Categories: ಮಂಗಳೂರು

ಮಂಗಳೂರು: ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ವಿಶ್ವವಿದ್ಯಾಲಯಕ್ಕೆ ಸಲಹೆ ನೀಡಿದ ಎನ್ಎಸ್ ಯುಐ

ಮಂಗಳೂರು: ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಮಂಗಳೂರು ವಿಶ್ವವಿದ್ಯಾಲಯಕ್ಕೆ ಸಲಹೆ ನೀಡಿದ ಎನ್ಎಸ್ ಯುಐ. ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ವಿದ್ಯಾರ್ಥಿಗಳು ಬ್ಯಾಕ್ ಲಾಗ್ ವಿಷಯದಲ್ಲಿ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ.

ಇದರಿಂದ ಹಲವಾರು ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಔದ್ಯೋಗಿಕ ಭವಿಷ್ಯ ವ್ಯರ್ಥವಾಗುತ್ತಿದೆ. ಹಾಗಾಗಿ ಮೊನ್ನೆ ಮಂಗಳೂರು ವಿಶ್ವವಿದ್ಯಾನಿಲದ ಉಪಕುಲಪತಿಗಳು ಮತ್ತು ಕುಲಸಚಿವರನ್ನು ಭೇಟಿಯಾಗಿ ಈ ಸಮಸ್ಯೆಯ ಪರಿಹಾರಕ್ಕೆ ಎರಡು ಮಾರ್ಗಗಳನ್ನು ಸೂಚಿಸಿದ್ದಾರೆ.

ಅವುಗಳು ಏನೆಂದು ಕೆಳಗಿನ ಸಾಲುಗಳಲ್ಲಿ ತಿಳಿಸಲಾಗಿದೆ.

  • ಈಗಿರುವ ಪರೀಕ್ಷಾ ಪದ್ಧತಿಯಲ್ಲಿ 6 ನೇ ಸೆಮಿಸ್ಟರ್ ನಲ್ಲಿರುವ ವಿದ್ಯಾರ್ಥಿಗೆ 5 ನೇ ಸೆಮಿಸ್ಟರ್ ನಲ್ಲಿ ಯಾವುದಾದರೂ ವಿಷಯದಲ್ಲಿ ಬ್ಯಾಕ್ ಲಾಗ್ ಇದ್ದರೆ ಅದನ್ನು ಪುನಃ ಬರೆದು ಉತ್ತಿರ್ಣನಾಗಲು ಮುಂದಿನ ವರ್ಷ ಬರುವ ಪರೀಕ್ಷೆಗಳವರೆಗೆ ಕಾಯಬೇಕು ಆದರೆ, ಆ ವಿದ್ಯಾರ್ಥಿಗಳಿಗೆ 6 ನೇ ಸೆಮಿಸ್ಟರ್ ನಲ್ಲಿಯೇ 5 ನೇ ಸೆಮಿಸ್ಟರ್ ನ ವಿಷಯಗಳನ್ನು ಬರೆಯಲು ಅವಕಾಶ ಸಿಕ್ಕರೆ ಆತನ ಒಂದು ವರ್ಷ ಶೈಕ್ಷಣಿಕ ಮತ್ತು ಔದ್ಯೋಗಿಕ ಭವಿಷ್ಯ ಉಳಿದಂತೆ ಆಗುತ್ತದೆ.
  • ವಿದ್ಯಾರ್ಥಿ ತನ್ನ ಕೊನೆಯ ಸೆಮಿಸ್ಟರ್ ನ ಪರೀಕ್ಷೆ ಮುಗಿಸಿಕೊಂಡು ಹೋಗುವಾಗ ಆತನಿಗೆ ವಿಷಯಗಳು ಉಳಿದಿದ್ದರೆ ಕೊನೆಯ ಸೆಮಿಸ್ಟರ್ ಪರೀಕ್ಷೆ ಮುಗಿದ ಕೂಡಲೇ ಆತನ ಗರಿಷ್ಠ 4 ವಿಷಯಗಳ ಪರೀಕ್ಷೆಯನ್ನು ಬರೆಯಲು ಅವಕಾಶ ಕೊಟ್ಟರೆ ವಿದ್ಯಾರ್ಥಿಗಳಿಗೆ ದೊಡ್ಡ ಮಟ್ಟಿಗಿನ ಸಹಾಯ ಸಿಕ್ಕಂತೆ ಆಗುತ್ತದೆ.

ಈ ಮೇಲಿನ ವಿಷಯಗಳನ್ನು ಮಾನ್ಯ ಉಪಕುಲಪತಿಗಳು ಸಂಬಂಧಪಟ್ಟವರಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದು ಇದು ಆದಷ್ಟು ಬೇಗ ಜಾರಿಗೆ ಬಂದು ವಿದ್ಯಾರ್ಥಿಗಳಿಗೆ ಸಹಕಾರಿಯಾಗಲಿ ಎಂದು ಆಶಿಸಿದ್ದಾರೆ.

Sneha Gowda

Recent Posts

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

7 mins ago

ಪ್ರಕಟಣೆಯಾದ ಸಂಶೋಧನಾ ಬರಹಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಇದೆ: ಡಾ. ಸುಧಾಕರ್ ವೈ.ಎನ್

ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…

11 mins ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಪಲಿತಾಂಶ ನಂತರವೇ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು…

21 mins ago

ಮಲ್ಲಮ್ಮ ಜಯಂತಿ ಆಚರಣೆಯ ದಿನ ಅಗೌರವ ತೋರಿದ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ

ಚಿಟಗುಪ್ಪ ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಯ ದಿನದಂದು ಬೇಜವಾಬ್ದಾರಿತನದಿಂದ ವರ್ತಿಸಿ…

26 mins ago

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವು

ಬನಹಟ್ಟಿ ಪಟ್ಟಣದಲ್ಲಿ ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

60 mins ago

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.

1 hour ago