News Karnataka Kannada
Saturday, April 27 2024
ಮಂಗಳೂರು

ಮಂಗಳೂರು: ಎಂ.ಎನ್. ಆರ್‌. ಹುಟ್ಟುಹಬ್ಬದಂದು ಫಲಾನುಭವಿಗಳಿಗೆ ಸವಲತ್ತು ವಿತರಣೆ

M.N. Distribution of benefits to beneficiaries on rajendra kumar's birthday
Photo Credit : News Kannada

ಮಂಗಳೂರು: ಸಹಕಾರಿ ಕ್ಷೇತ್ರದ ಬಲವರ್ಧನೆಗೆ  ಸೇವೆಯನ್ನು ಸಲ್ಲಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ ಬ್ಯಾಂಕ್) ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ.  ಬ್ಯಾಂಕಿನ ಬೆಳವಣಿಗೆಯಲ್ಲಿ ಗಣನೀಯ ಪಾತ್ರವಹಿಸಿದ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್‌ ಎಲ್ಲರ ಪ್ರೀತಿ ವಿಶ್ವಾಸವನ್ನು ಗಳಿಸಿದ್ದಾರೆ.

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಾದರಿ ಸಹಕಾರಿ ನಾಯಕರಾಗಿ ರಾಜ್ಯ, ರಾಷ್ಟ್ರ ಮಟ್ಟದಲ್ಲೂ ಗುರುತಿಸಿಕೊಂಡಿರುವ ‘ಸಹಕಾರ ರತ್ನ’ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 74ನೇ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ನಡೆಸಲು ಅವಿಭಜಿತ ಜಿಲ್ಲೆಯ  ಸಹಕಾರಿಗಳೆಲ್ಲರೂ ತೀರ್ಮಾನಿಸಿದ್ದು . ಫೆ. 24ರಂದು ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬದ ದಿನ. ಅದೇ ದಿನ ಬೆಳಗ್ಗೆ 10.30 ಗಂಟೆಗೆ ಎಸ್‌ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 74ನೇ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಅಭಿವಂದನಾ ಕಾರ್ಯಕ್ರಮ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಸಮಾರಂಭ ನಡೆಯಲಿದೆ ಎಂದು ಅಭಿವಂದನಾ ಸಮಿತಿಯ ಅಧ್ಯಕ್ಷ  ಐಕಳ ದೇವಿಪ್ರಸಾದ್ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ  ಮಾಹಿತಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು