ಮಂಗಳೂರು

ಮಂಗಳೂರು: ಕನ್ನಯ್ಯ ಲಾಲ್ ಹತ್ಯೆಗೈದ ಹಂತಕರಿಗೆ ಮರಣ ದಂಡನೆ ವಿಧಿಸಲು ಶಾಸಕ ವೇದವ್ಯಾಸ್ ಕಾಮತ್ ಆಗ್ರಹ

ಮಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಬಡ ಟೈಲರ್ ಕನ್ನಯ್ಯ ಲಾಲ್ ಹತ್ಯೆಗೈದು ಪ್ರಧಾನಮಂತ್ರಿಗಳಿಗೆ ಬೆದರಿಕೆಯೊಡ್ಡಿದ ಹಂತಕರಿಗೆ ಮರಣ ದಂಡನೆ ವಿಧಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಕುಕೃತ್ಯ ಎಸಗುವವರಿಗೆ ಎಚ್ಚರಿಕೆಯ ಸಂದೇಶ ನೀಡಬೇಕೆಂದು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಆಗ್ರಹಿಸಿದ್ದಾರೆ.

ಮತಾಂಧ ಮನೋಭಾವ ದೇಶದ ಆಂತರಿಕ ಭದ್ರತೆಗೆ ಸವಾಲಾಗಿ ಪರಿಣಮಿಸಿದೆ. ಇಂತಹ ಭಯೋತ್ಪಾದಕ ಕೃತ್ಯಗಳನ್ನು ರಾಜಕೀಯ ದೃಷ್ಟಿಯಿಂದ ಖಂಡಿಸದಿರುವ ನಾಯಕರ ಓಲೈಕೆಯ ರಾಜಕಾರಣದಿಂದ ಇಂತಹ ಕೃತ್ಯಗಳು ಮರುಕಳಿಸುತ್ತಿವೆ ಎಂದು ಹೇಳಿದ್ದಾರೆ.

ಕನ್ನಯ್ಯ ಲಾಲ್ ಸಾವಿಗೆ ರಾಜಸ್ಥಾನ ಸರಕಾರವೇ ನೇರ ಕಾರಣ. ಜೀವ ಬೆದರಿಕೆಯಿರುವ ಬಗ್ಗೆ ಕನ್ನಯ್ಯ ಲಾಲ್ ದೂರು ನೀಡಿದ್ದರೂ ಸೂಕ್ತ ಭದ್ರತೆ ಕಲ್ಪಿಸದ ರಾಜಸ್ಥಾನ ಸರಕಾರ ಘಟನೆಗೆ ನೇರ ಹೊಣೆಯಾಗಿದೆ. ಹಿಂದುಗಳ ಜೀವವನ್ನು ತೃಣದಂತೆ ಕಾಣುವ ಕಾಂಗ್ರೇಸ್ ನಾಯಕರು ಈ ಘಟನೆಗೆ ಜವಬ್ದಾರರು ಎಂದು ಶಾಸಕ ಕಾಮತ್ ಹೇಳಿದ್ದಾರೆ.

Sneha Gowda

Recent Posts

ಪ್ಯಾಶನ್ ಫ್ರೂಟ್: ಇದರಲ್ಲಿರುವ ಆರೋಗ್ಯಕರ ಪ್ರಯೋಜನಗಳೇನು?

ಈ ಹಣ್ಣು ಹುಳಿ ರುಚಿಯನ್ನು ಹೊಂದಿದ್ದರೂ ಆರೋಗ್ಯ ವಿಚಾರದಲ್ಲಿ ಸಿಹಿ ಗುಣಗಳನ್ನು ಹೊಂದಿದೆ. ಇದನ್ನು ಬೆಳೆಯಲು ಉಷ್ಣ ವಲಯ ಅತ್ಯುತ್ತಮ.…

8 mins ago

ರಾಶಿ ಭವಿಷ್ಯ: ಲಕ್ಷ್ಮೀ ನಾರಾಯಣ ಯೋಗ ಯಾವ ರಾಶಿಗೆ ಲಾಭ? ಯಾರಿಗೆ ನಷ್ಟ?

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ನೀವು ಧನು, ಮಕರ, ಕುಂಭ, ಮೀನ ರಾಶಿಯವರಾಗಿದ್ದರೆ, ಮೇ 16…

21 mins ago

ಬ್ಯಾಂಕ್ ಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬೇಡಿ: ಡಿಸಿ

ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…

8 hours ago

ಕೇರಳದ 9 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ  ಬಹುತೇಕ ಭಾಗಗಳಲ್ಲಿ  ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

9 hours ago

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ: ಬಾವಲಿ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.

9 hours ago

ಬಿರುಗಾಳಿಯೊಂದಿಗೆ ಸುರಿದ ಮಳೆ: ಮಾವು, ಪಪ್ಪಾಯಿ ಬೆಳೆಗೆ ಹಾನಿ

ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.

9 hours ago