News Karnataka Kannada
Friday, May 03 2024
ಮಂಗಳೂರು

ಮಂಗಳೂರು: ಸಿಇಐಆರ್ ಪೋರ್ಟಲ್ ಮೂಲಕ ಕಳವಾದ ಮೊಬೈಲ್‌ಗಳ ಹಸ್ತಾಂತರ

Mobile phones stolen through CEIR portal handed over
Photo Credit : News Kannada

ಮಂಗಳೂರು: ಪೊಲೀಸ್ ಕಮಿಷನರಟ್ ವ್ಯಾಪ್ತಿಯಲ್ಲಿ ಕಳೆದುಹೋದ/ಕಳವಾದ 39 ಮೊಬೈಲ್‌ಗಳನ್ನು ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ ಹಚ್ಚಲಾಗಿದ್ದು ಅದನ್ನು ಗುರುವಾರದಂದು ಪೊಲೀಸ್ ಆಯುಕ್ತರು ವಾರಸುದಾರರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ಅವರು, ಕಳೆದ 5 ತಿಂಗಳಲ್ಲಿ ಕಮಿಷನರಟ್ ವ್ಯಾಪ್ತಿಯಲ್ಲಿ 402 ಮಂದಿ ಮೊಬೈಲ್ ಕಳೆದುಕೊಂಡಿರುವ ಬಗ್ಗೆ ದೂರು ನೀಡಿದ್ದಾರೆ. ಆ ಪೈಕಿ 124 ಮೊಬೈಲ್‌ಗಳನ್ನು ಪತ್ತೆ ಹಚ್ಚಲಾಗಿದ್ದು 39 ಮೊಬೈಲ್‌ನ್ನು ಜಪ್ತಿ ಮಾಡಿ ವಾರಸುದಾರರಿಗೆ ಹಸ್ತಾಂತರಿಸಲಾಗುತ್ತಿದೆ. ಇವುಗಳ ಒಟ್ಟು ಮೌಲ್ಯ ಸುಮಾರು 7 ಲ.ರೂ.ಗಳಾಗಿವೆ. ಉಳಿದ ಮೊಬೈಲ್‌ಗಳನ್ನು ಕೂಡ ಶೀಘ್ರದಲ್ಲೇ ಜಪ್ತಿ ಮಾಡಲಾಗುವುದು. ಸಿಇಐಆರ್‌ ಪೋರ್ಟಲ್‌ನ್ನು ಪೊಲೀಸರು ಅಥವಾ ಮೊಬೈಲ್ ಕಳೆದುಕೊಂಡವರು ನೇರವಾಗಿ ಬಳಕೆ ಮಾಡಬಹುದು. ಇದರಿಂದ ಮೊಬೈಲ್ ಪೋನ್ ಪತ್ತೆಗೆ ಹಾಗೂ ಅದರ ಮಾಲೀಕರಿಗೆ ಮರಳಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಕಳ್ಳತನ ಅಥವಾ ಬೇರೆ ಯಾವುದೇ ರೀತಿಯಲ್ಲಿ ಮೊಬೈಲ್ ಫೋನ್ ಕಳೆದುಕೊಂಡರೆ ಅದನ್ನು ಬ್ಲಾಕ್ ಮಾಡಲು ಕೇಂದ್ರ ಸರಕಾರದ ದೂರಸಂಪರ್ಕ ಇಲಾಖೆ ಜಾರಿಗೆ ತಂದಿರುವ ಹೊಸ ವಿಧಾನವೇ ಸಿಇಐಆರ್ ಪೋರ್ಟಲ್. ಮೊಬೈಲ್ ಫೋನ್ ಕಳೆದುಹೋದ ಕೂಡಲೇ ಹತ್ತಿರದ ಪೊಲೀಸ್ ಠಾಣೆಯಲ್ಲಿ ಅಥವಾ ಕೆಎಸ್‌ಪಿ ಆ್ಯಪ್‌ನಲ್ಲಿ ದೂರು ಸಲ್ಲಿಸಿ ಸ್ವೀಕೃತಿ/ ಡಿಜಿಟಲ್ ಇ-ಸ್ವೀಕೃತಿ ಪಡೆದುಕೊಳ್ಳಬೇಕು.

ಕಳೆದುಕೊಂಡಿರುವ ಮೊಬೈಲ್ ನಂಬರ್‌ನ ನಕಲಿ ಸಿಮ್ ಕಾರ್ಡ್‌ನ್ನು ಈ ಹಿಂದೆ ಸೇವೆ ಪಡೆಯುತ್ತಿದ್ದ ಸರ್ವಿಸ್ ಪ್ರೊವೈಡರ್‌ನಿಂದ(ಉದಾ: ಏರ್‌ಟೆಲ್, ಜಿಯೋ, ಬಿಎಸ್‌ಎನ್‌ಎಲ್ ಇತ್ಯಾದಿ) ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಓಟಿಪಿ ಪಡೆಯಲು ಅದನ್ನು ಚಾಲನೆ ಮಾಡಿಟ್ಟುಕೊಳ್ಳಬೇಕು. ಅನಂತರ ಡಿಡಿಡಿ.ಛಿಜಿ.ಜಟ.ಜ್ಜಿ ವೆಬ್‌ಸೈಟ್‌ನಲ್ಲಿ ಕಳೆದುಕೊಂಡ ಮೊಬೈಲ್ ಫೋನ್‌ನ ಮಾಹಿತಿ ನಮೂದಿಸಬೇಕು. ಮಾಹಿತಿ ನಮೂದಿಸಿದ 24 ಗಂಟೆಗಳೊಳಗೆ ಮೊಬೈಲ್‌ಫೋನ್ ಬ್ಲಾಕ್ ಆಗುತ್ತದೆ. ಒಂದು ವೇಳೆ ಮೊಬೈಲ್ ಫೋನ್ ಪತ್ತೆಯಾದರೆ ಇಉಲ್ಕ ಪೋರ್ಟಲ್‌ನಲ್ಲಿ ಲಾಗಿನ್ ಆಗಿ ಅನ್‌ಬ್ಲಾಕ್ ಮಾಡಿ ಉಪಯೋಗಿಸಬಹುದು. ಡಿಸಿಪಿಗಳಾದ ಅಂಶುಕುಮಾರ್, ದಿನೇಶ್ ಕುಮಾರ್, ಎಸಿಪಿ ಪಿ.ಎ ಹೆಗಡೆ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು