News Karnataka Kannada
Thursday, May 02 2024
ಮಂಗಳೂರು

ಮಂಗಳೂರು: ಯಕ್ಷಗಾನ, ಕೋಲಕ್ಕೆ ನೀತಿಸಂಹಿತೆಯ ನಿರ್ಬಂಧವಿಲ್ಲ- ಜಿಲ್ಲಾಧಿಕಾರಿ ಮಾಹಿತಿ

Mangaluru: No code of conduct restrictions on Yakshagana, Kola, says Dc
Photo Credit : Wikipedia

ಮಂಗಳೂರು: ದಕ್ಷಿಣ ಕನ್ನಡದ ಎಂಟು ಕ್ಷೇತ್ರಗಳಲ್ಲಿ 17,58,647 ಮತದಾರರಿದ್ದು, 8,59,899 ಪುರುಷರು, 8,98,132 ಮಹಿಳೆಯರು ಮತ್ತು 75 ತೃತೀಯ ಲಿಂಗಿಗಳಿದ್ದಾರೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಹೇಳಿದರು.

ಈ ಕುರಿತು ಮಾಹಿತಿ ನೀಡಿರುವ ಅವರು ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಜಿಲ್ಲೆಯ ಪ್ರಮುಖ ಕಲೆ ಯಕ್ಷಗಾನ, ಕೋಲ, ನೇಮ ಸೇರಿದಂತೆ ಯಾವುದೇ ಧಾರ್ಮಿಕ ಆಚರಣೆ, ಕಾರ್ಯಕ್ರಮಗಳಿಗೆ ನಿರ್ಬಂಧ ಇರುವುದಿಲ್ಲ. ಆದರೆ, ಈ ಕಾರ್ಯಕ್ರಮಗಳಲ್ಲಿ ರಾಜಕೀಯ ಮುಖಂಡರು ಭಾಗವಹಿಸುವುದು, ಕಾರ್ಯಕರ್ತರಿಂದ ಪ್ರಚಾರ ಸೇರಿದಂತೆ ದುರುಪಯೋಗ, ಮತದಾರರ ಓಲೈಕೆ ಕಂಡುಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ನಾಮಪತ್ರ ಕುರಿತು: ನಾಮಪತ್ರ ಸಲ್ಲಿಕೆಗೆ ಏಪ್ರಿಲ್ 20 ಕೊನೆಯ ದಿನವಾಗಿದ್ದು, ಏಪ್ರಿಲ್ 21 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 24ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ 10 ರಂದು ಮತದಾನ ಮತ್ತು ಮೇ 13 ರಂದು ಮತ ಎಣಿಕೆ ನಡೆಯಲಿದೆ ಎಂದರು.

ಸಿ ವಿಜಿಲ್‌ ಅಪ್ಲಿಕೇಶನ್‌: ಸಾರ್ವಜನಿಕರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿ ದೂರುಗಳನ್ನು ಸಲ್ಲಿಸಲು ಸಿ- ವಿಜಿಲ್ ಮೊಬೈಲ್ ಆಪ್ ಅಭಿವೃದ್ಧಿಪಡಿಸಲಾಗಿದೆ. ಈ ಆಪ್ ಮೂಲಕ ಜಿಲ್ಲೆಯ ಚುನಾವಣೆಗೆ ಸಂಬಂಧಿಸಿದ ಉಲ್ಲಂಘನೆ ಪ್ರಕರಣಗಳ ಬಗ್ಗೆ ಸಾರ್ವಜನಿಕರು -ಟೋ ಹಾಗೂ ವೀಡಿಯೋ ಮೂಲಕ ದೂರು ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್. ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು