Categories: ಮಂಗಳೂರು

ಮಂಗಳೂರು: ನಿಧಿಲ್ಯಾಂಡ್ ಸಂಸ್ಥೆಯ ನೂತನ ಕಛೇರಿ ಜ.23ರಂದು ಉದ್ಘಾಟನೆ

ಮಂಗಳೂರು: ನಗರದ ಪ್ರಖ್ಯಾತ ಕಟ್ಟಡ ನಿರ್ಮಾಣ ಸಂಸ್ಥೆ ನಿಧಿಲ್ಯಾಂಡ್‌ ಇದರ ನೂತನ ಕಚೇರಿ ಮಂಗಳೂರಿನ ಬಿಜೈಯ ನ್ಯೂ ಬೆರ್ರಿಎನ್ಕ್ಲೇವ್‌ನಲ್ಲಿ ಜ. 23ರ ಸೋಮವಾರದಂದು ಬೆಳಿಗ್ಗೆ 10ಗಂಟೆಗೆ ಉದ್ಘಾಟನೆಗೊಳ್ಳಲಿದೆ.

ಈ ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಇಂಧನ ಇಲಾಖೆ ಸಚಿವರು,ಮತ್ತು ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಉದ್ಘಾಟಿಸಲಿದ್ದು, ದೀಪ ಪ್ರಜ್ವಲನವನ್ನು, ಸಂಸದರು, ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್‌ರವರು ಮಾಡಲಿದ್ದಾರೆ.

ಸಮಾರಂಭದಲ್ಲಿ ಅತಿಥಿಯಾಗಿ ಮಂಗಳೂರು ಶಾಸಕ ಡಿ. ವೇದವ್ಯಾಸ ಕಾಮತ್, ಶಾಸಕ ಭರತ್ ಶೆಟ್ಟಿ ವೈ, ಮಂಗಳೂರು ಉತ್ತರ, ಉಮಾನಾಥ ಕೋಟ್ಯಾನ್, ಮೂಡಬಿದ್ರೆ, ಜಯಾನಂದ ಅಂಚನ್, ಮಹಾ ಪೌರರು, ಮಂಗಳೂರು ನಗರ ಪಾಲಿಕೆ, ರವಿಶಂಕರ್ ಮಿಜಾರ್, ಅದ್ಯಕ್ಷರು, ಮೂಡ, ಬಿ.ರಮಾನಾಥರೈ, ಮಾಜಿ ಸಚಿವರು, ಜೆ. ಆರ್. ಲೋಬೋ, ಮಾಜಿ ಶಾಸಕರು, ಮತ್ತು ಕಾರ್ಪೊರೇಟರ್ ಲ್ಯಾನ್ಸ್ ಲಾಟ್ ಪಿಂಟೊ, ಭಾಗವಹಿಸಲಿದ್ದಾರೆ.

ಮಂಗಳೂರು ಬ್ರಹ್ಮಕುಮಾರಿ ಸಂಸ್ಥೆಯ ಮುಖ್ಯಸ್ಥರಾದ ರಾಜಯೋಗಿನಿ ಬಿ.ಕೆ. ವಿಶ್ವೇಶ್ವರಿ ಜಿ ಯವರು ಸಮಾರಂಭದ ದಿವ್ಯ ಸಾನಿಧ್ಯವನ್ನು ವಹಿಸಲಿದ್ದಾರೆ ಎಂದು ನಿಧಿ ಲ್ಯಾಂಡ್ ಸಂಸ್ಥೆಯ ಪರವಾಗಿ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್. ಕೆ. ಸನಿಲ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Gayathri SG

Recent Posts

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

16 mins ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

43 mins ago

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

59 mins ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

1 hour ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

1 hour ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

2 hours ago