Categories: ಮಂಗಳೂರು

ಮಂಗಳೂರು: ಉದಯಪುರ ಹತ್ಯೆ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಎಂದು ಯುಟಿ ಖಾದರ್

ಮಂಗಳೂರು: ಉದಯಪುರದಲ್ಲಿ ನಡೆದ ಘಟನೆ ಹೇಯ ಕೃತ್ಯವಾಗಿದೆ. ಕಾನೂನು, ಸುವ್ಯವಸ್ಥೆ ಬಗ್ಗೆ ಹೆದರಿಕೆ ಇಲ್ಲದವರಿಂದ ಇಂತಹ ಘಟನೆಗಳು ನಡೆಯುತ್ತಿವೆ. ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಅಲ್ಲದೆ, ಇವರ ಹಿಂದಿರುವ ಜಾಲ ಮತ್ತು ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಯುಟಿ ಖಾದರ್ ಆಗ್ರಹಿಸಿದ್ದಾರೆ.

ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ರಾಜ್ಯದಲ್ಲಿ ಮೂರು ಸರಕಾರಿ ಪಿಯು ಕಾಲೇಜು ಆರಂಭಕ್ಕೆ ಸರ್ಕಾರ ಅನುಮತಿ ನೀಡಿದ್ದು, ಈ ಪೈಕಿ ಒಂದು ಕಾಲೇಜು ದೇರಳಕಟ್ಟೆ ನೇತಾಜಿ ಶುಭಾಶ್ ಚಂದ್ರ ಬೋಸ್ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಆರಂಭವಾಗಲಿದೆ ಎಂದರು. ಈ ಶೈಕ್ಷಣಿಕ ವರ್ಷದಿಂದಲೇ ತರಗತಿಗಳು ಆರಂಭವಾಗಲಿವೆ. ವಿದ್ಯಾರ್ಥಿಗಳ ಸಂಖ್ಯೆಯ ಆಧಾರದ ಮೇಲೆ ಇಲ್ಲಿ ಪಿಯು ಕಾಲೇಜು ಆರಂಭಕ್ಕೆ ಸರ್ಕಾರ ಅನುಮತಿ ನೀಡಿದೆ.

ವಿಧಾನಸಭಾ ಕ್ಷೇತ್ರದ ಅಭಿವೃದ್ದಿಗೆ ಈ ಕಾಲೇಜು ಸಹಕಾರಿಯಾಗಲಿದೆ ಎಂದರು. ಮಳೆಗಾಲದ ಸಮಸ್ಯೆಗಳ ಕುರಿತು ಚರ್ಚಿಸಲು ಜಿಲ್ಲಾಡಳಿತ ಈವರೆಗೆ ಯಾವುದೇ ಸಭೆಗಳನ್ನು ಕರೆದಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಶೀಘ್ರ ವಿಪತ್ತು ನಿರ್ವಹಣಾ ಸಮಿತಿಯ ಸಭೆ ಕರೆದು ಮಳೆಗಾಲದ ಸಮಸ್ಯೆಗಳನ್ನು ಸುಸೂತ್ರವಾಗಿ ನಿವಾರಿಸುವ ನಿಟ್ಟಿನಲ್ಲಿ ಅಧಿಕಾರಿಗಳಿ ಮಾರ್ಗದರ್ಶನ ನೀಡಬೇಕು ಎಂದು ಒತ್ತಾಯಿಸಿದರು.

ನನ್ನ ವಿಧಾನಸಭಾ ಕ್ಷೇತ್ರದಲ್ಲಿ ಮಳೆಗಾಲ ಮುನ್ನೆಚ್ಚರಿಕೆಯಾಗಿ ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ಸಮಿತಿಗಳನ್ನು ರಚಿಸಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು, ಸಂಘಟನೆಗಳು, ಗ್ರಾಮ ಪಂಚಾಯತ್ ಪ್ರತಿನಿಧಿಗಳನ್ನು ಈ ಸಮಿತಿ ಒಳಗೊಂಡಿದೆ. ಮಳೆಗಾಲದ ಸಮಸ್ಯೆಗಳನ್ನು ಬಗೆಹರಿಸಲು ಕ್ಷೇತ್ರದ ಮೂರು ಕಡೆ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.

ನನ್ನ ಕ್ಷೇತ್ರದ ಅನೇಕ ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಇದನ್ನು ಜಿಲ್ಲಾಧಿಕಾರಿಯವರ ಗಮನಕ್ಕೆ ತರಲಾಗಿದೆ. ಜಿಲ್ಲಾಧಿಕಾರಿಯವರು ಈ ಕುರಿತು ಪರಿಶೀಲಿಸಿ ವರದಿ ನೀಡುವಂತೆ ಎನ್‌ಐಟಿಕೆ ಸುರತ್ಕಲ್‌‌ನ ತಜ್ಞರ ತಂಡಕ್ಕೆ ಮನವಿ ಮಾಡಿದ್ದಾರೆ ಎಂದು ಯು.ಟಿ ಖಾದರ್ ತಿಳಿಸಿದರು. ಸೋಮೇಶ್ವರ ಮತ್ತು ಇತರ ಸಮುದ್ರ ಬದಿಯಲ್ಲಿ ವಾಸಿಸುತ್ತಿರುವವರಿಗೆ ಕಡಲ್ಕೊರೆತದಿಂದಾಗಿ ಸಮಸ್ಯೆ ಎದುರಾಗುತ್ತಿದೆ. ಆದರೆ ಇಂತಹ ಜನರ ಬಗ್ಗೆ ರಾಜ್ಯ ಸರ್ಕಾರಕ್ಕೆ ಯಾವುದೇ ಕಾಳಜಿ ಇಲ್ಲದಾಗಿ. ಕಡಲ್ಕೊರೆತ ತಡೆಗೆ ಯಾವುದೇ ಶಾಶ್ವತ ದಾರಿಗಳನ್ನು ಸರ್ಕಾರ ಹುಡುಕುತ್ತಿಲ್ಲ. ಸಮುದ್ರ ಗೋಡೆಗಳನ್ನು ರಚಿಸಿದರೆ ಈ ಸಮಸ್ಯೆ ನಿಯಂತ್ರಣಕ್ಕೆ ಬರಬಹುದು ಎಂದರು.

Gayathri SG

Recent Posts

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…

21 mins ago

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

32 mins ago

ಮೈಸೂರಿನಲ್ಲಿ ಪರಶುರಾಮ ಜಯಂತಿ ಕಾರ್ಯಕ್ರಮ

ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಪರಶುರಾಮ‌ ಜಯಂತಿ ಅಂಗವಾಗಿ ಚಾಮರಾಜಪುರಂನಲ್ಲಿರುವ ಬ್ರಾಹ್ಮಣ ಯುವ ವೇದಿಕೆ ಕಛೇರಿಯಲ್ಲಿ ಪರಶುರಾಮ ಜಯಂತಿಯನ್ನು…

42 mins ago

ಪಕ್ಷಿಗಳಿಗೆ ಆಹಾರ ನೀಡುತ್ತಿರುವ ಕೆಎಲ್‌ಇ ಸಂಸ್ಥೆಯ ವಿದ್ಯಾರ್ಥಿಗಳು

ವಿದ್ಯಾಕಾಶಿ ಧಾರವಾಡದಲ್ಲಿ ಕೆಎಲ್‌ಇ ಸಂಸ್ಥೆಯ ಬಿಬಿಎ ಕಾಲೇಜಿನ ವಿದ್ಯಾರ್ಥಿಗಳು ಪಕ್ಷಿಗಳಿಗೆ ಆಹಾರ ನೀಡುವ ಕೆಲಸ ಮಾಡುತ್ತಿದ್ದಾರೆ.

53 mins ago

ನರೇಂದ್ರ ದಾಭೋಲ್ಕರ್​ ಹತ್ಯೆ ಕೇಸ್: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಸುಮಾರು 11 ವರ್ಷಗಳ ನಂತರ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ನೀಡಿದೆ. ನ್ಯಾಯಾಲಯ ಇಬ್ಬರು ಆರೋಪಿಗಳನ್ನು…

1 hour ago

ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕಾಗಿ ವ್ಯಕ್ತಿಯ ಹತ್ಯೆ

ನಗರದಲ್ಲಿ ರಾಜಕೀಯ ವೈಷಮ್ಯದ ಹಲ್ಲೆ ಹಾಗೂ ಹತ್ಯೆ ಪ್ರಕರಣಗಳು ಮುಂದುವರಿದಿವೆ. ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ್ದಕ್ಕಾಗಿ ಅಫಜಲಪುರ ತಾಲೂಕಿನ…

1 hour ago