Categories: ಮಂಗಳೂರು

ಮಂಗಳೂರು: ವಿಶ್ವ ಮಧುಮೇಹ ದಿನದ ಅಂಗವಾಗಿ ಮ್ಯಾರಥಾನ್ ಓಟ

ಮಂಗಳೂರು: ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಭಾಗಿತ್ವದಲ್ಲಿ ವಿಶ್ವ ಮಧುಮೇಹ ದಿನದ ಅಂಗವಾಗಿ ದಿನಾಂಕ 13.11.2022 ರಂದು ಮ್ಯಾರಥಾನ್ – ‘ಮುಲ್ಲರ್‌ರನ್’ ಆಯೋಜಿಸಿದೆ.

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಘಟಕವಾಗಿರುವ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯು 1985 ರಿಂದ ರೋಗಿಗಳಿಗೆ ಉತ್ತಮ ಹೋಮಿಯೋಪಥಿ ಚಿಕಿತ್ಸೆಯನ್ನು ನೀಡುತ್ತಾ ಬಂದಿದೆ. ಆಸ್ಪತ್ರೆಯು ವಿವಿಧ ವಿಶೇಷತೆಗಳಲ್ಲಿ ಹೊರೊರೋಗಿ ವಿಭಾಗಗಳೊಂದಿಗೆ ಕಾರ್ಯ ನಿರ್ವಹಿಸುತ್ತಿದ್ದು, 24×7 ಒಳರೋಗಿ ವಿಭಾಗ, ಯೋಗ ಮತ್ತು ಪ್ರಕೃತಿ ಚಿಕಿತ್ಸೆ, ಸಮಾಲೋಚನೆ, ಫಿಸಿಯೋಥೆರಪಿ, ಎಕ್ಸ್-ರೇ ಮತ್ತು ಪ್ರಯೋಗಾಲಯ ಸೌಲಭ್ಯದೊಂದಿಗೆ ಆರೋಗ್ಯ ಸೇವೆಯನ್ನು ಒದಗಿಸುತ್ತಾ ಇದೆ. ಫಾದರ್ ಮುಲ್ಲರ್ ಹೋಮಿಯೋಪಥಿ ಆಸ್ಪತ್ರೆಯು ವಿವಿಧ ಆರೋಗ್ಯ ಶಿಬಿರ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದು ಇದಕ್ಕೆ ಪೂರಕವಾಗುವಂತೆ ವಿಶ್ವ ಮಧುಮೇಹ ದಿನದ ಅಂಗವಾಗಿ ‘ಮುಲ್ಲರ್-ರನ್ನ್’ ಮ್ಯಾರಥಾನ್ ಓಟವನ್ನು ಆಯೋಜಿಸಿದೆ.

ಇದರಲ್ಲಿ 5 ಕಿ.ಮೀ ಹಾಗೂ 15 ಕಿ.ಮೀಗಳ ಎರಡು ವಿಭಾಗವಿದ್ದು, 5 ಕಿ.ಮೀಟರ್ ಓಟವು ಫಾದರ್ ಮುಲ್ಲರ್ ಹೋಮಿಯೋಪಥಿ ಕ್ಯಾಂಪಸ್‌ನಿಂದ ಬೆಳಿಗ್ಗೆ 7.15 ಗಂಟೆಗೆ ಪ್ರಾರಂಭಗೊಂಡು ಕುತ್ತಾರ್ ಮಾರ್ಗವಾಗಿ ಹಿಂತಿರುಗಿ ಫಾದರ್ ಮುಲ್ಲರ್ ಹೋಮಿಯೋಪಥಿ ಕ್ಯಾಂಪಸ್‌ನಲ್ಲಿ ಮುಕ್ತಾಯಗೊಳ್ಳುವುದು. 15 ಕಿ.ಮೀ ಓಟವು ಬೆಳಿಗ್ಗೆ 6.30 ಗಂಟೆಗೆ ಫಾದರ್ ಮುಲ್ಲರ್ ಹೋಮಿಯೋಪಥಿ ದೇರಳಕಟ್ಟೆ ಕ್ಯಾಂಪಸ್‌ನಿಂದ ಪ್ರಾರಂಭಗೊಂಡು  ಕುತ್ತಾರ್, ತೊಕ್ಕೊಟ್ಟು, ಬೀರಿ, ಮಡ್ಯಾರ್ ಮಾರ್ಗವಾಗಿ ಕ್ಯಾಂಪಸ್‌ನಲ್ಲಿ ಮುಕ್ತಾಯಗೊಳ್ಳುವುದು.

ಮಂಗಳೂರಿನ ಸಂಚಾರಿ ಸಹಾಯಕ ಪೋಲಿಸ್ ಆಯುಕ್ತರಾದ ಗೀತಾ ಕುಲಕರ್ಣಿಯವರು ಈ ಮ್ಯಾರಥಾನ್‌ಅನ್ನು ಉದ್ಘಾಟಿಸಲಿರುವರು. ಫಾದರ್ಮು ಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕರಾದ ವಂದನೀಯ ರಿಚರ್ಡ್ ಅಲೋಶಿಯಸ್ ಕುವೆಲ್ಲೊರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವರು. ಈ ಮ್ಯಾರಥಾನ್ ರನ್ನ್ಗೆ 800 ಕ್ಕೂ ಹೆಚ್ಚು ಮ್ಯಾರಥಾನ್ ಓಟಗಾರರು ನೋಂದಾಯಿಸಿಕೊಂಡಿರುವರು. ಈ ಎರಡು ವಿಭಾಗಗಳ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನದ ವಿಜೇತರಿಗೆ ನಗದು ಬಹುಮಾನ, ಆರೋಗ್ಯ ತಪಾಸಣೆ ವೌಚರ್ ಹಾಗೂ ಗಿಫ್ಟ್ ಹ್ಯಾಂಪರ್‌ಗಳನ್ನೊಳಗೊಂಡ ಒಟ್ಟು ಸುಮಾರು ಒಂದು ಲಕ್ಷ ರೂಪಾಯಿ ಮೌಲ್ಯದ ಬಹುಮಾನಗಳನ್ನು ನೀಡಲಾಗುವುದು. ಹಾಗೂ ಎಲ್ಲಾ ಮ್ಯಾರಥಾನ್ ಫಿನಿಶರ್‌ಗಳಿಗೆ ಅವರ ಭಾಗವಹಿಸುವಿಕೆಗಾಗಿ ಪ್ರಮಾಣ ಪತ್ರ ನೀಡಿ ಗೌರವಿಸಲಾಗುವುದು.

ಮ್ಯಾರಥಾನ್ ಓಟದ ಜೊತೆಗೆ ವಿಶ್ವ ಮಧುಮೇಹ ದಿನದ ಅಂಗವಾಗಿ ಫಾದರ್ ಮುಲ್ಲರ್ ಹೋಮಿಯೋಫಥಿ ಆಸ್ಪತ್ರೆಯ ಹೊರರೋಗಿ ವಿಭಾಗದಲ್ಲಿ ಮಧುಮೇಹ ಮತ್ತು ಆಹಾರ ಪದ್ಧತಿಯ ಬಗ್ಗೆ ನವಂಬರ್ 14ರಿಂದ 19 ರ ವರೆಗೆ ಬೆಳಿಗ್ಗೆ 9.00ರಿಂದ ಸಾಯಂಕಾಲ 4ರವರೆಗೆ ಒಂದು ವಾರದ ಆರೋಗ್ಯ ಶಿಬಿರ ಮತ್ತು ಮಾಹಿತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಹಾಗೂ ಈ ಶಿಬಿರದಲ್ಲಿ ಉಚಿತ ಶುಗರ್ ಪರೀಕ್ಷೆ ಹಾಗೂ ಮಧುಮೇಹಕ್ಕೆ ಸಂಬಂಧಿಸಿದ ಪರೀಕ್ಷೆಗಳನ್ನು 50% ರಿಯಾಯಿತಿ ದರದಲ್ಲಿ ಮಾಡಲಾಗುವುದು.

ಪತ್ರಿಕಾ ಗೋಷ್ಟಿಯಲ್ಲಿ ಹಾಜರಿರುವ ಸದಸ್ಯರು :

ವಂದನೀಯ ರಿಚರ್ಡ್ ಅಲೋಶಿಯಸ್ ಕುವೆಲ್ಲೊ,ನಿರ್ದೇಶಕರು ಫಾದರ್ ಮುಲ್ಲರ್ ಸೇವಾ ಸಂಸ್ಥೆ, ವಂದನೀಯ ರೋಶನ್ ಕ್ರಾಸ್ತ, ಆಡಳಿತಾಧಿಕಾರಿ,
ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಡಾ. ಇ.ಎಸ್.ಜೆ. ಪ್ರಭು ಕಿರಣ್, ಪ್ರಾಂಶುಪಾಲರು ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ, ಡಾ. ವಿಲ್ಮಾ ಮೀರಾ ಡಿ’ಸೋಜ, ಉಪಪ್ರಾಂಶುಪಾಲರು, ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ, ಡಾ. ಗಿರೀಶ್ ನಾವಡ ಯು. ಕೆ., ವೈದ್ಯಕೀಯ ಅಧೀಕ್ಷಕರು, ಫಾದರ್ ಮುಲ್ಲರ್ಹೋ ಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ, ಡಾ. ಸೂರಜ್ ಕೆ.ವಿ., ಕಾರ್ಯಕ್ರಮ ಸಂಯೋಜಕರು, ಡಾ. ದೀರಜ್ ಫೆರ್ನಾಂಡಿಸಿ, ಫಾದರ್ ಮುಲ್ಲರ್ ಹೋಮಿಯೋಪಥಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರು, ಡಾ. ಅನುಷ ಜಿ. ಎಸ್., ಸಂಯೋಜಕರು, ಮಾಧ್ಯಮ
ಸಮಿತಿ.

Ashika S

Recent Posts

ಪ್ರವಾಹಕ್ಕೆ ತತ್ತರಿಸಿ ಹೋದ ಅಫ್ಗಾನಿಸ್ತಾನ : 200ಕ್ಕೂ ಹೆಚ್ಚು ಜನ ಬಲಿ

ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ. ಈ ಪ್ರವಾಹದಿಂದಾಗಿ ಸುಮಾರು 200ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ ಎಂದು ವಿಶ್ವಸಂಸ್ಥೆ ಶನಿವಾರ…

16 mins ago

ಫ್ಲೈಯಿಂಗ್ ಎಲೆಕ್ಟ್ರಿಕ್ ಟ್ಯಾಕ್ಸಿ ನಿರ್ಮಿಸಲು ಮುಂದಾದ ಮದ್ರಾಸ್ ಐಐಟಿ-ಶ್ಲಾಘಿಸಿದ ಆನಂದ್ ಮಹೀಂದ್ರಾ

ಎಲೆಕ್ಟ್ರಿಕ್ ಫ್ಲೈಯಿಂಗ್ ಟ್ಯಾಕ್ಸಿಯನ್ನು ಅಭಿವೃದ್ಧಿಪಡಿಸುತ್ತಿರುವ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್‍ನ್ನು ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು…

27 mins ago

ಜಮ್ಮು –ಕಾಶ್ಮೀರ : ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್)…

37 mins ago

ನೂಕುನುಗ್ಗಲಿನಲ್ಲೂ ಪಾದಯಾತ್ರೆ ಹೊರಟ ಭಕ್ತರು : ವಿಡಿಯೋ ವೈರಲ್‌

ಯಮುನೋತ್ರಿ, ಗಂಗೋತ್ರಿ, ಕೇದರ್‌ನಾಥ್‌ ಮತ್ತು ಬದರಿನಾಥ್‌ ಪವಿತ್ರ ಚಾರ್‌ ಧಾಮ್‌ ಯಾತ್ರೆಯ ಹಿನ್ನಲೆಯಲ್ಲಿ ಅಪಾರ ಪ್ರಮಾಣದ ಭಕ್ತರು ಜಮಾಯಿಸಿದ ಪರಿಣಾಮ…

56 mins ago

ಕೆಂಪು ಲಿಪ್​ ಸ್ಟಿಕ್ ಬಳಕೆ ಮೇಲೆ ನಿಷೇಧ ವಿಧಿಸಿದ ಉತ್ತರ ಕೊರಿಯಾ: ಹಚ್ಚಿದರೆ ಕಠಿಣ ಶಿಕ್ಷೆ!

ಮಹಿಳೆಯರು ತುಟಿಗೆ ಹಚ್ಚುವ ಕೆಂಪು ಲಿಪ್​  ಸ್ಟಿಕ್ ಬಳಕೆಯ ಮೇಲೆ ಉತ್ತರ ಕೊರಿಯಾದಲ್ಲಿ ಕಟ್ಟುನಿಟ್ಟಾದ ನಿಷೇಧ ವಿಧಿಸಿದೆ.

57 mins ago

ಬಸವೇಶ್ವರ ಜಾತ್ರೆ: ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

ಜಿಲ್ಲೆಯ ಸೊನ್ನ ಗ್ರಾಮದ ಶಿವುಕುಮಾರ ಮಾಸ್ತಾರ ದಂಪತಿಗಳ ಸಹಾಯಾರ್ಥದೊಂದಿಗೆ ಗ್ರಾಮದ ಸುಮಾರು 200 ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ ವಿಶ್ವರಾಧ್ಯ…

1 hour ago