Categories: ಮಂಗಳೂರು

ಮಂಗಳೂರು: ಕಸ ವಿಲೇವಾರಿಗೆ ಇಂದಿನಿಂದಲೇ ಅಗತ್ಯ ಕ್ರಮಕ್ಕೆ ಶಾಸಕರ ಸೂಚನೆ

ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯ120 ಚಾಲಕರು, ಕಸ ಸಂಗ್ರಹ ಮಾಡುವವರು ಸೇರಿದಂತೆ 620 ಹಾಗೂ ವೆಟ್ ವೆಲ್ ಹಾಗೂ ಯುಜಿಡಿಯಲ್ಲಿ ಕೆಲಸ ಮಾಡುವ 250 ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ನಗರದಲ್ಲಿ ಕಸ ವಿಲೇವಾರಿಯ ಸಮಸ್ಯೆ ಎದುರಾಗಿದ್ದು, ಅದನ್ನು ಸೂಕ್ತ ರೀತಿಯಲ್ಲಿ ಪರಿಹರಿಸಲು ಶಾಸಕರಾದ ಡಿ. ವೇದವ್ಯಾಸ್ ಕಾಮತ್ ಹಾಗೂ ಭರತ್ ಶೆಟ್ಟಿ, ಪಾಲಿಕೆ ಮೇಯರ್ ಜಯಾನಂದ ಅಂಚನ್ ಅವರ ನೇತೃತ್ವದಲ್ಲಿ ಮಾ.16ರ ಗುರುವಾರ ಸಂಜೆ ಸ‌ಭೆ ನಡೆಯಿತು.

ಬೆಂಗಳೂರು ಮಟ್ಟದಲ್ಲಿ ಈಡೇರಬೇಕಾದ ಬೇಡಿಕೆಗಳಿಗೆ ಸೋಮವಾರದಿಂದ ಸಿಬ್ಬಂದಿ ಪ್ರತಿಭಟನೆ ನಡೆಸುತ್ತಿರುವುದರಿಂದ ಮಂಗಳೂರು ನಗರದ ಮನೆ ಮನೆ ಕಸ ಸಂಗ್ರಹಕ್ಕೆ ಸಮಸ್ಯೆ ಉಂಟಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ವ್ಯವಸ್ಥಿತವಾಗಿ ತ್ಯಾಜ್ಯ ವಿಲೇವಾರಿಗೆ ಮಾ.17ರ ಶುಕ್ರವಾರದಿಂದಲೇ ಆ್ಯಂಟಿನಿ ವೆಸ್ಟ್ ಮ್ಯಾನೇಜ್ ಮೆಂಟ್ ನಿಂದ ಹೆಚ್ಚುವರಿಯಾಗಿ ಸಿಬ್ಬಂದಿ ನಿಯೋಜನೆ ಮಾಡುವಂತೆ ಅವರು ಸೂಚನೆ ನೀಡಿದರು.

ಇಂತಹ ಸಂದರ್ಭಗಳಲ್ಲಿ ಏಜೆನ್ಸಿಯವರು ಅಗತ್ಯ ವ್ಯವಸ್ಥೆ ಮಾಡಬೇಕು. ಪ್ರತಿಭಟನೆ ಅಂತ್ಯವಾಗುವವರಿಗೆ ಬೇಕಾದ ಸಿಬ್ಬಂದಿ ನಿಯೋಜನೆ ಮಾಡಬೇಕು. ಮನೆ ಮನೆಯ ಕಸ ಸಂಗ್ರಹಣೆಗೆ ಬೇಕಾದಷ್ಟು ಸಿಬ್ಬಂದಿ ಹಾಗೂ ವಾಹನ ಚಾಲಕರನ್ನು ವ್ಯವಸ್ಥೆ ಮಾಡಬೇಕು. ನಗರದ ಜನರ ಸ್ವಚ್ಛತೆ ಸಲುವಾಗಿ ಅಗತ್ಯ ಕ್ರಮಗಳು ಆಗಬೇಕು. ವೆಟ್ ವೆಲ್ ಹಾಗೂ ಎಸ್ಟಿಪಿಗಳನ್ನು ಸುವ್ಯವಸ್ಥಿತವಾಗಿ ನಡೆಸಬೇಕು ಎಂದು ಸೂಚನೆ ನೀಡಿದರು.

ಸುಮಾರು 80 ಸಿಬ್ಬಂದಿಗಳನ್ನು ಈ ಕಸ ವಿಲೇವಾರಿಗೆ ನಿಯೋಜನೆ ಮಾಡುವದಕ್ಕೆ ಮುಂದಾಗಬೇಕು ಎಂದು ಆ್ಯಂಟನಿ ವೆಸ್ಟ್ ಮ್ಯಾನೇಜ್ ಮೆಂಟ್ ಸೆಲ್ ವ್ಯವಸ್ಥೆ ಮಾಡಿಕೊಳ್ಳಬೇಕು. ವೆಟ್ ವೆಲ್ ನಿರ್ವಹಣೆಗೆ ತುರ್ತಾಗಿ ಸಿಬ್ಬಂದಿ ನಿಯೋಜನೆ ಮಾಡಬೇಕು. 20 ರಿಂದ 30 ವಾಹನಗಳಿಂದ ಕಸವನ್ನು ಸಂಗ್ರಹ ಮಾಡಲು ಸ್ಥಳೀಯ ಪಾಲಿಕೆ ಸದಸ್ಯರ ಸಹಕಾರ ಪಡೆದು ಕಸ ವಿಲೇವಾರಿಗೆ ಶುಕ್ರವಾರದಿಂದಲೇ ಕಾರ್ಯ ನಿರ್ವಹಿಸಬೇಕು. ಕನಿಷ್ಠ 60 ವಾಹನಗಳಲ್ಲಿ ಕಸ ಸಂಗ್ರಹಣೆಗೆ ಬೇಕಾದ ಸಿದ್ಧತೆ ನಡೆಯಬೇಕು ಎಂದು ಶಾಸಕರು ಹಾಗೂ ಪಾಲಿಕೆ ಮೇಯರ್ ಸೂಚನೆ ನೀಡಿದರು.

ಸಿಬ್ಬಂದಿಗಳು ಕೆಲಸ ಸಮಯದಲ್ಲಿ ಏನಾದರೂ ಸಮಸ್ಯೆ ಉಂಟಾದರೆ ಪೊಲೀಸರ ಸಹಕಾರ ಪಡೆದು ಕಸ ವಿಲೇವಾರಿಗೆ ಕಾರ್ಯ ನಡೆಸಬೇಕು. ವಿಶೇಷವಾಗಿ ವೆಟ್ ವೆಲ್ ಹಾಗೂ ಎಸ್ಟಿಪಿಗಳನ್ನು ಚಾಲನೆ ಹಾಗೂ ನಿರ್ವಹಣೆಗೆ ತುರ್ತು ಕ್ರಮ ಜರುಗಿಸಬೇಕು ಎಂದು ತಿಳಿಸಿದರು.

ಪಾಲಿಕೆ ಉಪ ಮೇಯರ್ ಪೂರ್ಣಿಮಾ ವೇದಿಕೆಯಲ್ಲಿದ್ದರು. ಮಹಾನಗರ ಪಾಲಿಕೆ ಸದಸ್ಯರು ಸಭೆಯಲ್ಲಿದ್ದರು.

Sneha Gowda

Recent Posts

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

5 mins ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

23 mins ago

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

46 mins ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

1 hour ago

ನಿಮ್ಮ ಡಲ್‌ಸ್ಕಿನ್‌ಗೆ ಇದು ಬೆಸ್ಟ್‌ ಪಾನೀಯ : ಎರಡು ವಾರದಲ್ಲೆ ಉತ್ತಮ ರಿಸಲ್ಟ್‌

ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್‌ಸ್ಕಿನ್‌ ಇರುವವರೂ…

1 hour ago

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

2 hours ago