಾರಗೊಂಡಿದೆ. ಪಟ್ಲರು ಯಕ್ಷಗಾನಕ್ಕೆ ಹೊಸ ರೂಪ ಕೊಟ್ಟಿದ್ದಾರೆ, ಹೊಸ ಜನಾಂಗವನ್ನು ಸೃಷ್ಟಿಸಿದ್ದಾರೆ ಎಂದು ಯಕ್ಷಗಾನ ಕಲಾವಿದ ಉಜಿರೆ ಅಶೋಕ್ ಭಟ್ ತಿಳಿಸಿದರು.

ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ ಪಟ್ಲ ಸಂಭ್ರಮದ ರೂಪು ರೇಶೆಗಳನ್ನು ತಿಳಿಸಿದರು.

ವೇದಿಕೆಯಲ್ಲಿ ಭುಜಬಲಿ ಧರ್ಮಸ್ಥಳ, ಡಾ.ಪ್ರಭಾಕರ ಜೋಷಿ, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸುದೇಶ್ ಕುಮಾರ್ ರೈ, ಉಪಾಧ್ಯಕ್ಷ ಮನು ರಾವ್, ಜೊತೆ ಕಾರ್ಯದರ್ಶಿ ರವಿಚಂದ್ರ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಬಾಳ, ಪ್ರದೀಪ್ ಆಳ್ವ ಕದ್ರಿ, ಮಹಿಳಾ ಘಟಕದ ಪದಾಧಿಕಾರಿಗಳಾದ ಆರತಿ ಆಳ್ವ, ಪೂರ್ಣಿಮಾ ಯತೀಶ್ ರೈ ಹಾಗೂ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯಲ್ಲಿ ಕಟೀಲು ಮೇಳದ ಕಲಾವಿದರಾದ ಮವ್ವಾರು ಬಾಲಕೃಷ್ಣ ಮಣಿಯಾಣಿ ಮತ್ತು ಬಪ್ಪನಾಡು ಮೇಳದ ಕಲಾವಿದ ಪಡುಮಲೆ ನಾಗಪ್ಪ ಅವರಿಗೆ ಮನೆ ನಿರ್ಮಾಣಕ್ಕೆ ಧನ ಸಹಾಯ ನೀಡಲಾಯಿತು. ಪುರುಷೋತ್ತಮ‌ ಭಂಡಾರಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ರವಿಚಂದ್ರ ಶೆಟ್ಟಿ ವಂದಿಸಿದರು.

Gayathri SG

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

4 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

5 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

5 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

6 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

6 hours ago