News Karnataka Kannada
Tuesday, April 30 2024
ಮಂಗಳೂರು

ಮಂಗಳೂರು: ಭಾರೀ ಗಾಂಜಾ ದಂಧೆ ಬೇಧಿಸಿದ ಮಂಗಳೂರು ಪೊಲೀಸರು!

Police
Photo Credit : By Author

ಮಂಗಳೂರು: ಮಂಗಳೂರು ಪೊಲೀಸರು ಭಾರೀ ಗಾಂಜಾ ದಂಧೆಯನ್ನು ಭೇದಿಸಿದ್ದು, ಇಬ್ಬರು ವೈದ್ಯರು, ನಾಲ್ವರು ವೈದ್ಯ ವಿದ್ಯಾರ್ಥಿನಿಯರು ಸೇರಿ 10 ಮಂದಿಯನ್ನ ಬಂಧಿಸಿದ್ದಾರೆ.

ಮಂಗಳೂರಿನ ಪ್ರತಿಷ್ಠಿತ  ಮೆಡಿಕಲ್  ಕಾಲೇಜಿನ ವೈದ್ಯರು‌ ಹಾಗೂ ವೈದ್ಯಕೀಯ  ವಿದ್ಯಾರ್ಥಿ, ವಿದ್ಯಾರ್ಥಿನಿಯರು ಈ  ಗಾಂಜಾ  ದಂಧೆಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ.

ಯು.ಕೆ ಮೂಲದ ಗಾಂಜಾ ಪೆಡ್ಲರ್ ನೀಲ್ ಕಿಶೋರಿಲಾಲ್ ರಾಮ್ ಜೀ (38) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದ್ದು ಈ ವೇಳೆ ಮತ್ತಷ್ಟು ವಿಚಾರ ಬೆಳಕಿಗೆ ಬಂದಿತ್ತು. ನೀಲ್ ಕಿಶೋರಿಲಾಲ್ ರಾಮ್‌ನ ಮಾಹಿತಿ ಆಧಾರದಲ್ಲಿ ಮೆಡಿಕಲ್ ವಿದ್ಯಾರ್ಥಿನಿಯರು, ವಿದ್ಯಾರ್ಥಿಗಳು ಹಾಗೂ ವೈದ್ಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವೈದ್ಯರಾದ ಡಾ. ಸಮೀರ್(32), ಮಣಿ‌ಮಾರನ್ ಮುತ್ತು(28)ರನ್ನು ವಿದ್ಯಾರ್ಥಿನಿಯರಾದ ಡಾ. ನದಿಯಾ ಸಿರಾಜ್(24), ಡಾ.ವರ್ಷಿಣಿ ಪ್ರತಿ (26), ಡಾ.ರಿಯಾ ಚಡ್ಡ(22), ಡಾ. ಹೀರಾ ಬಸಿನ್(23), ವಿದ್ಯಾರ್ಥಿಗಳಾದ ಡಾ. ಭಾನು ದಹಿಯಾ (27), ಡಾ.ಕ್ಷಿತಿಜ್ ಗುಪ್ತ (23), ಸ್ಥಳೀಯ ಮಹಮ್ಮದ್ ರೌಫ್ ನನ್ನು ಬಂಧಿಸಲಾಗಿದೆ.

ಆರೋಪಿಗಳ ಬಳಿಯಿದ್ದ 2 ಕೆ.ಜಿ‌ ಗಾಂಜಾ, ಒಂದು ನಕಲಿ ಪಿಸ್ತೂಲ್, ಡ್ರಾಗರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು