News Karnataka Kannada
Thursday, May 02 2024
ಮಂಗಳೂರು

ಮಂಗಳೂರು: ತವರು ನೆಲಕ್ಕೆ ಆಗಮಿಸಿದ ಮಿಸ್ ಇಂಡಿಯಾ ಸಿನಿ ಶೆಟ್ಟಿ

Mangaluru: Miss India Cine Shetty arrives at her native place
Photo Credit : Facebook

ಮಂಗಳೂರು: ಮಂಗಳೂರು ಮೂಲದ ಮಿಸ್ ಇಂಡಿಯಾ ವರ್ಲ್ಡ್‍ 2022 ಕಿರೀಟ ಮುಡಿಗೇರಿಸಿಕೊಂಡಿರುವ ಸಿನಿ ಶೆಟ್ಟಿ ಇಂದು ಮಂಗಳೂರಿಗೆ ಆಗಮಿಸಿದ್ದರು. ತವರು ನೆಲಕ್ಕೆ ಸಿನಿ ಶೆಟ್ಟಿ ಕಾಲಿಡುತ್ತಿದ್ದಂತೆಯೇ ಅದ್ಧೂರಿ ಸ್ವಾಗತ ದೊರೆಯಿತು. ಮಂಗಳೂರು ಜನತೆ ಪ್ರೀತಿಯಿಂದಲೇ ಸಿನಿ ಶೆಟ್ಟಿ ಅವರನ್ನು ಬರಮಾಡಿಕೊಂಡು ತನ್ನೂರಿನ ಹುಡುಗಿಯ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡರು.

ಸಿನಿ ಶೆಟ್ಟಿ ಮೂಲತಃ ಉಡುಪಿ ಜಿಲ್ಲೆಯ ಇನ್ನಂಜೆ ಅವರು. ಮಿಸ್ ಇಂಡಿಯಾ ಆದ ಬಳಿಕ ಇದೇ ಮೊದಲ ಬಾರಿಗೆ ಅವರು ಮಂಗಳೂರಿಗೆ ಆಗಮಿಸಿದ್ದರು. ಮಂಗಳೂರಿನ ಜನತೆ ಮನೆ ಮಗಳಿಗೆ ಆರತಿ ಎತ್ತಿ, ಹೂ ಮಾಲೆ ಹಾಕಿ ಸಡಗರದಿಂದಲೇ ಬರಮಾಡಿಕೊಂಡರು. ಕಿರೀಟ ಸಮೇತ ಸಿನಿ ಶೆಟ್ಟಿ ಮಂಗಳೂರಿಗೆ ಆಗಮಿಸಿದ್ದು ವಿಶೇಷವಾಗಿತ್ತು. ಮಿಸ್‍ ಇಂಡಿಯಾ ವರ್ಲ್ದ್ ಕಿರೀಟ ಕಂಡು ಹಲವರು ಸಂಭ್ರಮಿಸಿದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿರದ ಸಿನಿ ಶೆಟ್ಟಿ ತುಳುವಿನಲ್ಲೇ ಕನ್ನಡಿಗರಿಗೆ ಮತ್ತು ಅಭಿಮಾನಿಗಳಿಗೆ ಧನ್ಯವಾದಗಳನ್ನು ಅರ್ಪಿಸಿದರು. ಒಳ್ಳೆಯ ಪಾತ್ರಗಳು ಮತ್ತು ಕಥೆಗಳು ಸಿಕ್ಕರೆ ಸಿನಿಮಾದಲ್ಲಿ ನಟಿಸುವುದಾಗಿತೂ ಅವರು ತಿಳಿಸಿದರು. ಆನಂತರ ಅವರು ಕಟೀಲು ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು