Categories: ಮಂಗಳೂರು

ಮಂಗಳೂರು: ಮುಸ್ಲಿಂ ಸೆಂಟ್ರಲ್ ಕಮಿಟಿ ವತಿಯಿಂದ ಎರಡು ಕುಟುಂಬಗಳಿಗೆ ಪರಿಹಾರ ಘೋಷಣೆ

ಮಂಗಳೂರು: ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮೂರು ಕೊಲೆಗಳ ಬಗ್ಗೆ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ ಅಲ್ ಹಾಜ್ ಕೆ.ಎಸ್. ಮೊಹಮ್ಮದ್ ಮಸೂದ್ ರವರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಯಿತು.
ಈ ಸಭೆಯಲ್ಲಿ ಸರ್ಕಾರದ ವಿಪಕ್ಷ ಉಪನಾಯಕರಾದ ಯು.ಟಿ. ಖಾದರ್ ಮಾಜಿ ಶಾಸಕರಾದ ಮೊಯಿದಿನ್ ಬಾವರವರು ಉಪಸ್ಥಿತರಿದ್ದರು.
ಸಭೆಯಲ್ಲಿ ಸರ್ವ ಸದಸ್ಯರ ಒಮ್ಮತದ ಅಭಿಪ್ರಾಯದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಮೂರು ಅಮಾಯಕರ ಕೊಲೆಯಲ್ಲಿ ಕೇವಲ ಪ್ರವೀಣ್ ಎಂಬ ಬಿಜೆಪಿ ಕಾರ್ಯಕರ್ತನ ಮನೆಗೆ ಮುಖ್ಯ ಮಂತ್ರಿ ಭೇಟಿ ನೀಡಿ 25 ಲಕ್ಷ ಪರಿಹಾರ ನೀಡಿದ್ದು ಉಳಿದ ಇಬ್ಬರು ಅಮಾಯಕ ಮುಸ್ಲಿಮರ ಮನೆಗೆ ಭೇಟಿಯನ್ನು ನೀಡದೆ ಮುಖ್ಯ ಮಂತ್ರಿಯವರ ಅಮಾನವೀಯ ನಿಲುವಿಗೆ ಬೇಸರ ವ್ಯಕ್ತಪಡಿಸಲಾಯಿತು.
ಆದುದರಿಂದ ಮುಸ್ಲಿಂ ಸಮುದಾಯದವರಿಗೆ ಮುಸ್ಲಿಂ ಸೆಂಟ್ರಲ್ ಕಮಿಟಿಯ ನೇತೃತ್ವದಲ್ಲಿ ದಾನಿಗಳಿಂದ ವಂತಿಗೆ ಸಂಗ್ರಹಿಸಿ ಮರಣ ಹೊಂದಿದ ಎರಡೂ ಕುಟುಂಬಕ್ಕೆ ತಲಾ 30 ಲಕ್ಷದಂತೆ ಸಹಾಯ ಧನ ನೀಡುವುದಾಗಿ ಸಭೆಯಲ್ಲಿ ನಿರ್ಣಯಿಸಲಾಯಿತು ಹಾಗೂ ಈ ಬಗ್ಗೆ ಕುಟುಂಬಸ್ಥರಿಗೆ ಕಾನೂನಿನ ವ್ಯವಸ್ಥೆ ಬೇಕಿದ್ದಲ್ಲಿ ಮಾಡಲು ನಿರ್ಣಯಿಸಲಾಯಿತು
ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ತ ನಾಗರಿಕರು ಶಾಂತಿಯನ್ನು ಕಾಪಾಡಬೇಕು ಹಾಗೂ ಮರಣ ಹೊಂದಿದ ಮೂರು ಕುಟುಂಬಸ್ಥರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಪರಮಾತ್ಮನು ನೀಡಲೆಂದು ಅಧ್ಯಕ್ಷರಾದ ಅಲ್ ಹಾಜ್ ಕೆ.ಎಸ್. ಮೊಹಮ್ಮದ್ ಮಸೂದ್ ರವರು ಸಭೆಯಲ್ಲಿ ಸಾಂತ್ವಾನವನ್ನು ನೀಡಿದರು.
ಈ ಸಭೆಯಲ್ಲಿ ಉಪಾಧ್ಯಕ್ಷರುಗಳಾದ  ಹಾಜಿ ಇಬ್ರಾಹಿಂ ಕೋಡಿಜಾಲ್, ಹಾಜಿ ಬಿ.ಎಂ. ಮುಮ್ತಾಜ್ ಅಲಿ, ಕೆ.ಅಶ್ರಫ್, ಸೈಯದ್ ಅಹಮದ್ ಬಾಷ ತಂಙಳ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
photo credit: R Bhat
Ashika S

Recent Posts

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

8 mins ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

18 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

30 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

42 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

45 mins ago

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

60 mins ago