News Karnataka Kannada
Monday, May 06 2024
ಮಂಗಳೂರು

ಮಂಗಳೂರು: ತೀವ್ರ ಮಳೆ ಹಿನ್ನಲೆಯಲ್ಲಿ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಸಂಸದರ ಸೂಚನೆ

MPs instructed to take safety measures in the wake of heavy rains
Photo Credit : News Kannada

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಕುರಿತು ದಕ್ಷಿಣ ಕನ್ನಡ ಸಂಸದ  ನಳಿನ್ ಕುಮಾರ್ ಕಟೀಲು ಅವರು ತಮ್ಮ ಕಛೇರಿಯಲ್ಲಿ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಸಂಸದರು ಮಳೆ ನೀರು ಸರಾಗವಾಗಿ ಹರಿದು ಹೋಗಲು ಇರುವ ಅಡೆ ತಡೆಯನ್ನು ನಿವಾರಣೆ ಸೇರಿದಂತೆ ಅಗತ್ಯ ಸುರಕ್ಷ ಕ್ರಮಗಳನ್ನು ಕೈಗೊಳ್ಳವ ನಿಟ್ಟಿನಲ್ಲಿ ಪಾಲಿಕೆಯ ಆಯುಕ್ತರು ಹಾಗೂ ಇಂಜಿನಿಯರೊಂದಿಗೆ ಚರ್ಚಿಸಿ ಅಗತ್ಯ ವ್ಯವಸ್ಥೆ ಕಲ್ಪಿಸಲು ಸೂಚಿಸಿದರು. ರಾಷ್ಟ್ರೀಯ ಹೆದ್ದಾರಿಯ ನೂತನ ಕಾಮಗಾರಿ ನಡೆಯುತ್ತಿರುವ ಸ್ಥಳಗಳಲ್ಲಿ ಮಳೆ ನೀರು ಹರಿಯುವಿಕೆಗೆ ಯಾವುದೇ ತೊಂದರೆಯಾಗದಂತೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ಗಾಳಿ ಮಳೆಯಿಂದ ವಿದ್ಯುತ್ ಕಂಬ ಮುರಿದು ಅನಾಹುತ ಸಂಭವಿಸಿದಲ್ಲಿ ಕೂಡಲೇ ಅಗತ್ಯ ಸುರಕ್ಷಾ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಚಾರ್ಮಡಿ ಘಾಟಿಯಲ್ಲಿ ಭೂಕುಸಿತ ಅಥವಾ ಮರಬಿದ್ದು ರಸ್ತೆ ಸಂಪರ್ಕ ಕಡಿತಗೊಂಡಲ್ಲಿ ಕೂಡಲೇ ತೆರವುಗೊಳಿಸಲು ಕ್ಷಿಪ್ರ ತಂಡವನ್ನು ಸಿದ್ಧವಾಗಿರಿಸುವಂತೆ ರಾಷ್ಟ್ರೀಯ ಹೆದ್ದಾರಿ ವಿಭಾಗದ ಇಂಜಿನಿಯರ್ ರಿಗೆ ಸೂಚಿಸಿದರು.

ಸದರಿ ಸಭೆಯಲ್ಲಿ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು, ಅಪರ ಜಿಲ್ಲಾಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಉಪ ಅರಣ್ಯ ಸಂರಕ್ಷಣಾಧಿಕಾರಿ, ಹೆದ್ದಾರಿ ಭೂಸ್ವಾಧೀನ ಅಧಿಕಾರಿ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಮಹಾನಗರ ಪಾಲಿಕೆ, ರಾಷ್ಟ್ರೀಯ ಹೆದ್ದಾರಿ ವಿಭಾಗಗಳ ಕಾರ್ಯಕಾರಿ ಇಂಜಿನಿಯರ್ ಗಳು ಸೇರಿದಂತೆ ವಿವಿಧ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು