ಮಂಗಳೂರು,ಆ.20(ಕ.ವಾ): ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ .ಸುನಿಲ್ ಕುಮಾರ್ ಅವರು ಆ. 20ರ ಶನಿವಾರ ನಗರದ ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ಸರ್ಕಾರದಿಂದ ವಿಶೇಷವಾಗಿ ನೇರ ನೇಮಕಾತಿಯಾದ 111 ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ, ಪೌರ ಕಾರ್ಮಿಕ ಗೃಹ ಭಾಗ್ಯ ಯೋಜನೆಯಡಿ ಆಯ್ಕೆಯಾದ 14 ಪೌರ ಕಾರ್ಮಿಕರಿಗೆ ಹಕ್ಕು ಪತ್ರ ಹಾಗೂ 64 ಪೌರ ಕಾರ್ಮಿಕರಿಗೆ ಖಾಯಂಗೊಳಿಸಿದ ಆದೇಶ ಪತ್ರವನ್ನು ನೀಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಡಿ. ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ಭಾಗವಹಿಸಿದ್ದರು.