ಮಂಗಳೂರು: ಮಂಗಳೂರಿನ ಪ್ರತಿಷ್ಠಿತ ಹೊಟೇಲ್ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಅಧಿಕಾರಿಯೊಬ್ಬರ ಮೃತ ದೇಹ ಪತ್ತೆಯಾಗಿದೆ.
ನಗರದ ಪ್ರತಿಷ್ಠಿತ ಮೋತಿ ಮಹಲ್ ಹೋಟ್ ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಬ್ಯಾಂಕ್ ಅಧಿಕಾರಿ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯನ್ನು ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್ ನಾಯರ್ ಎಂದು ಗುರುತಿಸಲಾಗಿದೆ.
ಸೆ.10 ರ ಭಾನುವಾರದಂದು ಯುನಿಯನ್ ಬ್ಯಾಂಕ್ ಅಧಿಕಾರಿ ಗೋಪು ಆರ್ ನಾಯರ್ ಅವರು ಮೋತಿ ಮಹಲ್ ಹೊಟೇಲ್ ನಲ್ಲಿ ಉಳಿದುಕೊಂಡಿದ್ದರು. ಆದರೆ ಇಂದು ಮುಂಜಾನೆ 4 ಗಂಟೆಗೆ ಹೊಟೇಲ್ ರೂಮ್ ನಿಂದ ಹೊರ ಹೋಗಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.