ಮಂಗಳೂರು

ಮಂಗಳೂರು: ಸಮುದ್ರ ತೀರದಲ್ಲಿ ಅಣುಕು ರಕ್ಷಣಾ ಕಾರ್ಯಾಚರಣೆ, ಸಿಬ್ಬಂದಿಗೆ ತರಬೇತಿ

ಮಂಗಳೂರು: ಉಚ್ಚಿಲ , ಸೋಮೇಶ್ವರ ಸಮುದ್ರ ತೀರದಲ್ಲಿ ಮುಳುಗಡೆಯಾಗಿರುವ ತೈಲ ಹೊತ್ತಿರುವ ಸಿರಿಯಾ ಹಡಗಿನಿಂದ ತೈಲ ಸೋರಿಕೆಯಾದಲ್ಲಿ ಅಥವಾ ಸೋರಿಕೆಯಾಗದಂತೆ ತಡೆಗಟ್ಟುವ ಉದ್ದೇಶದಿಂದ ಜಿಲ್ಲಾಡಳಿತದಿಂದ ರಕ್ಷಣಾ ತಂಡಗಳ ನೇತೃತ್ವದಲ್ಲಿ ಉಳ್ಳಾಲ ಸಮುದ್ರ ತೀರದಲ್ಲಿ ಅಣುಕು ರಕ್ಷಣಾ ಕಾರ್ಯಾಚರಣೆ ಹಾಗೂ 160 ಮಂದಿ ಸಿಬ್ಬಂದಿಗೆ ತರಬೇತಿ ನಡೆಯಿತು.

ಅಣುಕು ಕಾರ್ಯಾಚರಣೆ ಪ್ರದೇಶಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಮಾತನಾಡಿ, ಜಿಲ್ಲೆಯ ವ್ಯಾಪ್ತಿಯ ಸಮುದ್ರ ತೀರದಲ್ಲಿ ತೈಲ ಹೊತ್ತಿರುವ ಸಿರಿಯಾ ಹಡಗು ಮುಳುಗಡೆ ಹಿನ್ನೆಲೆಯಲ್ಲಿ ರಕ್ಷಣಾ ತಂಡಗಳಿಂದ ಅಣುಕು ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿದೆ.

ಹಡಗಿನೊಳಗಡೆ 160 ಮೆಟ್ರಿಕ್‌ ಟನ್‌ ತೈಲ ದಾಸ್ತಾನು ಹಾಗೂ 60 ಮೆಟ್ರಿಕ್‌ ಟನ್‌ ಹಡಗಿನ ಇಂಜಿನ್‌ ಆಯಿಲ್‌ ಇದೆ. ಈ ಕುರಿತು ಡಿ.ಜೆ ಶಿಪ್ಪಿಂಗ್‌, ಹಡಗು ಮಾಲೀಕರು ಹಾಗೂ ಪ್ರಾಡಕ್ಷನ್‌ ಆಂಡ್‌ ಎಂಡೆಮೆಟಿಕ್‌ ಕ್ಲಬ್‌ ಮುಖಾಂತರ ತೈಲ ಸೋರಿಕೆಯಾಗದ ರೀತಿಯಲ್ಲಿ, ಸುಗಮವಾಗಿ ಹೊರತೆಗೆಯುವ ಕುರಿತು ಯೋಜನೆ ರೂಪಿಸಲಾಗುತ್ತಿದೆ.

ಇವರ ಜೊತೆಗೆ ಕೋಸ್ಟ್‌ ಗಾರ್ಡ್‌, ಕರ್ನಾಟಕ ಸರಕಾರ , ಜಿಲ್ಲಾಡಳಿತ ಸೇರಿದಂತೆ ಇಡೀ ರಕ್ಷಣಾ ತಂಡ ಸಹಕರಿಸುತ್ತಿದೆ. ಹಡಗು ತುಂಡಾಗಿ ತೈಲ ಸೋರಿಕೆಯಾದಲ್ಲಿ ಆಯಿಲ್‌ ಸ್ಪಿಲ್‌ ಕ್ರೈಸಿಸ್‌ ತಂಡ, ತಾಂತ್ರಿಕ ತಜ್ಞರ ಮುಖೇನ ಸಲಹೆ ಪಡೆದು 140 ಮಂದಿಗೆ ತರಬೇತಿಯನ್ನು ನೀಡಲಾಗಿದೆ.

ತೈಲ ಸೋರಿಕೆಯಾದರೂ ಪರಿಸರ ನಾಶವಾಗದ ರೀತಿಯಲ್ಲಿ ಹಾಗೂ ಸೋರಿಕೆಯಾದ ಸಂದರ್ಭ ಜನರಿಗೆ ಅರಿವು ಮೂಡಿಸುವ ಕೆಲಸವನ್ನು ಇಂದಿನ ತರಬೇತಿಯಲ್ಲಿ ಮಾಡಲಾಗಿದೆ. ಹಡಗಿನೊಳಗಡೆ ಇದ್ದಂತಹ 15 ಸಿರಿಯನ್‌ ಗಳು ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ. ಹಡಗಿನೊಳಗಡೆ ಇರುವಂತಹ ತೈಲವನ್ನು ಸುರಕ್ಷಿತವಾಗಿ ಹೊರತೆಗೆದ ನಂತರ ಮುಳುಗಡೆಯ ತನಿಖೆ ನಡೆಯಲಿದೆ ಎಂದರು.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago