News Karnataka Kannada
Thursday, May 02 2024
ಮಂಗಳೂರು

ಮಂಗಳೂರು: ಸಮಾಜದಲ್ಲಿ ಅರಿವು ಮೂಡಿಸುವಲ್ಲಿ ಮಾಧ್ಯಮಗಳ ಪಾತ್ರ ಮಹತ್ವದ್ದು- ರವಿ ಕುಮಾರ್ ಎಂ.ಆರ್

Media has an important role to play in creating awareness in the society: Ravi Kumar M.R.
Photo Credit : By Author

ಮಂಗಳೂರು: ಸಮಾಜದ ಅಭಿವೃದ್ಧಿಯಲ್ಲಿ ಪತ್ರಿಕಾ ರಂಗ ಜನರಲ್ಲಿ ಅರಿವು ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾ ಬಂದಿದೆ ಎಂದು ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ತಿಳಿಸಿದ್ದಾರೆ.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಿಕಾ ಭವನ ಮತ್ತು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಹಮ್ಮಿಕೊಂಡಿರುವ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ನಗರದ ಪತ್ರಿಕಾ ಭವನದಲ್ಲಿಂದು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಮಾಧ್ಯಮಗಳು ಸಮಾಜದಲ್ಲಿ ಜನರಿಗೆ ಮಾಹಿತಿ ನೀಡುವ ಮೂಲಕ ಅತ್ಯಂತ ಪ್ರಭಾವ ಶಾಲಿಯಾಗಿ ಜನರ ನಡುವೆ ಇದೆ.ಜನರ ಸಮಸ್ಯೆ ಪರಿಹಾರದ ನಿಟ್ಟಿನಲ್ಲಿ, ಸಂವಿಧಾನದ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದ ಜೊತೆ ಪತ್ರಿಕಾರಂಗ ಮಹತ್ವವನ್ನು ಪಡೆದಿದೆ.ದ.ಕ.ಜಿಲ್ಲಾ ಪತ್ರ ಕರ್ತರ ಸಂಘ ಸಮಾಜ ಮುಖಿ ಕಾರ್ಯಕ್ರಮದಲ್ಲಿ ತೊಡಗಿರುವುದು ಶ್ಲಾಘನೀಯ ಎಂದು ರವಿಕುಮಾರ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಪ್ರೊಫೆಸರ್ ಡಾ.ಅನಂತ ಪ್ರಭು ಡಿಜಿಟಲ್ ತಂತ್ರಜ್ಞಾನದಲ್ಲಿ ಸುರಕ್ಷಾ ವಿಧಾನಗಳ (ಸುರಕ್ಷತಾ ಸಾಧನಗಳು) ಬಗ್ಗ ಉಪನ್ಯಾಸ ನೀಡಿದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಮಾಧ್ಯಮ ಅಕಾಡೆಮಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ,ಪತ್ರಿಕಾ ಭವನದ ಅಧ್ಯಕ್ಷ ರಾಮಕೃಷ್ಣ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷಅನ್ನು ಮಂಗಳೂರು, ದ.ಕ.ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ರಾಜ್ಯ ಸಮಿತಿ ಸದಸ್ಯ ಇಬ್ರಾಹಿಂ ಅಡ್ಕಸ್ಥಳ ಮೊದಲಾದವರು ಉಪಸ್ಥಿತರಿದ್ದರು.

ರಾಷ್ಟ್ರೀಯ ಪತ್ರಕರ್ತರ ಒಕ್ಕೂಟದ ಕಾರ್ಯಕಾರಿ ಸಮಿತಿ ಸದಸ್ಯ ಪಿ.ಬಿ. ಹರೀಶ್ ರೈ ಕಾರ್ಯ ಕ್ರಮ ನಿರೂಪಿಸಿದರು. ದ.ಕ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು